ETV Bharat / bharat

ತಿರುಪತಿ ಗೋವಿಂದರಾಜಸ್ವಾಮಿ ದೇಗುಲ ಸಮೀಪದ ಕಟ್ಟಡದಲ್ಲಿ ಭಾರಿ ಬೆಂಕಿ ಅನಾಹುತ; ಮೂವರು ಸಿಲುಕಿರುವ ಶಂಕೆ - ದೇಗುಲದ ಬಳಿ ಬೆಂಕಿ

ಗೋವಿಂದರಾಜಸ್ವಾಮಿ ದೇವಸ್ಥಾನದ ಬಳಿ ಇರುವ ಕಟ್ಟಡದ ಮೂರನೇ ಮಹಡಿಯಲ್ಲಿ ಅನಾಹುತ ನಡೆದಿದೆ.

fire accident near tirupati govindaraja swamy temple in lavanya photo frame shop

author img

By

Published : Jun 16, 2023, 2:45 PM IST

ತಿರುಪತಿ: ಆಧ್ಯಾತ್ಮಿಕ ನಗರ ತಿರುಪತಿಯ ಹೃದಯಭಾಗದಲ್ಲಿರುವ ಗೋವಿಂದರಾಜಸ್ವಾಮಿ ದೇವಸ್ಥಾನದ ಸಮೀಪದಲ್ಲಿ ಇಂದು ಭಾರಿ ಅಗ್ನಿ ಅವಘಡ ಜರುಗಿದೆ. ದೇಗುಲದ ಮುಂಭಾಗದಲ್ಲಿರುವ ಲಾವಣ್ಯ ಎಂಬ ಫೋಟೋ ಲ್ಯಾಮಿನೇಷನ್ ಎಂಬ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಮೂವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ವಿದ್ಯುತ್ ಶಾರ್ಟ್ ಸರ್ಕ್ಯೂಟ್​ನಿಂದಾಗಿ ಸಂಭವಿಸಿದೆ ಎನ್ನಲಾದ ಅವಘಡದಿಂದ ಸುಮಾರು 1 ಕೋಟಿ ರೂಪಾಯಿ ಮೌಲ್ಯದ ವಸ್ತುಗಳು ನಾಶವಾಗಿದೆ ಎಂದು ಅಂದಾಜಿಸಲಾಗಿದೆ. ಬೆಂಕಿಯ ಕೆನ್ನಾಲಿಗೆಗೆ ಕಟ್ಟಡದ ಮುಂದೆ ನಿಲ್ಲಿಸಿದ್ದ ಐದು ದ್ವಿಚಕ್ರ ವಾಹನಗಳು ಆಹುತಿಯಾಗಿವೆ. ಲ್ಯಾಮಿನೇಶನ್ ಹಾಗೂ ಇತರೆ ಫೋಟೋ ಸಂಬಂಧಿತ ಕೆಲಸಗಳಿಗಾಗಿ ಅಂಗಡಿಯಲ್ಲಿ ಸಂಗ್ರಹಿಸಿಟ್ಟಿದ್ದ ರಾಸಾಯನಿಕ ವಸ್ತುಗಳು ಬೆಂಕಿಯ ತೀವ್ರತೆಯನ್ನು ಹೆಚ್ಚಿಸಿದೆ. ಜ್ವಾಲೆ ಇಡೀ ಕಟ್ಟಡವನ್ನು ಆವರಿಸಿಕೊಂಡಿದೆ.

ಇದನ್ನೂ ಓದಿ: ಶಾರ್ಟ್​ ಸರ್ಕ್ಯೂಟ್​ನಿಂದ ಮಕ್ಕಳಿದ್ದ ಶಾಲಾ ವಾಹನಕ್ಕೆ ಬೆಂಕಿ: ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಅನಾಹುತ

