ETV Bharat / bharat

ಬಹು ಅಂತಸ್ತಿನ ಕಟ್ಟಡದಲ್ಲಿ ಅಗ್ನಿ ಅವಘಡ.. ಅಗ್ನಿಶಾಮಕ ಸಿಬ್ಬಂದಿಗೆ ಗಾಯ - ಮುಂಬೈನಲ್ಲಿ ಅಗ್ನಿ ಅವಘಡ

ಬಹು ಅಂತಸ್ತಿನ ಕಟ್ಟಡದಲ್ಲಿ ಅಗ್ನಿಅವಘಡ ಸಂಭವಿಸಿದ್ದು, ಓರ್ವ ಅಗ್ನಿಶಾಮಕ ಸಿಬ್ಬಂದಿ ಗಾಯಗೊಂಡಿದ್ದಾರೆ.

ಅಗ್ನಿ ಅವಘಡ
ಅಗ್ನಿ ಅವಘಡ
author img

By

Published : Sep 4, 2021, 2:18 PM IST

ಮುಂಬೈ: ನಗರದ ಬೋರಿವಲಿಯಲ್ಲಿರುವ ಬಹು ಅಂತಸ್ತಿನ ವಸತಿ ಕಟ್ಟಡದ ಏಳನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ನಂದಿಸಲು ಕಾರ್ಯಾಚರಣೆಯಲ್ಲಿ ತೊಡಗಿದ್ದ ಓರ್ವ ಅಗ್ನಿಶಾಮಕ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಅಲ್ಲಿನ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬಹು ಅಂತಸ್ತಿನ ಕಟ್ಟಡದಲ್ಲಿ ಅಗ್ನಿ ಅವಘಡ.. ಅಗ್ನಿಶಾಮಕ ಸಿಬ್ಬಂದಿಗೆ ಗಾಯ

ಮುಂಬೈನ ಬೋರಿವಲಿ ಪಶ್ಚಿಮದಲ್ಲಿರುವ ಗಂಜವಾಲಾ ರೆಸಿಡೆನ್ಸಿ ಕಟ್ಟಡದಲ್ಲಿ ಬೆಳಗ್ಗೆ 7 ಗಂಟೆಗೆ ಬೆಂಕಿ ಕಾಣಿಸಿಕೊಂಡಿದೆ. ವಿಷಯ ತಿಳಿದು ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ, ನಿವಾಸಿಗಳನ್ನು ರಕ್ಷಿಸಿದ್ದಾರೆ.

ಈ ವೇಳೆ ಸಿಬ್ಬಂದಿ (ನಾಥು ಸರ್ಜೇರಾವ್ ಬಾಧಕ್)ಗೆ ಗಾಯಗಳಾಗಿವೆ. ಆದರೆ, ಎಲ್ಲಾ ನಿವಾಸಿಗಳನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗಾಯಾಳುವನ್ನು ಶತಾಬ್ದಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.

ಇದನ್ನೂ ಓದಿ:ಸ್ಪಾಂಜ್ ತಯಾರಿಕಾ ಕಾರ್ಖಾನೆಯಲ್ಲಿ ಅಗ್ನಿ ಅವಘಡ.. ಆರು ಮಂದಿ ದುರ್ಮರಣ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.