ETV Bharat / bharat

ಅಪ್ರಾಪ್ತ ಮಗಳ ಮೇಲೆಯೇ ಅತ್ಯಾಚಾರ ಎಸಗಿದ ಪಾಪಿ ತಂದೆ!

author img

By

Published : Apr 17, 2022, 9:51 AM IST

ಒಂದು ವಾರದ ಹಿಂದೆ ಈ ಕ್ರೂರಿ ತಂದೆ ತನ್ನ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರವೆಸಗಿ ಪರಾರಿಯಾಗಿದ್ದನಂತೆ. ಈ ವಿಷಯ ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದನೆ ಎಂದು ತಿಳಿದುಬಂದಿದೆ.

ಅಪ್ರಾಪ್ತ ಮಗಳ ಮೇಲೆಯೇ ಅತ್ಯಾಚಾರ ಎಸಗಿದ ಪಾಪಿ ತಂದೆ

ಸಹರಾನ್‌ಪುರ (ಉತ್ತರ ಪ್ರದೇಶ) : ಜನ್ಮ ಕೊಟ್ಟ ತಂದೆಯೇ ಮಗಳ ಪಾಲಿಗೆ ವಿಲನ್​ ಆಗಿರುವ ಪ್ರಕರಣ ಉತ್ತರ ಪ್ರದೇಶದಲ್ಲಿ ಬೆಳಕಿಗೆ ಬಂದಿದೆ. ತನ್ನ ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ಅಪ್ಪನೇ ಅತ್ಯಾಚಾರ ಎಸಗಿದ್ದಾನೆ. ಸಂತ್ರಸ್ತೆಯ ದೂರಿನ ಆಧಾರದ ಮೇಲೆ ಪೊಲೀಸರು ಅತ್ಯಾಚಾರ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ. ಒಂದು ವಾರದ ಹಿಂದೆ ಈ ಕ್ರೂರಿ ತಂದೆ ತನ್ನ ಮಗಳ ಅತ್ಯಾಚಾರ ಎಸಗಿ ಪರಾರಿಯಾಗಿದ್ದನಂತೆ. ಈ ವಿಷಯ ಯಾರಿಗಾದರೂ ಹೇಳಿದರೆ ಕೊಲೆ ಮಾಡುತ್ತೇನೆಂದು ಬೆದರಿಕೆ ಹಾಕಿದ್ದನಂತೆ.

ಈ ಬಗ್ಗೆ ಪ್ರಭಾರಿ ಇನ್​ಸ್ಪೆಕ್ಟರ್ ಸದರ್ ಬಜಾರ್ ಕೊತ್ವಾಲಿ ಮಾಹಿತಿ ನೀಡಿದ್ದಾರೆ. ಏಪ್ರಿಲ್ 9 ರಂದು ಸಂತ್ರಸ್ತೆ ಸದರ್ ಬಜಾರ್ ಪೊಲೀಸ್ ಠಾಣೆಗೆ ಲಿಖಿತ ದೂರು ಸಲ್ಲಿಸಿ, ತನ್ನ ತಂದೆಯ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಳು. ಇದಾದ ಬಳಿಕ ಪೊಲೀಸರು ಆರೋಪಿಗಾಗಿ ಹುಡುಕಾಟ ಆರಂಭಿಸಿದ್ದರು. ತಲೆಮರೆಸಿಕೊಂಡಿದ್ದ ಆರೋಪಿ ಗಾಂಧಿ ಪಾರ್ಕ್ ಬಳಿ ಎಲ್ಲಿಗೋ ಹೋಗಲು ಯತ್ನಿಸುತ್ತಿದ್ದ ಎಂದು ಮಾಹಿತಿದಾರರಿಂದ ಪೊಲೀಸರಿಗೆ ಮಾಹಿತಿ ಲಭಿಸಿದೆ. ಕಾರ್ಯಪ್ರಮವೃತ್ತರಾದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: IPL -2022: ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗೆದ್ದು ಬೀಗಿದ ಆರ್​ಸಿಬಿ

ಸಂತ್ರಸ್ತೆಯ ದೂರಿನ ಆಧಾರದ ಮೇಲೆ ಆರೋಪಿ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ 2012 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಎಸ್ಪಿ ನಗರ ರಾಜೇಶ್ ಕುಮಾರ್ ತಿಳಿಸಿದ್ದಾರೆ.

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.