ETV Bharat / bharat

ರೈತರ ಬೇಡಿಕೆ ಒಪ್ಪಿಕೊಂಡ ಕೇಂದ್ರ ಸರ್ಕಾರ.. ಅನ್ನದಾತರ ಹೋರಾಟ ಇಂದು ಅಂತ್ಯ? - ಕನಿಷ್ಠ ಬೆಂಬಲ ಬೆಲೆ ವಿಚಾರ

ರೈತರ ಎಲ್ಲ ಬೇಡಿಕೆ ಈಡೇರಿಕೆ ಮಾಡುವುದಾಗಿ ಕೇಂದ್ರ ಸರ್ಕಾರ ಈಗಾಗಲೇ ತಿಳಿಸಿರುವ ಕಾರಣ ಇಂದು ಗುರುವಾರ ಅನ್ನದಾತರು ತಮ್ಮ ಹೋರಾಟ ಅಂತ್ಯಗೊಳಿಸುವ ಸಾಧ್ಯತೆ ದಟ್ಟವಾಗಿದೆ.

Farmers To Formally Call Off Protest
Farmers To Formally Call Off Protest
author img

By

Published : Dec 8, 2021, 9:45 PM IST

Updated : Dec 9, 2021, 5:43 AM IST

ನವದೆಹಲಿ: ವಿವಾದಿತ ಕೃಷಿ ಕಾಯ್ದೆಗಳನ್ನ ವಾಪಸ್​ ಪಡೆದುಕೊಂಡ ಬಳಿಕ ಕೂಡ ಕೇಂದ್ರದ ವಿರುದ್ಧ ಪ್ರತಿಭಟನೆ ಮುಂದುವರೆಸಿರುವ ರೈತ ಸಂಘಟನೆಗಳು ತಮ್ಮ ಹೋರಾಟವನ್ನ ಇಂದು ಅಂತ್ಯಗೊಳಿಸುವ ಸಾಧ್ಯತೆ ಇದೆ. ರೈತರ ಎಲ್ಲ ಷರತ್ತುಗಳಿಗೆ ಮೋದಿ ಸರ್ಕಾರ ಈಗಾಗಲೇ ಒಪ್ಪಿಕೊಂಡಿರುವ ಹಿನ್ನೆಲೆಯಲ್ಲಿ ಸಂಯುಕ್ತ ಕಿಸಾನ್​​ ಮೋರ್ಚಾ ಪ್ರತಿಭಟನೆ ಕೈಬಿಡುವ ನಿರ್ಧಾರಕ್ಕೆ ಬಂದಿದೆ ಎಂದು ವರದಿಯಾಗಿದೆ.

ಇಂದು ಮಧ್ಯಾಹ್ನ 12 ಗಂಟೆಗೆ ರೈತ ಸಂಘಟನೆಗಳ ಮಹತ್ವದ ಸಭೆ ನಡೆಯಲಿದ್ದು, ಇಲ್ಲಿ ಪ್ರತಿಭಟನೆ ಹಿಂಪಡೆದುಕೊಳ್ಳುವ ಅಂತಿಮ ನಿರ್ಧಾರ ಪ್ರಕಟಿಸುವ ಸಾಧ್ಯತೆ ಇದೆ. ಆದರೆ, ಕೇಂದ್ರ ಸರ್ಕಾರದಿಂದ ಎಲ್ಲ ಷರತ್ತು ಈಡೇರಿಸುವ ಬಗ್ಗೆ ಲಿಖಿತ ರೂಪದಲ್ಲಿ ಭರವಸೆ ನೀಡಿದ ಬಳಿಕವೇ ತಮ್ಮ ಪ್ರತಿಭಟನೆ ಹಿಂಪಡೆದುಕೊಳ್ಳಲು ರೈತ ಸಂಘಟನೆಗಳು ಮುಂದಾಗಿದೆ ಎಂದು ತಿಳಿದುಬಂದಿದೆ.

