ETV Bharat / bharat

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಏಮ್ಸ್​​ಗೆ ದಾಖಲು - Sitharaman admitted to AIIMS

ಎಐಐಎಂಎಸ್​ನ ಖಾಸಗಿ ವಾರ್ಡ್​ಗೆ ದಾಖಲಾದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್​.

ಸೀತಾರಾಮನ್ ಏಮ್ಸ್​​ಗೆ ದಾಖಲು
ಸೀತಾರಾಮನ್ ಏಮ್ಸ್​​ಗೆ ದಾಖಲು
author img

By

Published : Dec 26, 2022, 1:56 PM IST

Updated : Dec 26, 2022, 4:22 PM IST

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸೋಮವಾರ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಎಐಐಎಂಎಸ್) ಗೆ ದಾಖಲಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸಚಿವರನ್ನು ಖಾಸಗಿ ವಾರ್ಡ್‌ಗೆ ದಾಖಲಿಸಲಾಗಿದೆ.

ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಹೊಟ್ಟೆಯಲ್ಲಿ ಸಣ್ಣದಾಗಿ ಸೋಂಕು ಉಂಟಾದ ಹಿನ್ನೆಲೆ ಮತ್ತು ದಿನದ ತಪಾಸಣೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ಕೇಂದ್ರ ಬಜೆಟ್ ಕುರಿತ ಚರ್ಚೆ : ಉತ್ತರ ನೀಡಲಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಸುದ್ದಿ ಸಂಸ್ಥೆಯೊಂದರ ಪ್ರಕಾರ, 63 ವರ್ಷದ ಅವರನ್ನು ಮಧ್ಯಾಹ್ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲದೇ ಅವರು ಶೀಘ್ರದಲ್ಲೇ ಡಿಸ್ಚಾರ್ಜ್ ಆಗುವ ಸಾಧ್ಯತೆಯಿದೆ. ಮೂಲಗಳ ಪ್ರಕಾರ, ಅವರ ಸ್ಥಿತಿ ಸ್ಥಿರವಾಗಿದ್ದು, ಅತ್ಯುತ್ತಮ ವೈದ್ಯಕೀಯ ಚಿಕಿತ್ಸೆಯನ್ನು ನೀಡಲಾಗುತ್ತಿದೆ.

ಸೀತಾರಾಮನ್ ಶನಿವಾರ ಚೆನ್ನೈನಲ್ಲಿರುವ ತಮಿಳುನಾಡು ಡಾ ಎಂಜಿಆರ್ ವೈದ್ಯಕೀಯ ವಿಶ್ವವಿದ್ಯಾಲಯದ 35ನೇ ವಾರ್ಷಿಕ ಘಟಿಕೋತ್ಸವದಲ್ಲಿ ಭಾಗವಹಿಸಿದ್ದರು. ಭಾನುವಾರ ಸೀತಾರಾಮನ್ ಅವರು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನದ ಪ್ರಯುಕ್ತ, ನವದೆಹಲಿಯ 'ಸದೈವ್ ಅಟಲ್' ನಲ್ಲಿ ಪುಷ್ಪ ನಮನ ಸಲ್ಲಿಸಿದ್ದರು.

Last Updated : Dec 26, 2022, 4:22 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.