ನವದೆಹಲಿ: ನಾರ್ತ್ ಬ್ಲಾಕ್‌ನಲ್ಲಿರುವ ಗೃಹ ಸಚಿವಾಲಯದ ಮೊದಲ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮಂಗಳವಾರ ತಡರಾತ್ರಿ ಅಂದರೆ ಇಂದು 12.20ರ ಸುಮಾರಿಗೆ ಅಗ್ನಿಶಾಮಕ ದಳಕ್ಕೆ ಕರೆ ಬಂದಿದ್ದು, ಬೆಂಕಿ ನಂದಿಸಲು ಏಳು ಅಗ್ನಿಶಾಮಕ ವಾಹನಗಳನ್ನು ಸ್ಥಳಕ್ಕೆ ಕಳುಹಿಸಲಾಗಿತ್ತು.
ಗೃಹ ಇಲಾಖೆಯ ಮೇಲಿನ ನೆಲ ಮಹಡಿಯ ಕೊಠಡಿ ಸಂಖ್ಯೆ 82A ಮತ್ತು 82B ನಲ್ಲಿರುವ ದೂರವಾಣಿ ವಿನಿಮಯ ಕೇಂದ್ರದಲ್ಲಿ ಈ ಬೆಂಕಿ ಕಾಣಿಸಿಕೊಂಡಿದೆ. ಕೊಠಡಿಯಲ್ಲಿ ಕಂಪ್ಯೂಟರ್, ಏರ್ ಕಂಡಿಷನರ್, ತಂತಿಗಳು, ದೂರವಾಣಿ ವಿನಿಮಯದ ಪರಿಕರಗಳು ಮತ್ತು ಇತರ ವಸ್ತುಗಳು ಇದ್ದವು ಎಂದು ಅಗ್ನಿಶಾಮಕ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಅಗ್ನಿ ಅನಾಹುತಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ, ಆದರೆ ಶಾರ್ಟ್ ಸರ್ಕ್ಯೂಟ್ನಿಂದಾಗಿ ಈ ಘಟನೆ ನಡೆದಿರಬಹುದೆಂದು ಹೇಳಲಾಗುತ್ತಿದೆ. ಘಟನೆಯಲ್ಲಿ ಯಾರಿಗೂ ಗಾಯವಾಗಿಲ್ಲ. ತಡರಾತ್ರಿ 1.15ರ ವೇಳೆಗೆಲ್ಲ ಕಚೇರಿಯಲ್ಲಿ ಹೊತ್ತಿಕೊಂಡಿದ್ದ ಬೆಂಕಿಯನ್ನು ಹತೋಟಿಗೆ ತರಲಾಯಿತು ಎಂದು ತಿಳಿದು ಬಂದಿದೆ.
ಇದನ್ನು ಓದಿ:ಮರುಕಳಿಸಿದ ನಿರ್ಭಯ ಅತ್ಯಾಚಾರ.. ಬಸ್ಸಿನಲ್ಲೇ ಬಾಲಕಿಗೆ ಸಾರಾಯಿ ಕುಡಿಸಿ ಸಾಮೂಹಿಕ ಅತ್ಯಾಚಾರ!