ETV Bharat / bharat

ಪತ್ನಿ ಮೇಲಿನ ಕೋಪಕ್ಕೆ ಮಗನಿ ವಿಷ ಉಣಿಸಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ: 3 ವರ್ಷದ ಬಾಲಕ ಸಾವು

ವ್ಯಕ್ತಿಯೊಬ್ಬ ತನ್ನ ಪತ್ನಿಯ ಮೇಲಿನ ಕೋಪದಿಂದ ತನ್ನ ಮಗನಿಗೆ ವಿಷ ಉಣಿಸಿ, ತಾನು ವಿಷ ಕುಡಿದು ಆತ್ಮಹತ್ಯೆಗೆ ಯತ್ನಸಿರುವ ಘಟನೆ ಬಿಹಾರದಲ್ಲಿ ನಡೆದಿದೆ.

Etv Bharatfather-killed-son-in-samastipur-due-to-dispute-with-wife
ಪತ್ನಿ ಮೇಲಿನ ಕೋಪಕ್ಕೆ ಮಗನಿ ವಿಷ ಉಣಿಸಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ: 3 ವರ್ಷದ ಮಗು ಸಾವು
author img

By ETV Bharat Karnataka Team

Published : Jan 16, 2024, 6:15 PM IST

ಸಮಸ್ತಿಪುರ(ಬಿಹಾರ): ತನ್ನ ಪತ್ನಿಯ ಮೇಲಿನ ಕೋಪದಿಂದ ವ್ಯಕ್ತಿಯೊಬ್ಬ ತನ್ನ ಮಗನಿಗೆ ವಿಷ ಉಣಿಸಿ, ತಾನು ವಿಷ ಕುಡಿದು ಆತ್ಮಹತ್ಯೆಗೆ ಯತ್ನಸಿರುವ ಘಟನೆ ಸಿಂಘಿಯಾ ಪೊಲೀಸ್ ಠಾಣೆ ವ್ಯಾಪ್ತಿಯ ಹರ್ಡಿಯಾ ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ಬಾಲಕ ಅರವಿಂದ್ ಸದಾ (3 ) ಮೃತಪಟ್ಟಿದ್ದಾನೆ. ತಂದೆ ಸುಂದರ್ ಸದಾ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ದರ್ಭಂಗಾ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಸುಂದರ್ ಸದಾ ತನ್ನ ಪತ್ನಿಯೊಂದಿಗೆ ಜಗಳ ಮಾಡಿಕೊಂಡಿದ್ದ. ನಿನ್ನೆ (ಸೋಮವಾರ ) ರಾತ್ರಿ ಮನೆಗೆ ಬಂದ ಆತ ಅಮಾಯಕ ಮಗನಿಗೆ ವಿಷ ಉಣಿಸಿ, ತಾನು ವಿಷ ಕುಡಿದಿದ್ದಾನೆ ಎಂದು ಹೇಳಲಾಗುತ್ತಿದೆ.

ಘಟನೆಯ ಬಗ್ಗೆ ಮಾಹಿತಿ ತಿಳಿದ ತಕ್ಷಣ ಸಿಂಘಿಯಾ ಠಾಣೆಯ ಪೊಲೀಸರು ಘಟನಾ ಸ್ಥಳಕ್ಕೆ ಧಾವಿಸಿ ಮೃತ ಬಾಲಕನ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಸುಂದರ್ ಸದಾ ಪೊಲೀಸ್ ಕಸ್ಟಡಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಘಟನೆಯ ಬಗ್ಗೆ ಡಿವೈಎಸ್​ಪಿ ಶಿವಂ ಕುಮಾರ್ ಮಾತನಾಡಿ, "ಸುಂದರ್ ಸದಾ ತನ್ನ ಪತ್ನಿಯೊಂದಿಗೆ ಜಗಳ ಮಾಡಿಕೊಂಡಿದ್ದ. ತನ್ನ ಹೆಂಡತಿ ಮೇಲಿನ ಕೋಪದಿಂದ ಅವನು ಮಗನಿಗೆ ವಿಷ ಉಣಿಸಿದ್ದ, ಇದರಿಂದ ಮಗು ಮೃತಪಟ್ಟಿದೆ. ಗಂಭೀರ ಸ್ಥಿತಿಯಲ್ಲಿರುವ ಸುಂದರ್ ಸದಾಗೆ ಚಿಕಿತ್ಸೆ ನೀಡಲಾಗುತ್ತಿದೆ. ಈ ಘಟನೆ ಸಂಬಂಧ ತನಿಖೆ ನಡೆಸಲಾಗುತ್ತಿದೆ" ಎಂದು ತಿಳಿಸಿದರು.

