ಜಾಮ್‌ನಗರ(ಗುಜರಾತ್): ಇಲ್ಲಿನ ಸಿಕ್ಕಾ ಪಾಟಿಯಾ ಸಮೀಪದ ಹೋಟೆಲ್‌ನಲ್ಲಿ ಹಠಾತ್ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಹೊತ್ತಿಕೊಂಡಾಗ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಹೋಟೆಲ್‌ನಲ್ಲಿ ಸಿಲುಕಿಕೊಂಡಿದ್ದ 30 ಮಂದಿಯನ್ನು ಅಗ್ನಿಶಾಮಕ ದಳ ರಕ್ಷಿಸುವಲ್ಲಿ ಯಶಸ್ವಿಯಾಗಿದೆ.
ಮಾಹಿತಿ ಪ್ರಕಾರ ಶಾರ್ಟ್ ಸರ್ಕ್ಯೂರ್ಟ್ನಿಂದಾಗಿ ಅಲೆಂಟೊ ಹೋಟೆಲ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಇದ್ದಕ್ಕಿದ್ದಂತೆ ದೈತ್ಯಾಕಾರದ ರೂಪವನ್ನು ಪಡೆದುಕೊಂಡಿತು. ಹೋಟೆಲ್ ಒಟ್ಟು ಐದು ಮಹಡಿಗಳನ್ನು ಹೊಂದಿದ್ದು, ಐದು ಮಹಡಿಗಳು ಸುಟ್ಟು ಹೋಗಿವೆ. ಘಟನೆ ಕುರಿತು ಮಾಹಿತಿ ಪಡೆದ ನಂತರ ಜಿಲ್ಲಾಧಿಕಾರಿ, ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಆ್ಯಂಬುಲೆನ್ಸ್ ಸ್ಥಳಕ್ಕೆ ದೌಡಾಯಿಸಿದವು.
ಅಗ್ನಿಶಾಮಕ ದಳವೂ ಬೆಂಕಿಯನ್ನು ನಿಯಂತ್ರಿಸಲು ಹರಸಾಹಸಪಟ್ಟಿತು. 30 ಜನರನ್ನು ರಕ್ಷಿಸಿ ಸುರಕ್ಷಿತ ಸ್ಥಳಕ್ಕೆ ಕರೆ ತರಲು ಅಗ್ನಿಶಾಮಕ ದಳದ ಸಿಬ್ಬಂದಿ ಶ್ರಮಪಟ್ಟರು. ತೀವ್ರ ಸುಟ್ಟಗಾಯಗಳಾಗಿದ್ದವರನ್ನು ತಕ್ಷಣ ರಿಲಯನ್ಸ್ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಇನ್ನುಳಿದವರನ್ನು ಜಾಮ್‌ನಗರದ ಗುರು ಗೋವಿಂದ್ ಸಿಂಗ್ ಆಸ್ಪತ್ರೆಗೆ ದಾಖಲಿಸಲಾಯಿತು. ಈ ಘಟನೆ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಓದಿ: ಸಿನಿಮಾ ನೋಡಿ ಮುಕ್ತಿ ಬೇಕೆಂದು ಆತ್ಮಹತ್ಯೆಗೆ ಯತ್ನಿಸಿದ ಯುವಕ