ನವದೆಹಲಿ: ದೆಹಲಿಯ ಸಾಕೆತ್ ಕೋರ್ಟ್ ವಸತಿ ಸಮುಚ್ಚಯದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಓರ್ವ ಹಿರಿಯ ವ್ಯಕ್ತಿ ಸಾವನ್ನಪ್ಪಿದ್ದಾನೆ. ಶನಿವಾರ ಸಂಜೆ 5:30ರ ವೇಳೆ ಈ ಘಟನೆ ನಡೆದಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ದೆಹಲಿ ಅಗ್ನಿ ಶಾಮಕ ದಳ ದೌಡಾಯಿಸಿದ್ದು, ನಾಲ್ವರ ರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಕಟ್ಟಡದ ನಾಲ್ಕನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು.
ಘಟನೆ ವೇಳೆ ನಾಲ್ಕು ಕುಟುಂಬದ ಸದಸ್ಯರು ಸಿಲುಕಿಕೊಂಡಿದ್ದರು. ಅವರನ್ನ ಸುರಕ್ಷಿತವಾಗಿ ರಕ್ಷಣೆ ಮಾಡಲಾಗಿದೆ. ಆದರೆ 83 ವರ್ಷದ ವ್ಯಕ್ತಿಯೋರ್ವ ಅರೆಪ್ರಜ್ಞಾವಸ್ಥೆಯಲ್ಲಿ ಸಿಕ್ಕಿದ್ದರು. ತಕ್ಷಣವೇ ಅವರನ್ನ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೆ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ಘೋಷಣೆ ಮಾಡಿದ್ದಾಗಿ ತಿಳಿಸಿದ್ದಾರೆ.
ಐದು ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಿಯಂತ್ರಣಕ್ಕೆ ತರಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.