ಇದನ್ನೂ ಓದಿ: ಕಾರ್​ ಪಾರ್ಕಿಂಗ್​​ ವಿಚಾರಕ್ಕೆ ಗಲಾಟೆ: ನಾಲ್ವರ ಸಾವು

ಪತ್ನಿಯ ಕೊಂದು ದೇಹವನ್ನು ತುಂಡರಿಸಿ ಕಾಲುವೆಗೆ ಎಸೆದ ಪತಿ: ಪಶ್ಚಿಮ ಬಂಗಾಳದ 24 ಉತ್ತರ ಪರಗಣದ ಗ್ರಾಮವೊಂದರಲ್ಲಿ ಪತಿಯೊಬ್ಬ ಪತ್ನಿಯನ್ನು ಕೊಂದು, ಆಕೆಯ ದೇಹವನ್ನು ತುಂಡರಿಸಿ ಗೋಣಿಚೀಲದಲ್ಲಿ ತುಂಬಿ ಕಾಲುವೆಗೆ ಎಸೆದಿರುವ ಘಟನೆ ನಡೆದಿದೆ. ಬಳಿಕ ಆರೋಪಿ ವಿಷಸೇವಿಸಿ ಆತ್ಮಹತ್ಯೆಗೂ ಯತ್ನಿಸಿದ್ದಾನೆ. ನೂರುದ್ದೀನ್​ ಮಂಡಲ್​ (55) ಕೊಲೆ ಮಾಡಿದ ಆರೋಪಿ. ಸಾಯಿರಾ ಬಾನು ಮೃತರು. ಯಾವ್ಯಾವುದೋ ವಿಚಾರಕ್ಕಾಗಿ ಇಬ್ಬರ ಮಧ್ಯೆ ನಿತ್ಯವೂ ಕಿತ್ತಾಟ ನಡೆಯುತ್ತಿತ್ತು. ಈ ಹಿನ್ನೆಲೆಯಲ್ಲಿ ಆತ ಪತ್ನಿಯನ್ನು ಹತ್ಯೆ ಮಾಡಿದ್ದಾಗಿ ವಿಚಾರಣೆ ವೇಳೆ ಆರೋಪಿ ಪೊಲೀಸರ ಎದುರು ಬಾಯ್ಬಿಟ್ಟಿದ್ದಾನೆ.

ಕೆಲವು ದಿನಗಳಿಂದ ತನ್ನ ಪತ್ನಿ ಕಾಣುತ್ತಿಲ್ಲ, ಹುಡುಕಿಕೊಡಿ ಎಂದು ಪೊಲೀಸ್​ ಠಾಣೆಯಲ್ಲಿ ಆರೋಪಿ ನೂರುದ್ದೀನ್​ ದೂರು ನೀಡಿದ್ದ. ತನಿಖೆ ಆರಂಭಿಸಿದ್ದ ಪೊಲೀಸರು ಎಲ್ಲ ಕೋನಗಳಿಂದ ವಿಚಾರಣೆ ನಡೆಸುತ್ತಿದ್ದರು. ದಂಪತಿಗೆ ಮಗಳಿದ್ದು, ಆಕೆಯನ್ನು ಪ್ರಶ್ನಿಸಿದ್ದಾರೆ. ಜೊತೆಗೆ ಆರೋಪಿಯನ್ನು ಹಲವಾರು ಬಾರಿ ವಿಚಾರಣೆಗೆ ಕರೆದಿದ್ದರು. ಈ ವೇಳೆ, ಆತ ನೀಡಿದ ಹೇಳಿಕೆಗಳು ಗೊಂದಲ ಸೃಷ್ಟಿಸಿತ್ತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.