ಕಳೆದ ವರ್ಷ ಕೇಂದ್ರ ಸರ್ಕಾರ ಜಾರಿಗೊಳಿಸಿದ್ದ ಮೂರು ಕೃಷಿ ಕಾಯ್ದೆ ವಿರುದ್ಧ ಅನ್ನದಾತರು ರಸ್ತೆಗಿಳಿದು ಹೋರಾಟ ನಡೆಸಿದ್ದಾರೆ. ಒಂದು ವರ್ಷದಿಂದ ನಿರಂತರವಾಗಿ ಈ ಹೋರಾಟ ಮುಂದುವರೆದಿದೆ. ಇದರ ಮಧ್ಯೆ, ಸಂಸತ್​ ಚಳಿಗಾಲದ ಅಧಿವೇಶನ ಆರಂಭಗೊಳ್ಳುವುದಕ್ಕೂ ಸ್ವಲ್ಪ ದಿನ ಮುಂಚಿತವಾಗಿ ವಿವಾದಿತ ಕೃಷಿ ಕಾನೂನು ವಾಪಸ್​ ಪಡೆದುಕೊಳ್ಳುವುದಾಗಿ ಕೇಂದ್ರ ಘೋಷಣೆ ಮಾಡಿತ್ತು. ಇದಾದ ಬಳಿಕ ಕೂಡ ರೈತ ಸಂಘಟನೆಗಳು, ಕನಿಷ್ಠ ಬೆಂಬಲ ಬೆಲೆ ಘೋಷಣೆ, ರೈತರ ಮೇಲಿನ ಎಫ್​ಐಆರ್​ ಸೇರಿದಂತೆ ಅನೇಕ ವಿಚಾರವಾಗಿ ಕೇಂದ್ರಕ್ಕೆ ಪತ್ರ ಬರೆದಿತ್ತು.

ಈ ಎಲ್ಲ ಬೇಡಿಕೆ ಈಡೇರಿಕೆ ಮಾಡುವುದಾಗಿ ಕೇಂದ್ರ ಸರ್ಕಾರ ಈಗಾಗಲೇ ತಿಳಿಸಿದ್ದು, ಹೀಗಾಗಿ ಅನ್ನದಾತರು ತಮ್ಮ ಹೋರಾಟ ಹಿಂಪಡೆದುಕೊಳ್ಳಲಿದ್ದಾರೆಂದು ತಿಳಿದು ಬಂದಿದೆ.

ಇದನ್ನೂ ಓದಿರಿ: ಮೈಸೂರಿನಲ್ಲಿ ಪುರಾತನ ದೇವಾಲಯದ ಕಲ್ಲಿನ ಲಿಂಗ ಧ್ವಂಸ..ಕಿಡಿಗೇಡಿಗಳ ಬಂಧನಕ್ಕೆ ಆಗ್ರಹ

ಇದೇ ವಿಚಾರವಾಗಿ ಮಾತನಾಡಿರುವ ಭಾರತೀಯ ಕಿಸಾನ್ ಯೂನಿಯನ್​ ರಾಷ್ಟ್ರೀಯ ವಕ್ತಾರ ರಾಕೇಶ್ ಟಿಕಾಯತ್​, ಕಳೆದ ಕೆಲ ತಿಂಗಳ ಹಿಂದೆ ನಡೆದ ಟ್ರ್ಯಾಕ್ಟರ್​ ಮೋರ್ಚಾ ವೇಳೆ ಪೊಲೀಸರು ರೈತರ 160 ಟ್ರ್ಯಾಕ್ಟರ್​ ವಶಕ್ಕೆ ಪಡೆದುಕೊಂಡಿದ್ದು, ಇದರ ಬಗ್ಗೆ ಅಂತಿಮ ನಿರ್ಧಾರ ಹೊರಬರಬೇಕು. ಇದರ ಜೊತೆಗೆ ಲಖೀಂಪುರಿ ಪ್ರಕರಣದ ಅಂತಿಮ ನಿರ್ಧಾರದ ಬಗ್ಗೆ ಕೇಂದ್ರ ತನ್ನ ನಿಲುವು ತಿಳಿಸಬೇಕು ಎಂದಿದ್ದಾರೆ.

Last Updated : Dec 9, 2021, 5:43 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.