ಥಾಣೆ (ಮಹಾರಾಷ್ಟ್ರ): ಥಾಣೆಯ ಜಿಲ್ಲಾ ಪರಿಷತ್‌ನ ಆರೋಗ್ಯ ಇಲಾಖೆಯ ವಿಪತ್ತು ನಿಯಂತ್ರಣ ಕೊಠಡಿಯಲ್ಲಿ ಸೋಮವಾರ ಬೆಂಕಿ ಕಾಣಿಸಿಕೊಂಡಿದ್ದು, ಅದೃಷ್ಟವಶಾತ್ ಯಾರಿಗೂ ಗಾಯಗಳಾಗಿಲ್ಲ ಎಂದು ನಾಗರಿಕ ಅಧಿಕಾರಿಗಳು ತಿಳಿಸಿದ್ದಾರೆ. ಬೆಳಗ್ಗೆ 6 ಗಂಟೆ ಸುಮಾರಿಗೆ ಹೊತ್ತಿಕೊಂಡ ಬೆಂಕಿಯಿಂದಾಗಿ ಸ್ಟೇಷನ್ ರಸ್ತೆಯಲ್ಲಿರುವ ಜಿಲ್ಲಾ ಪರಿಷತ್ತಿನ ಕೇಂದ್ರ ಕಚೇರಿ ಬಳಿ ಇರುವ ವಿಪತ್ತು ನಿಯಂತ್ರಣ ಕೊಠಡಿಯಲ್ಲಿದ್ದ ಫೋಟೊಕಾಪಿ ಯಂತ್ರ ಹಾಗೂ ಕೇಬಲ್‌ಗಳು ಸುಟ್ಟು ಕರಕಲಾಗಿವೆ ಎಂದು ತಿಳಿದುಬಂದಿದೆ.
ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಥಾಣೆ ಮುನ್ಸಿಪಲ್ ಕಾರ್ಪೊರೇಷನ್‌ನ ಪ್ರಾದೇಶಿಕ ವಿಪತ್ತು ನಿರ್ವಹಣಾ ಕೋಶದ (ಆರ್‌ಡಿಎಂಸಿ) ತಂಡವು ಬೆಂಕಿಯನ್ನು 30 ನಿಮಿಷಗಳಲ್ಲಿ ನಂದಿಸುವಲ್ಲಿ ಯಶಸ್ವಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದ್ರೆ ಅಗ್ನಿ ಅವಘಡಕ್ಕೆ ಕಾರಣ ತಿಳಿದುಬಂದಿಲ್ಲ ಎಂದಿದ್ದಾರೆ.
ಓದಿ: ಆಂಧ್ರಪ್ರದೇಶದ ನಕ್ಷೆ ಸೇರಿದ 13 ಹೊಸ ಜಿಲ್ಲೆಗಳು : ಒಟ್ಟು ಜಿಲ್ಲೆಗಳ ಸಂಖ್ಯೆ 26ಕ್ಕೆ ಏರಿಕೆ