ನವದೆಹಲಿ: ಕೇಂದ್ರ ಸರ್ಕಾರದ ಹೊಸ ಕೃಷಿ ಕಾಯ್ದೆ ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ಮುಂದುವರೆದಿದ್ದು, ಇದರ ಮಧ್ಯೆ ಇಂದು 10ನೇ ಸುತ್ತಿನ ಮಾತುಕತೆ ನಡೆಯಲಿದೆ.
ಕೃಷಿ ಸಂಘಟನೆಗಳು ಹಾಗೂ ಕೇಂದ್ರ ಸರ್ಕಾರದ ನಡುವೆ ಈಗಾಗಲೇ ನಡೆದಿರುವ ಎಲ್ಲ ಸಭೆಗಳು ವಿಫಲಗೊಂಡಿರುವ ಕಾರಣ ನಿನ್ನೆ 10ನೇ ಸುತ್ತಿನ ಮಾತುಕತೆಗೆ ದಿನ ನಿಗದಿ ಮಾಡಲಾಗಿತ್ತು. ಈ ಹಿಂದೆ ನಡೆದಿರುವ ಸಭೆಯಲ್ಲಿ ಕೃಷಿ ಕಾನೂನು ರದ್ಧುಗೊಳಿಸುವಂತೆ ವಿವಿಧ ರೈತ ಸಂಘಟನೆಗಳು ಪಟ್ಟು ಹಿಡಿದಿದ್ದು, ಇದಕ್ಕೆ ಕೇಂದ್ರ ಸರ್ಕಾರ ತಯಾರಿಲ್ಲ. ಇದೇ ಕಾರಣಕ್ಕೆ ರೈತ ಸಂಘಟನೆ ಹಾಗೂ ಕೇಂದ್ರದ ನಡುವೆ ಒಮ್ಮತದ ಅಭಿಪ್ರಾಯ ಮೂಡುತ್ತಿಲ್ಲ ಎಂದು ತಿಳಿದು ಬಂದಿದೆ.
ಓದಿ : ರೈತರ ಟ್ರ್ಯಾಕ್ಟರ್ ಪರೇಡ್ಗೆ ಅನುಮತಿ ವಿಚಾರ: ಇಂದು ಸುಪ್ರೀಂಕೋರ್ಟ್ ವಿಚಾರಣೆ
ಇಂದು ಮಧ್ಯಾಹ್ನ 2 ಗಂಟೆಗೆ ದೆಹಲಿಯ ವಿಜ್ಞಾನ ಭವನದಲ್ಲಿ ಸಭೆ ನಡೆಯಲಿದ್ದು, ಬಿಕ್ಕಟ್ಟು ಇತ್ಯರ್ಥವಾಗಲಿದೆ ಎಂದು ಕೇಂದ್ರ ಸರ್ಕಾರ ಹೇಳಿಕೊಂಡಿದೆ. ಇನ್ನು ಹೊಸ ಕೃಷಿ ಕಾನೂನುಗಳ ಕುರಿತು ಸುಪ್ರೀಂಕೋರ್ಟ್ ರಚಿಸಿರುವ ಸಮಿತಿ ತನ್ನ ಮೊದಲ ಸಭೆಯನ್ನು ದೆಹಲಿಯ ಪೂಸಾ ಕ್ಯಾಂಪಸ್‌ನಲ್ಲಿ ಇಂದು ನಡೆಸಲಿದೆ.