ನವದೆಹಲಿ: ಈ ತಿಂಗಳ ಆರಂಭದಲ್ಲಿ ಕೇಂದ್ರ ಬಜೆಟ್ ಮಂಡಿಸಿದ ನಂತರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಮಾರುಕಟ್ಟೆಯ ನಿಯಂತ್ರಕ ಸೆಬಿಯನ್ನು ಉದ್ದೇಶಿಸಿ ಮಾತನಾಡಿದರು.
ಪ್ರತಿ ವರ್ಷ ಬಜೆಟ್ ಮಂಡಿಸಿದ ನಂತರ ಹಣಕಾಸು ಸಚಿವರು ಸೆಬಿ ಮತ್ತು ಆರ್‌ಬಿಐ ಮಂಡಳಿಗಳನ್ನು ಉದ್ದೇಶಿಸಿ ಮಾತನಾಡುವುದು ವಾಡಿಕೆಯಾಗಿದೆ.
ರಾಷ್ಟ್ರ ರಾಜಧಾನಿಯಲ್ಲಿರುವ ಸೆಬಿ (ಸೆಕ್ಯುರಿಟೀಸ್ ಅಂಡ್ ಎಕ್ಸ್ಚೇಂಜ್ ಬೋರ್ಡ್ ಆಫ್ ಇಂಡಿಯಾ) ಮಂಡಳಿಯನ್ನು ಉದ್ದೇಶಿಸಿ ನಿರ್ಮಲಾ ಸೀತಾರಾಮನ್ ಮಾತನಾಡಿದ್ದಾರೆ ಎಂದು ಹಣಕಾಸು ಸಚಿವಾಲಯ ಟ್ವೀಟ್ನಲ್ಲಿ ತಿಳಿಸಿದ್ದು, ಸಭೆಯ ಫೋಟೋಗಳನ್ನು ಟ್ವೀಟ್ ಮಾಡಿದೆ.
ಸಚಿವ ಅನುರಾಗ್ ಸಿಂಗ್ ಠಾಕೂರ್, ಸೆಬಿ ಅಧ್ಯಕ್ಷ ಅಜಯ್ ತ್ಯಾಗಿ, ಹಣಕಾಸು ಕಾರ್ಯದರ್ಶಿ ಅಜಯ್ ಭೂಷಣ್ ಪಾಂಡೆ, ಆರ್ಥಿಕ ವ್ಯವಹಾರಗಳ ಕಾರ್ಯದರ್ಶಿ ತರುಣ್ ಬಜಾಜ್ ಮತ್ತು ಸೆಬಿ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.
ಸೀತಾರಾಮನ್ ನಿನ್ನೆ ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಮಂಡಳಿಯನ್ನುದ್ದೇಶಿಸಿ ಮಾತನಾಡಿದ್ದರು.