ಸೋನಿಪತ್ (ಹರಿಯಾಣ): ನೂತನ ಕೃಷಿ ಕಾಯ್ದೆಗಳಿಗೆ ಕೇಂದ್ರ ಸರ್ಕಾರ ಸಲ್ಲಿಸಿದ್ದ ತಿದ್ದುಪಡಿ ಪ್ರಸ್ತಾವನೆಯನ್ನು ರೈತ ಸಂಘಟನೆಗಳು ತಿರಸ್ಕರಿಸಿವೆ. ಈ ವಿಚಾರವಾಗಿ ನವದೆಹಲಿ, ಹರಿಯಾಣದ ನಡುವಿನ ಸಿಂಘು ಗಡಿಯಲ್ಲಿ ರೈತ ಮುಖಂಡರು ಪ್ರತಿಭಟನೆ ಮುಂದುವರೆಸುವುದಾಗಿ ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು ಮಾತನಾಡಿದ ಕ್ರಾಂತಿಕಾರಿ ಕಿಸಾನ್ ಯೂನಿಯನ್ ಅಧ್ಯಕ್ಷ ದರ್ಶನ್ ಪಾಲ್, ನಾವು ಕೇಂದ್ರ ಸರ್ಕಾರದ ಪ್ರಸ್ತಾವನೆಯನ್ನು ತಿರಸ್ಕರಿಸುತ್ತಿದ್ದೇವೆ. ಡಿಸೆಂಬರ್ 12ರಂದು ದೆಹಲಿ- ಜೈಪುರ ರಾಷ್ಟ್ರೀಯ ಹೆದ್ದಾರಿಯನ್ನು ಬಂದ್ ಮಾಡುತ್ತೇವೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಓದಿ: ಕೃಷಿ ಕಾಯ್ದೆಗಳ ವಿಚಾರದಲ್ಲಿ ರಾಷ್ಟ್ರಪತಿ ಮೇಲೆ ಭರವಸೆಯಿಲ್ಲ : ದಿಗ್ವಿಜಯ್ ಸಿಂಗ್
ಇದರ ಜೊತೆಗೆ ರಿಲಯನ್ಸ್ ಮಾಲ್ಗಳನ್ನು ಬಹಿಷ್ಕಾರ, ಟೋಲ್ ಪ್ಲಾಜಾಗಳಿಗೆ ಬಳಿ ಮುಷ್ಕರ ಮುಂತಾದ ಪ್ರತಿಭಟನಾ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತದೆ ಎಂದು ರೈತ ಮುಖಂಡರು ಹೇಳಿದ್ದಾರೆ. ಇದರ ಜೊತೆಗೆ ಡಿಸೆಂಬರ್ 14ರಿಂದ ರಾಷ್ಟ್ರವ್ಯಾಪಿ ಬೃಹತ್ ಪ್ರತಿಭಟನೆಗಳನ್ನು ಕೈಗೊಳ್ಳಲಾಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.