ETV Bharat / bharat

Kolkata airport: ಕೋಲ್ಕತ್ತಾ ವಿಮಾನ ನಿಲ್ದಾಣದಲ್ಲಿ ಅಗ್ನಿ ಅವಘಡ; ಸ್ಥಳಕ್ಕೆ ಅಗ್ನಿಶಾಮಕ ದಳ ದೌಡು

ಕೋಲ್ಕತ್ತಾ ವಿಮಾನ ನಿಲ್ದಾಣದೊಳಗೆ ಅಗ್ನಿ ಅವಘಡ ಸಂಭವಿಸಿದೆ.

Fire breaks out in Kolkata airport
ಕೋಲ್ಕತ್ತಾ ವಿಮಾನ ನಿಲ್ದಾಣದಲ್ಲಿ ಅಗ್ನಿ ಅವಘಡ
author img

By

Published : Jun 14, 2023, 10:24 PM IST

Updated : Jun 14, 2023, 11:00 PM IST

ಕೋಲ್ಕತ್ತಾ (ಪಶ್ಚಿಮ ಬಂಗಾಳ): ಪಶ್ಚಿಮ ಬಂಗಾಳ ರಾಜಧಾನಿ ಕೋಲ್ಕತ್ತಾದಲ್ಲಿರುವ ನೇತಾಜಿ ಸುಭಾಶ್ಚಂದ್ರ ಬೋಸ್‌ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಭದ್ರತಾ ಕೌಂಟರ್ ಬಳಿ ಇಂದು ರಾತ್ರಿ ಭಾರಿ ಬೆಂಕಿ ಅನಾಹುತ ಸಂಭವಿಸಿತು. ಅಗ್ನಿಶಾಮಕ ದಳದ ಸಿಬ್ಬಂದಿ ಎರಡು ವಾಹನಗಳಲ್ಲಿ ಸ್ಥಳಕ್ಕೆ ದೌಡಾಯಿಸಿ, ಬೆಂಕಿ ನಂದಿಸುವ ಕಾರ್ಯಾಚರಣೆ ಕೈಗೊಂಡರು. ಸದ್ಯದ ಮಾಹಿತಿ ಪ್ರಕಾರ, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಘಟನೆಯ ಸಂಪೂರ್ಣ ವಿವರ: ದೇಶೀಯ ಟರ್ಮಿನಲ್‌ನಲ್ಲಿ ಗೇಟ್ 3ಎ ಒಂದು ಬದಿಯಲ್ಲಿ ಇಂದು ರಾತ್ರಿ 9:20ರ ಸುಮಾರಿಗೆ ಇದ್ದಕ್ಕಿದ್ದಂತೆ ಹೊಗೆ ಕಾಣಿಸಿಕೊಂಡಿತು. ಇದರಿಂದ ಪ್ರಯಾಣಿಕರಲ್ಲಿ ಭೀತಿ ಆವರಿಸಿತು. ಇದರ ಬೆನ್ನಲ್ಲೇ ಬೆಂಕಿಯ ಜ್ವಾಲೆ ಹೆಚ್ಚಿತು. ಕೂಡಲೇ ವಿಮಾನ ನಿಲ್ದಾಣದ ಭದ್ರತೆಯ ಹೊಣೆ ಹೊತ್ತಿದ್ದ ಸಿಐಎಸ್‌ಎಫ್ ಸಿಬ್ಬಂದಿ ಬೆಂಕಿ ನಂದಿಸಲು ಪ್ರಯತ್ನಿಸಿದರು. ಆದರೆ, ಜ್ವಾಲೆ ಕ್ರಮೇಣ ಹೆಚ್ಚಾಗುತ್ತಿದ್ದಂತೆ ಅಗ್ನಿಶಾಮಕ ದಳ ಆಗಮಿಸಿ, ಬೆಂಕಿಯನ್ನು ಹತೋಟಿಗೆ ತರಲು ಹರಸಾಹಸಪಟ್ಟರು.

