ETV Bharat / bharat

ಮುಂಬೈ ಕೋವಿಡ್​ ಆಸ್ಪತ್ರೆಯಲ್ಲಿ ಬೆಂಕಿ: ಸಾವಿನ ಸಂಖ್ಯೆ 10ಕ್ಕೆ ಏರಿಕೆ - ಕೋವಿಡ್ ಆಸ್ಪತ್ರೆಯಲ್ಲಿ ಬೆಂಕಿ

ಮುಂಬೈ ಮಾಲ್​ನಲ್ಲಿ ನಡೆಸಲಾಗುತ್ತಿದ್ದ ಕೋವಿಡ್​ ಆಸ್ಪತ್ರೆಯಲ್ಲಿ ದಿಢೀರ್​ ಬೆಂಕಿ ಕಾಣಿಸಿಕೊಂಡಿದ್ದು, 10 ಮಂದಿ ಮೃತಪಟ್ಟಿದ್ದಾರೆ. 70ಕ್ಕೂ ಹೆಚ್ಚು ರೋಗಿಗಳನ್ನು ರಕ್ಷಿಸಲಾಗಿದೆ.

Fire breaks out at COVID-19 hospital in Mumbai

author img

By

Published : Mar 26, 2021, 5:14 AM IST

Updated : Mar 26, 2021, 12:40 PM IST

ಮುಂಬೈ: ಕೋವಿಡ್​​-19 ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಿ 10 ರೋಗಿಗಳು ಮೃತಪಟ್ಟಿದ್ದು, 70ಕ್ಕೂ ಹೆಚ್ಚು ರೋಗಿಗಳನ್ನು ರಕ್ಷಣೆ ಮಾಡಲಾಗಿದೆ. ಮಹಾರಾಷ್ಟ್ರದ ಮುಂಬೈನಲ್ಲಿರುವ ಭನುಪ್​ ಪ್ರದೇಶದಲ್ಲಿನ ಶಾಪಿಂಗ್​ ಮಾಲ್​​ನಲ್ಲಿದ್ದ ಆಸ್ಪತ್ರೆಯಲ್ಲಿ ದುರಂತ ನಡೆದಿದೆ.

ಮುಂಬೈ ಮೇಯರ್​​ ಕಿಶೋರಿ ಪೆಡ್ನೇಕರ್​​ ತಿಳಿಸಿರುವ ಪ್ರಕಾರ, ಬೆಂಕಿಗೆ ಕಾರಣ ಏನು ಎಂಬುದು ತಿಳಿದು ಬಂದಿಲ್ಲ. ಆದರೆ ಇಲ್ಲಿಯವರೆಗೆ 70ಕ್ಕೂ ಹೆಚ್ಚು ರೋಗಿಗಳ ರಕ್ಷಣೆ ಮಾಡಲಾಗಿದೆ. ಪ್ರಕರಣ ಗಂಭೀರವಾಗಿದ್ದು, ತನಿಖೆ ನಡೆಸಲಾಗುವುದು ಎಂದಿದ್ದಾರೆ.

ಮುಂಬೈ ಕೋವಿಡ್​ ಆಸ್ಪತ್ರೆಯಲ್ಲಿ ಬೆಂಕಿ

ಸ್ಥಳದಲ್ಲಿ 23 ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿವೆ ಎಂದು ಡಿಸಿಪಿ ಪ್ರಶಾಂತ್​ ಕದಂ ತಿಳಿಸಿದ್ದಾರೆ. ಗಾಯಗೊಂಡಿರುವ ರೋಗಿಗಳಿಗೆ ಬೇರೆ ಆಸ್ಪತ್ರೆಗೆ ಸ್ಥಳಾಂತರಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಕಳೆದ ಕೆಲ ದಿನಗಳಿಂದ ಮಹಾರಾಷ್ಟ್ರದಲ್ಲಿ ಮಹಾಮಾರಿ ಕೊರೊನಾ ವೈರಸ್ ಹಾವಳಿ ಜೋರಾಗಿದ್ದು, ಸಾವಿರಾರು ಪ್ರಕರಣಗಳು ಪತ್ತೆಯಾಗುತ್ತಿವೆ. ನಿನ್ನೆ ಒಂದೇ ದಿನ ದಾಖಲೆಯ 36 ಸಾವಿರ ಕೇಸ್​ಗಳು ವರದಿಯಾಗಿದ್ದು, ವಾಣಿಜ್ಯ ನಗರಿ ಮುಂಬೈನಲ್ಲೇ 5 ಸಾವಿರ ಪ್ರಕರಣ ದಾಖಲಾಗಿವೆ.

Last Updated : Mar 26, 2021, 12:40 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.