ETV Bharat / bharat

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಐವರು ಬಲಿ, 14 ಮಂದಿಗೆ ಗಾಯ

ಘಟನಾ ಸ್ಥಳಕ್ಕೆ 5 ಅಗ್ನಿಶಾಮಕ ವಾಹನಗಳು ದೌಡಾಯಿಸಿದ್ದು, ಗಾಯಾಳುಗಳನ್ನು ಶಿವಕಾಶಿಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರ ಸಂಖ್ಯೆ ಇನ್ನಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

fire-accident-at-cracker-factory-at-sivakasi-5-dead-14-injured
ಪಟಾಕಿ ಕಾರ್ಖಾನೆಯಲ್ಲಿ ಸ್ಪೋಟ..ಐವರು ಬಲಿ, 14 ಮಂದಿಗೆ ಗಾಯ
author img

By

Published : Feb 25, 2021, 8:08 PM IST

ಶಿವಕಾಶಿ (ತಮಿಳುನಾಡು): ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ ಐವರು ಮೃತಪಟ್ಟು, 14 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ವಿರುಧುನಗರ ಜಿಲ್ಲೆಯ ಶಿವಕಾಶಿ ಬಳಿಯ ಕಲೈಯರ್ ಕುರಿಚಿಯಲ್ಲಿನ ಪಟಾಕಿ ಉತ್ಪಾದನಾ ಘಟಕದಲ್ಲಿ ಈ ದುರ್ಘಟನೆ ಸಂಭವಿಸಿದೆ.

ತಂಗರಾಜ್ ಎಂಬುವರಿಗೆ ಸೇರಿದ ಕಾರ್ಖಾನೆ ಇದಾಗಿದ್ದು, ಸುಮಾರು 200 ಕಾರ್ಮಿಕರು ಪಟಾಕಿ ತಯಾರಿಸುತ್ತಿದ್ದ ವೇಳೆ ಅಗ್ನಿ ಅವಘಡದಿಂದ ಸ್ಫೋಟ ಸಂಭವಿಸಿದೆ ಎನ್ನಲಾಗಿದೆ. ಸ್ಫೋಟದ ತೀವ್ರತೆಗೆ ಹತ್ತಿರದ 13 ಕಟ್ಟಗಳು ನೆಲಕ್ಕುರುಳಿದ್ದು, ಮೂವರು ಮಹಿಳೆಯರು ಸೇರಿ ಐವರು ಮೃತಪಟ್ಟಿದ್ದಾರೆ.

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ

ಘಟನಾ ಸ್ಥಳಕ್ಕೆ 5 ಅಗ್ನಿಶಾಮಕ ವಾಹನಗಳು ದೌಡಾಯಿಸಿದ್ದು, ಗಾಯಾಳುಗಳನ್ನು ಶಿವಕಾಶಿಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರ ಸಂಖ್ಯೆ ಇನ್ನಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಘಟನೆ ಸಂಬಂಧ ಪಡುಪತ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ಸಹ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ. ಇದಕ್ಕೂ ಮೊದಲು ಅಚ್ಚನ್​​​ಕುಳಮ್​ನ ಸುತ್ತೂರಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿ 23 ಮಂದಿ ಮೃತಪಟ್ಟಿದ್ದರು.

ಇದನ್ನೂ ಓದಿ: ಮಿಜೋರಾಂನಲ್ಲಿ 22 ಲಕ್ಷ ರೂ. ಮೌಲ್ಯದ ಮಾದಕ ದ್ರವ್ಯ ವಶ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.