ಸದ್ಯ ವಿಮಾನ ನಿಲ್ದಾಣದೊಳಗಿದ್ದ ಪ್ರಯಾಣಿಕರನ್ನು ಸುರಕ್ಷಿತವಾಗಿ ಸ್ಥಳಾಂತರ ಮಾಡಲಾಗಿದೆ. ಪ್ರಾಥಮಿಕ ಮಾಹಿತಿ ಪ್ರಕಾರ, ಶಾರ್ಟ್​ ಶರ್ಕ್ಯೂಟ್​ನಿಂದ ಅವಘಡ ಉಂಟಾಗಿರುವ ಶಂಕೆ ವ್ಯಕ್ತವಾಗಿದೆ. ಸೆಂಟ್ರಲ್ ಎಸಿ ಸ್ಥಗಿತಗೊಳಿಸಲಾಗಿತ್ತು. ಪ್ರಯಾಣಿಕರ ಸುರಕ್ಷತೆಗಾಗಿ ಹಲವಾರು ಗೇಟ್‌ಗಳನ್ನು ಮುಚ್ಚಲಾಗಿದೆ. ಪೊಲೀಸ್ ಕಮಿಷನರ್​ ಸೇರಿ ಹಲವರು ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

  • There was a minor fire and smoke on the check-in area portal D at 9:12 pm and fully extinguished by 9:40 pm. All passengers are evacuated safely and the check-in process was suspended due to the presence of smoke in the check-in area. Check-in and operation have been resumed… pic.twitter.com/wG96sRlkrH

    — ANI (@ANI) June 14, 2023 " class="align-text-top noRightClick twitterSection" data=" ">

ಈ ಬಗ್ಗೆ ವಿಮಾನ ನಿಲ್ದಾಣ ಪ್ರಾಧಿಕಾರ ಹೇಳಿಕೆ ಬಿಡುಗಡೆ ಮಾಡಿದ್ದು, ಚೆಕ್-ಇನ್ ಏರಿಯಾ ಪೋರ್ಟಲ್ ಡಿನಲ್ಲಿ ರಾತ್ರಿ 9:12 ಗಂಟೆಗೆ ಸಣ್ಣ ಬೆಂಕಿ ಮತ್ತು ಹೊಗೆ ಕಾಣಿಸಿಕೊಂಡಿತ್ತು. 9:40ರ ಹೊತ್ತಿಗೆ ಸಂಪೂರ್ಣವಾಗಿ ಬೆಂಕಿ ನಂದಿಸಲಾಗಿದೆ. ಎಲ್ಲ ಪ್ರಯಾಣಿಕರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ. ಬೆಂಕಿಯಿಂದ ಸ್ಥಗಿತಗೊಳಿಸಲಾಗಿದ್ದ ಚೆಕ್​ ಇನ್ ಪ್ರಕ್ರಿಯೆ ಮತ್ತು ವಿಮಾನ ಕಾರ್ಯಾಚರಣೆಯನ್ನೂ ಪುನರಾರಂಭಿಸಲಾಗಿದೆ ಎಂದು ಮಾಹಿತಿ ನೀಡಿದೆ.

ಇದನ್ನೂ ಓದಿ: Fire incident: ಸರ್ಕಾರಿ ಕಚೇರಿಗಳಿರುವ ಬಹುಮಹಡಿ ಕಟ್ಟಡದಲ್ಲಿ ಭಾರಿ ಅಗ್ನಿ ಅವಘಡ

ಇದೇ ಜೂನ್ 12ರಂದು ಮಧ್ಯಪ್ರದೇಶದ ರಾಜಧಾನಿ ಭೋಪಾಲ್‌ನಲ್ಲಿ ಸರ್ಕಾರಿ ಕಚೇರಿಗಳನ್ನು ಹೊಂದಿರುವ ಬಹುಮಹಡಿ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿತ್ತು. ಮೂರನೇ ಮಹಡಿಯಲ್ಲಿ ಹೊತ್ತಿಕೊಂಡು ಬೆಂಕಿಯ ಕಿಡಿ ನಾಲ್ಕನೇ ಮಹಡಿಗೆ ಹಬ್ಬಿ ಸಾಕಷ್ಟು ಆತಂಕವನ್ನು ಸೃಷ್ಟಿಸಿತ್ತು. ನಿರಂತರವಾಗಿ 20 ಗಂಟೆಗಳ ಕಾಲ ಶ್ರಮಿಸಿ ಬೆಂಕಿಯನ್ನು ನಂದಿಸಲಾಗಿತ್ತು. ಈ ಕಟ್ಟಡದಲ್ಲಿ ಬುಡಕಟ್ಟು ಕಲ್ಯಾಣ ಇಲಾಖೆ, ಆರೋಗ್ಯ ಇಲಾಖೆ ಸೇರಿ ಕಚೇರಿಗಳು ಇದ್ದವು. ಹಲವು ದಾಖಲೆಗಳು ಹಾಗೂ ಕಂಪ್ಯೂಟರ್‌ಗಳು ಬೆಂಕಿಗಾಹುತಿಯಾದ ಶಂಕೆ ವ್ಯಕ್ತವಾಗಿತ್ತು.

Last Updated : Jun 14, 2023, 11:00 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.