ETV Bharat / bharat

ಆಂಧ್ರದ ಗಾರ್ಮೆಂಟ್ ಫ್ಯಾಕ್ಟರಿಯಲ್ಲಿ ವಿಷಾನಿಲ ಸೋರಿಕೆ: 150ಕ್ಕೂ ಹೆಚ್ಚು ಮಹಿಳಾ ಉದ್ಯೋಗಿಗಳು ಅಸ್ವಸ್ಥ

ಇಲ್ಲಿನ ಅನಕಾಪಲ್ಲಿ ಜಿಲ್ಲೆಯಲ್ಲಿರುವ ಸೀಡ್ಸ್ ಗಾರ್ಮೆಂಟ್ ಫ್ಯಾಕ್ಟರಿಯಲ್ಲಿ ಮೂರೇ ತಿಂಗಳ ಅಂತರದಲ್ಲಿ ಎರಡನೇ ಬಾರಿ ರಾಸಾಯನಿಕ ಅನಿಲ ಸೋರಿಕೆಯಾಗಿದೆ.

Female employees sick due to toxic gas leak in Andhra Pradesh
ಸೀಡ್ಸ್ ಗಾರ್ಮೆಂಟ್ ಫ್ಯಾಕ್ಟರಿಯಲ್ಲಿ ವಿಷ ಅನಿಲ ಸೋರಿಕೆ: 150ಕ್ಕೂ ಹೆಚ್ಚು ಮಹಿಳಾ ಉದ್ಯೋಗಿಗಳು ಅಸ್ವಸ್ಥ
author img

By

Published : Aug 2, 2022, 10:33 PM IST

Updated : Aug 2, 2022, 10:55 PM IST

ಅಮರಾವತಿ (ಆಂಧ್ರಪ್ರದೇಶ): ಆಂಧ್ರಪ್ರದೇಶದ ಅನಕಾಪಲ್ಲಿ ಜಿಲ್ಲೆಯಲ್ಲಿ ಭಾರಿ ವಿಷಾನಿಲ ದುರಂತ ಸಂಭವಿಸಿದೆ. ಸೀಡ್ಸ್ ಗಾರ್ಮೆಂಟ್ ಫ್ಯಾಕ್ಟರಿಯಲ್ಲಿ ರಾಸಾಯನಿಕ ಅನಿಲ ಸೋರಿಕೆಯಿಂದಾಗಿ ಸುಮಾರು 150ಕ್ಕೂ ಹೆಚ್ಚು ಮಹಿಳಾ ಉದ್ಯೋಗಿಗಳು ಅಸ್ವಸ್ಥಗೊಂಡಿದ್ದಾರೆ. ಅಚ್ಯುತಪುರಂ ಸಮೀಪ ಇರುವ ಕಾರ್ಖಾನೆಯಲ್ಲಿ ದುರ್ಘಟನೆ ನಡೆದಿದೆ.

Female employees sick due to toxic gas leak in Andhra Pradesh

ಈ ಕಾರ್ಖಾನೆಯಲ್ಲಿ ಸುಮಾರು 4 ಸಾವಿರ ಕಾರ್ಮಿಕರು 'ಬಿ' ಪಾಳಿಯಲ್ಲಿ ಕೆಲಸ ಮಾಡುತ್ತಿದ್ದು, 150ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದಾರೆ. ವಿಷಾನಿಲ ಸೇವನೆಯಿಂದ ಉದ್ಯೋಗಿಗಳು ಸ್ಥಳದಲ್ಲೇ ವಾಂತಿ ಮಾಡಿಕೊಂಡು ಮೂರ್ಛೆ ಹೋಗಿ ಬಿದ್ದರು. ತಕ್ಷಣವೇ ಅಸ್ವಸ್ಥಗೊಂಡ ಕೆಲವರಿಗೆ ಕಾರ್ಖಾನೆ ಆವರಣದಲ್ಲೇ ಪ್ರಥಮ ಚಿಕಿತ್ಸೆ ನೀಡಲಾಗಿದೆ. ಉಳಿದವರನ್ನು ಅಚ್ಯುತಪುರಂ ಮತ್ತು ಅನಕಾಪಲ್ಲಿಯಲ್ಲಿರುವ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಿಗೆ ಕಾರ್ಖಾನೆಯ ಬಸ್‌ಗಳು, ಕಾರುಗಳು ಮತ್ತು ಆಂಬ್ಯುಲೆನ್ಸ್‌ಗಳಲ್ಲಿ ಸಾಗಿಸಲಾಗಿದೆ.

ಕಳೆದ ಮೇ ತಿಂಗಳ ಮೊದಲ ವಾರದಲ್ಲಿಯೂ ಇದೇ ಕಾರ್ಖಾನೆಯಲ್ಲಿ ರಾಸಾಯನಿಕ ಅನಿಲ ಸೋರಿಕೆಯಿಂದಾಗಿ ಹೆಚ್ಚಿನ ಸಂಖ್ಯೆಯ ಮಹಿಳಾ ಉದ್ಯೋಗಿಗಳು ಅಸ್ವಸ್ಥರಾಗಿದ್ದರು. ಆಗ ಸರ್ಕಾರಿ ಅಧಿಕಾರಿಗಳು ತನಿಖೆ ನಡೆಸಿ ಸುಮಾರು ಒಂದು ವಾರ ಕಾರ್ಖಾನೆ ಮುಚ್ಚಿಸಿದ್ದರು. ಕಾರ್ಖಾನೆಯಲ್ಲಿ ರಾಸಾಯನಿಕ ಅನಿಲ ಸೋರಿಕೆ ಕುರಿತು ಹೈದರಾಬಾದ್‌ನ ಐಐಸಿಟಿ ಸೇರಿದಂತೆ ಇತರ ಸಂಸ್ಥೆಗಳು ತನಿಖಾ ವರದಿಗಳನ್ನು ಸರ್ಕಾರಕ್ಕೆ ಸಲ್ಲಿಸಿವೆ. ಆದರೆ, ಇದುವರೆಗೂ ವರದಿಗಳನ್ನು ಸರ್ಕಾರ ಬಹಿರಂಗಪಡಿಸಿಲ್ಲ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ಸಂಸದರ ಪುತ್ರನ ಕುತ್ತಿಗೆಗೆ ಚಾಕು ಇಟ್ಟು ಬೆದರಿಕೆ: ಆನ್‌ಲೈನ್‌ನಲ್ಲಿ ₹75 ಸಾವಿರ ಹಾಕಿಸಿಕೊಂಡ ದುಷ್ಕರ್ಮಿಗಳು

Last Updated : Aug 2, 2022, 10:55 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.