ವಿಶಾಖಪಟ್ಟಣಂ (ಆಂಧ್ರಪ್ರದೇಶ): 1.2 ಮೆಗಾವ್ಯಾಟ್ ವಿದ್ಯುತ್ ಮೋಟರ್‌ನಲ್ಲಿ ಟರ್ಬೈನ್ನಲ್ಲಿ ತೈಲ ಸೋರಿಕೆಯಾದ ಕಾರಣ ವಿಶಾಖಪಟ್ಟಣಂ ಸ್ಟೀಲ್ ಪ್ಲಾಂಟ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಅಗ್ನಿಶಾಮಕ ದಳ ಕಾರ್ಯಾಚರಣೆ ನಡೆಸುತ್ತಿದೆ. ಈ ಘಟನೆಯಿಂದಾಗಿ ಯಾವುದೇ ಸಾವು - ನೋವು ವರದಿಯಾಗಿಲ್ಲ.
ಇದಕ್ಕೂ ಮುನ್ನ ನವೆಂಬರ್ 3ರಂದು ತೆಲಂಗಾಣದ ಮೆಡ್ಚಲ್ ರೈಲ್ವೆ ನಿಲ್ದಾಣದಲ್ಲಿ ರೈಲ್ವೆ ಬೋಗಿಯಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿತ್ತು. ಕೋಚ್‌ನಲ್ಲಿ ಪ್ರಯಾಣಿಕರು ಇಲ್ಲದ ಕಾರಣ ಯಾವುದೇ ಪ್ರಾಣಹಾನಿ ಸಂಭವಿಸಿರಲಿಲ್ಲ.