ನವದೆಹಲಿ: ಪಶ್ಚಿಮ ದೆಹಲಿಯ ವಿಕಾಸಪುರಿ ಪ್ರದೇಶದ ಡಿಡಿಎ ಲಾಲ್ ಮಾರ್ಕೆಟ್‌ನ ಅಂಗಡಿಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಸ್ಥಳಕ್ಕೆ 19 ಅಗ್ನಿಶಾಮಕ ವಾಹನಗಳು ಆಗಮಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತವಾಗಿವೆ.
ಬೆಳಗ್ಗೆ 6 ಗಂಟೆ ಸುಮಾರಿಗೆ ಅಗ್ನಿಶಾಮಕ ನಿಯಂತ್ರಣ ಕೊಠಡಿಗೆ ಕರೆ ಮಾಡಿ ಮಾಹಿತಿ ನೀಡಲಾಯಿತು. ಬಳಿಕ ಸ್ಥಳಕ್ಕಾಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಘಟನೆಯಿಂದ ಸಾವು - ನೋವು ಸಂಭವಿಸಿರುವ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ, ಲಕ್ಷಾಂತರ ರೂ. ನಷ್ಟವಾಗಿದೆ ಎನ್ನಲಾಗಿದೆ.
ಮಾಹಿತಿ ಪ್ರಕಾರ, ಕಿರಾಣಿ ಅಂಗಡಿಯಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಸ್ಥಳೀಯರು ಬೆಂಕಿ ನಂದಿಸಲು ಪ್ರಯತ್ನಿಸಿದ್ದಾರೆ. ಆದರೆ, ವಿಫಲವಾದ ಪರಿಣಾಮ ಕೂಡಲೇ ಅಗ್ನಿಶಾಮಕ ದಳಕ್ಕೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಬಳಿಕ ಇನ್ನೂ ಕೆಲವು ಅಂಗಡಿಗಳಿಗೆ ಬೆಂಕಿ ಆವರಿಸಿದ್ದು, ಹತ್ತಕ್ಕೂ ಹೆಚ್ಚು ಅಂಗಡಿಗಳಿವೆ ಹಾನಿಯಾಗಿದೆ. ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎನ್ನಲಾಗಿದೆ. ವಿಕಾಸಪುರಿ ಪೊಲೀಸ್ ಠಾಣೆ ಕೂಡ ಘಟನಾ ಸ್ಥಳದ ಸಮೀಪದಲ್ಲಿದೆ.
ಇದನ್ನೂ ಓದಿ: ಪುಣೆಯ ಏರ್ ಫಿಲ್ಟರ್ ಕಂಪನಿಯಲ್ಲಿ ಬೆಂಕಿ ಅವಘಡ: ಇಬ್ಬರು ಗಾಯ