ನಾಂದೇಡ್( ಮಹಾರಾಷ್ಟ್ರ): ಪುಣೆಯ ನಾಂದೇಡ್ ನಗರದ ನಿರ್ಮಲಾ ಹೈಟ್ಸ್ ಕಟ್ಟದಲ್ಲಿರುವ ಭಾವೇಶ್ ಹೋಟೆಲ್ನಲ್ಲಿ ಮಧ್ಯರಾತ್ರಿ ಸುಮಾರಿಗೆ ಅಗ್ನಿ ಅವಘಡ ಸಂಭವಿಸಿದೆ.
ಘಟನೆ ಮಾಹಿತಿ ತಿಳಿದು ಸ್ಥಳಕ್ಕೆ ಅಗ್ನಿಶಾಮಕದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆದರೆ ಹೋಟೆಲ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಬೆಂಕಿ ಅನಾಹುತಕ್ಕೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ.