ETV Bharat / bharat

ನರೇಲಾ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ: ಇಬ್ಬರು ಸಾವು - ನರೇಲಾ ಕೈಗಾರಿಕಾ ಪ್ರದೇಶದಲ್ಲಿನ ಪಾದರಕ್ಷೆ ಕಾರ್ಖಾನೆ

ದೆಹಲಿಯ ನರೇಲಾ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, ಇನ್ನೂ ಹಲವರು ಕಾರ್ಖಾನೆಯಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

Fire breaks out in Narela Industrial Area
ನರೇಲಾ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ
author img

By

Published : Nov 1, 2022, 11:51 AM IST

ನವದೆಹಲಿ: ದೆಹಲಿಯ ನರೇಲಾ ಕೈಗಾರಿಕಾ ಪ್ರದೇಶದಲ್ಲಿನ ಪಾದರಕ್ಷೆ ಕಾರ್ಖಾನೆಯಲ್ಲಿ ಮಂಗಳವಾರ ಬೆಂಕಿ ಕಾಣಿಸಿಕೊಂಡಿದ್ದು, ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದಾರೆ.

ದೆಹಲಿ ಅಗ್ನಿಶಾಮಕ ಅಧಿಕಾರಿಗಳ ಪ್ರಕಾರ, ಈವರೆಗೆ ಮೂವರನ್ನು ರಕ್ಷಿಸಲಾಗಿದ್ದು, ಇನ್ನೂ ಕೆಲವರು ಅವಘಡದಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಕಟ್ಟಡದೊಳಗೆ ಸಿಲುಕಿರುವ ಜನರನ್ನು ಸ್ಥಳಾಂತರಿಸಲು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

10 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿವೆ. ಅವಘಡದಲ್ಲಿ ಕೆಲವರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಇದನ್ನೂ ಓದಿ: ವಿಶ್ವವಿಖ್ಯಾತ ಹಂಪಿಯಲ್ಲಿ ಅಗ್ನಿ ಅವಘಡ.. ಸಿಲಿಂಡರ್ ಸ್ಪೋಟಗೊಂಡು ಸುಟ್ಟು ಭಸ್ಮವಾದ ಹೋಟೆಲ್​

ETV Bharat Logo

Copyright © 2025 Ushodaya Enterprises Pvt. Ltd., All Rights Reserved.