ಗಾಜಿಪುರ್: ಕೇಂದ್ರದ ನೂತನ ಮೂರು ಕೃಷಿ ಕಾಯ್ದೆ ವಿರೋಧಿಸಿ ಕಳೆದ 123 ದಿನಗಳಿಂದ ದೆಹಲಿ - ಉತ್ತರ ಪ್ರದೇಶ ಗಡಿಯಲ್ಲಿರುವ ಗಾಜಿಪುರದಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು ಹೋಳಿ ಹಬ್ಬ ಆಚರಣೆ ಮಾಡಿದರು.
ಇದನ್ನೂ ಓದಿ: ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಪಿತ್ತಕೋಶದಲ್ಲಿ ಸಮಸ್ಯೆ
ಹೋಳಿ ಆಚರಣೆ ವೇಳೆ ಹಾಡುತ್ತಾ ಮತ್ತು ನೃತ್ಯ ಮಾಡುತ್ತಾ ಸಂಭ್ರಮಿಸಿದರು. ನಮ್ಮ ಬೇಡಿಕೆಯನ್ನು ಸರ್ಕಾರ ಒಪ್ಪಿಕೊಳ್ಳಬೇಕು ಮತ್ತು ಮೂರು ಕೃಷಿ ಕಾನೂನುಗಳನ್ನು ಹಿಂಪಡೆಯಬೇಕು, ಆ ಬಳಿಕವೇ ನಾವು ಮನೆಗೆ ಹೋಗುತ್ತೇವೆ ಎಂದು ರೈತರು ಹೇಳಿದರು.