ನಾಲ್ಕು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿದ್ದು ಗೋವಿಂದರಾಜ ಸ್ವಾಮಿ ದೇವಸ್ಥಾನದ ರಥದ ಕಡೆಗೆ ವ್ಯಾಪಿಸಿರುವ ಬೆಂಕಿ ನಂದಿಸುತ್ತಿವೆ. ಅಕ್ಕಪಕ್ಕದ ಅಂಗಡಿಯಲ್ಲಿದ್ದವರೂ ಆತಂಕಗೊಂಡಿದ್ದಾರೆ. ಅವಘಡ ಸಂಭವಿಸಿದ ಅಂಗಡಿ ಬಳಿಯೇ ಗೋವಿಂದರಾಜಸ್ವಾಮಿ ದೇಗುಲಕ್ಕೆ ಸೇರಿದ ಮಹಾರಥ ಇರುವುದರಿಂದ ಭಕ್ತರು ಭಯಗೊಂಡಿದ್ದರು. ಮಾಹಿತಿ ಪಡೆದ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ಬೆಂಕಿ ನಿಯಂತ್ರಿಸಲು ಹರಸಾಹಸ ಪಡುತ್ತಿದ್ದಾರೆ. ಭಾರಿ ಪ್ರಮಾಣದಲ್ಲಿ ಬೆಂಕಿ ಹೊತ್ತಿಕೊಂಡಿದ್ದರಿಂದ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದವರು ಗಾಬರಿಯಿಂದ ಹೊರಗೋಡಿ ಬಂದಿದ್ದಾರೆ. ಕಿರಿದಾದ ಪ್ರದೇಶವಾದ್ದರಿಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಪರದಾಡುತ್ತಿದ್ದಾರೆ. ದೂರದಿಂದಲೇ ಬೆಂಕಿ ನಂದಿಸಲು ಯತ್ನಿಸುತ್ತಿದ್ದಾರೆ ಎಂದು ಪ್ರತ್ಯಕ್ಷದರ್ಶಿ ಮಾಹಿತಿ ನೀಡಿದರು.

ಬೆಂಕಿ ಹರಡದಂತೆ ಅಗ್ನಿಶಾಮಕ ಸಿಬ್ಬಂದಿ ಕ್ರಮ ಕೈಗೊಂಡಿದ್ದಾರೆ. ಜನನಿಬಿಡ ಪ್ರದೇಶವಾಗಿದ್ದರಿಂದ ಸ್ಥಳೀಯರಲ್ಲಿ ಆತಂಕ ಹೆಚ್ಚಾಗಿದೆ. ಐದು ಅಂತಸ್ತಿನ ಕಟ್ಟಡವಾಗಿದ್ದು ಒಂದು ಮಹಡಿಯಲ್ಲಿರುವ ಫೋಟೋ ಫ್ರೇಮ್ ಅಂಗಡಿಯಲ್ಲಿ ಬೆಂಕಿ ಉದ್ಭವಿಸಿದೆ.

ಇದನ್ನೂ ಓದಿ: ಟ್ಯೂಷನ್​ ಮುಗಿಸಿಕೊಂಡ ಬರುತ್ತಿದ್ದ ವಿದ್ಯಾರ್ಥಿ ಮೇಲೆ ಪೆಟ್ರೋಲ್​ ಸುರಿದು ಬೆಂಕಿ ಹಚ್ಚಿದ ಸ್ನೇಹಿತ!

ಪ್ರತ್ಯೇಕ ಅಪರಾಧ ಪ್ರಕರಣ: ಆಂಧ್ರ ಪ್ರದೇಶದಲ್ಲಿ ಟ್ಯೂಷನ್​ ಮುಗಿಸಿಕೊಂಡು ಬರುತ್ತಿದ್ದ ವಿದ್ಯಾರ್ಥಿ ಮೇಲೆ ಸ್ನೇಹಿತನೊಬ್ಬ ಪೆಟ್ರೋಲ್​ ಸುರಿದು ಬೆಂಕಿ ಹಚ್ಚಿರುವ ಘಟನೆ ನಡೆದಿದೆ. ಆಂಧ್ರ ಪ್ರದೇಶದ ಬಾಪಟ್ಲಾ ಜಿಲ್ಲೆಯಲ್ಲಿ ಘಟನೆ ನಡೆದಿದ್ದು ಗಂಭೀರವಾಗಿ ಗಾಯಗೊಂಡ ಅಮರನಾಥ್ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಘಟನೆ ಸಂಬಂಧ ಚೆರುಕುಪಲ್ಲಿ ಎಸ್‌ಎಸ್‌ಐ ಕೊಂಡ ರೆಡ್ಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ತನಿಖೆ ಬಳಿಕವೇ ವಿದ್ಯಾರ್ಥಿ ಅಮರನಾಥ್​ ಸಾವಿಗೆ ಕಾರಣ ತಿಳಿದು ಬರಲಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.