ವೈಶಾಲಿ(ಬಿಹಾರ): ಕೊರೊನಾ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಪಾರ್ಟಿಯಲ್ಲಿ ಭಾಗಿಯಾಗಿದ್ದಕ್ಕೆ ಲಾಲ್‌ಗಂಜ್‌ನ ಮಾಜಿ ಶಾಸಕ ಮುನ್ನಾ ಶುಕ್ಲಾ ಮತ್ತು ಭೋಜ್‌ಪುರಿ ನಟಿ ಅಕ್ಷರಾ ಸಿಂಗ್ ಸೇರಿದಂತೆ 200 ಜನರ ವಿರುದ್ಧ ಪೊಲೀಸರು ಕೇಸು ದಾಖಲಿಸಿದ್ದಾರೆ.
ಕೊರೊನಾ ಪ್ರಕರಣ ದಿನೇ ದಿನೇ ಉಲ್ಬಣಗೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ನೈಟ್ ಕರ್ಫ್ಯೂ ಘೋಷಣೆ ಮಾಡಿದೆ. ಆದರೆ ಮಾರ್ಗಸೂಚಿಗಳನ್ನು ಗಾಳಿಗೆ ತೂರಿ ಮಾಜಿ ಶಾಸಕ ಮುನ್ನಾ ಶುಕ್ಲಾ ಪಾರ್ಟಿ ಆಯೋಜನೆ ಮಾಡಿದ್ದರು. ಈ ಪಾರ್ಟಿಯಲ್ಲಿ ಭೋಜಪುರಿ ನಟಿ ಅಕ್ಷರಾ ಸಿಂಗ್ ಸಹ ಭಾಗಿಯಾಗಿದ್ದರು. ಇನ್ನು ಪೊಲೀಸ್ ಅಧಿಕಾರಿಯೊಬ್ಬ ಗಾಳಿಯಲ್ಲಿ ಗುಂಡು ಹಾರಿಸಿ ಅಧಿಕಾರ ದುರುಪಯೋಗಪಡಿಸಿದ್ದಾನೆ. ಈ ಪಾರ್ಟಿಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಇನ್ನು ಪಾರ್ಟಿಯಲ್ಲಿ ಸಾಮಾಜಿಕ ಅಂತರ, ಮಾಸ್ಕ್ ಸೇರಿದಂತೆ ಕೊರೊನಾ ಮುಂಜಾಗೃತೆ ನಿಯಮಗಳನ್ನು ನಿರ್ಲಕ್ಷಿಸಲಾಗಿದೆ. ಒಂದೆಡೆ ಕೊರೊನಾ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಕ್ರಮ ಕೈಗೊಂಡರೆ ಇನ್ನೊಂದೆಡೆ ಜನರು ಈ ರೀತಿ ಪಾರ್ಟಿ ಆಯೋಜಿಸಿ ಮೋಜು ಮಸ್ತಿ ಮಾಡುತ್ತಿದ್ದಾರೆ.