ಡುಂಗರ್ಪುರ್(ರಾಜಸ್ಥಾನ): ಡುಂಗರ್ಪುರ್ನ ಮೆಡಿಕಲ್ ಕಾಲೇಜಿನ ಆಸ್ಪತ್ರೆಯಲ್ಲಿ ಶನಿವಾರ ಅಗ್ನಿ ಅವಘಡ ಸಂಭವಿಸಿದೆ. ಈ ಬೆಂಕಿ ಅನಾಹುತದಲ್ಲಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ 12 ನವಜಾತ ಶಿಶುಗಳನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಡುಂಗರ್‌ಪುರ ವೈದ್ಯಕೀಯ ಕಾಲೇಜಿನ ನವಜಾತ ಶಿಶುಗಳ ತೀವ್ರ ನಿಗಾ ಘಟಕ (ಎನ್‌ಐಸಿಯು)ದ ವಾರ್ಡ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಈ ಘಟನೆ ನಡೆದಿದೆ.
ಕಾಲೇಜಿನ ವೈದ್ಯಕೀಯ ಅಧೀಕ್ಷಕ ಡಾ.ಮಹೇಂದ್ರ ದಾಮೋರ್, ಈ ಕುರಿತು ಪ್ರತಿಕ್ರಿಯಿಸಿದ್ದಾರೆ. ಬೆಂಕಿ ಕಾಣಿಸಿಕೊಂಡ ಕೂಡಲೇ ಅಗ್ನಿಶಾಮಕ ದಳದವರಿಗೆ ತಿಳಿಸಿದ್ದು, ಕೂಡಲೇ ಆಗಮಿಸಿ ಬೆಂಕಿ ಆರಿಸಿ, 12 ನವಜಾತ ಶಿಶುಗಳನ್ನು ರಕ್ಷಿಸಿದ್ದಾರೆ. ಡುಂಗರ್‌ಪುರ ವೈದ್ಯಕೀಯ ಕಾಲೇಜಿನ ಎನ್‌ಐಸಿಯು ವಾರ್ಡ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸುಮಾರು 12 ಮಕ್ಕಳನ್ನು ರಕ್ಷಿಸಲಾಗಿದೆ. ಒಟ್ಟು 3 ಅಗ್ನಿಶಾಮಕ ಟೆಂಡರ್‌ಗಳಿಂದ ಬೆಂಕಿಯನ್ನು ನಂದಿಸಲಾಗಿದೆ ಎಂದು ಅವರು ತಿಳಿಸಿದರು.
ಅಗ್ನಿಶಾಮಕ ಸುರಕ್ಷತಾ ಅಧಿಕಾರಿ ಬಾಬುಲಾಲ್ ಚೌಧರಿ ಮಾತನಾಡಿ, ನವಜಾತ ಶಿಶುವಿನ ವಾರ್ಡ್‌ನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಅಗ್ನಿಶಾಮಕ ತಂಡವು ಮಕ್ಕಳನ್ನು ಸ್ಥಳಾಂತರಿಸುವಲ್ಲಿ ಯಶಸ್ವಿಯಾಗಿದೆ. ‘ನವಜಾತ ಶಿಶುವಿನ ವಾರ್ಡ್‌ನಲ್ಲಿ ಬೆಂಕಿ ಅವಘಡ ಸಂಭವಿಸಿರುವ ಬಗ್ಗೆ ನಮಗೆ ಆಸ್ಪತ್ರೆಯಿಂದ ಮಾಹಿತಿ ಬಂದಿದ್ದು, ನಾನು ನನ್ನ ತಂಡದೊಂದಿಗೆ ಮೂರು ವಾಹನಗಳೊಂದಿಗೆ ತೆರಳಿದ್ದೆವು. ವಾರ್ಡ್‌ನಲ್ಲಿ ಹೊಗೆ ಇತ್ತು, ನಾವು ಬೆಂಕಿಯನ್ನು ನಂದಿಸಿ ಮಕ್ಕಳನ್ನು ಸುರಕ್ಷಿತವಾಗಿ ಸ್ಥಳಾಂತರಿಸಿದೆವು ಎಂದು ಅವರು ಹೇಳಿದರು. ಇನ್ನು ಈ ಘಟನೆಗೆ ಸಂಬಂಧಿಸಿ ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.
ಇದನ್ನೂ ಓದಿ: ಅಪ್ರಾಪ್ತ ಬಾಲಕಿ ಅತ್ಯಾಚಾರ ಕೊಲೆ ಪ್ರಕರಣ: ಭುಗಿಲೆದ್ದ ಹಿಂಸಾಚಾರ