ETV Bharat / bharat

ಕೋರ್ಟ್​ನಲ್ಲಿ ವಕೀಲರ ಸೋಗಿನಲ್ಲಿದ್ದ ದುಷ್ಕರ್ಮಿಯಿಂದ ಫೈರಿಂಗ್​: ಮಹಿಳೆಗೆ ಗುಂಡೇಟು - ಫೈರಿಂಗ್

ವಕೀಲರ ಸೋಗಿನಲ್ಲಿದ್ದ ದುಷ್ಕರ್ಮಿಯೋರ್ವ ಗುಂಡು ಹಾರಿಸಿರುವ ಘಟನೆ ದೆಹಲಿಯ ಸಾಕೇತ್ ನ್ಯಾಯಾಲಯದಲ್ಲಿ ನಡೆದಿದೆ.

Firing in Delhi's Saket court, woman injured
ಕೋರ್ಟ್​ನಲ್ಲಿ ವಕೀಲರ ಸೋಗಿನಲ್ಲಿದ್ದ ದುಷ್ಕರ್ಮಿಗಳಿಂದ ಫೈರಿಂಗ್​
author img

By

Published : Apr 21, 2023, 12:02 PM IST

Updated : Apr 21, 2023, 1:01 PM IST

ದೆಹಲಿಯ ಸಾಕೇತ್ ನ್ಯಾಯಾಲಯದಲ್ಲಿ ಗುಂಡಿನ ದಾಳಿ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಸಾಕೇತ್ ನ್ಯಾಯಾಲಯದಲ್ಲಿ ಶುಕ್ರವಾರ ಬೆಳಗ್ಗೆ ಗುಂಡಿನ ದಾಳಿ ನಡೆದಿದೆ. ದುಷ್ಕರ್ಮಿಯೊಬ್ಬ ಏಕಾಏಕಿ ಗುಂಡು ಹಾರಿಸಿದ್ದು, ಮಹಿಳೆಯೊಬ್ಬರು ಗುಂಡೇಟಿನಿಂದ ಗಾಯಗೊಂಡಿದ್ದಾನೆ. ಸಂತ್ರಸ್ತ ಮಹಿಳೆ ಮತ್ತು ಆರೋಪಿ ನಡುವೆ ಹಣದ ವಿಷಯವಾಗಿ ವಿವಾದ ಇತ್ತು. ಇದೇ ಕಾರಣಕ್ಕಾಗಿ ಫೈರಿಂಗ್​ ನಡೆದಿರುವ ಶಂಕೆ ವ್ಯಕ್ತವಾಗಿದೆ.

ಕೋರ್ಟ್‌ನಲ್ಲಿ ದುಷ್ಕರ್ಮಿ ಮೂರರಿಂದ ನಾಲ್ಕು ಸುತ್ತು ಗುಂಡು ಹಾರಿಸಿದ್ದಾರೆ. ಹೊಟ್ಟೆಗೆ ಗುಂಡೇಟು ತಾಗಿದ ಪರಿಣಾಮ ಮಹಿಳೆಯ ಸ್ಥಿತಿ ಚಿಂತಾಜನಕವಾಗಿದೆ. ಘಟನೆಯ ವಿಷಯ ತಿಳಿದು ತಕ್ಷಣ ಸ್ಥಳಕ್ಕಾಗಮಿಸಿದ ಪೊಲೀಸರು, ಗಾಯಾಳು ಮಹಿಳೆಯನ್ನು ಏಮ್ಸ್ ಆಸ್ಪತ್ರೆಗೆ ರವಾನಿಸಿದ್ದಾರೆ ಎಂದು ತಿಳಿದು ಬಂದಿದೆ.

ನ್ಯಾಯಾಲಯದ ಸಂಕೀರ್ಣದಲ್ಲಿರುವ ವಕೀಲರ ಬ್ಲಾಕ್‌ನಲ್ಲಿ ಮಹಿಳೆ ಇದ್ದರು. ಆಗ ಮಹಿಳೆ ಮೇಲೆ ಗುಂಡು ಹಾರಿಸಿದ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ. ಸದ್ಯ ಈ ದುಷ್ಕರ್ಮಿಯನ್ನು ಪೊಲೀಸರು ಗುರುತ್ತಿದ್ದು, ಆತನ ಪತ್ತೆಗಾಗಿ ಸಿಸಿಟಿವಿ ಕ್ಯಾಮೆರಾಗಳ ಪರಿಶೀಲನೆ ನಡೆಸಿದ್ದಾರೆ. ಮತ್ತೊಂದೆಡೆ, ಮೆಟಲ್ ಡಿಟೆಕ್ಟರ್‌ಗಳು ಮತ್ತು ಭದ್ರತಾ ಅಧಿಕಾರಿಗಳ ತಪಾಸಣೆಯ ಹೊರತಾಗಿಯೂ ದಾಳಿಕೋರ ಗನ್​ನೊಂದಿಗೆ ನ್ಯಾಯಾಲಯದ ಆವರಣಕ್ಕೆ ಹೇಗೆ ಪ್ರವೇಶಿಸಿದ ಎಂಬ ಪ್ರಶ್ನೆ ಉದ್ಭವಿಸಿದೆ. ಈ ಬಗ್ಗೆ ಕುರಿತು ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

ಕೇಜ್ರಿವಾಲ್ ಟ್ವೀಟ್​: ಈ ಘಟನೆ ಬಗ್ಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಟ್ವೀಟ್​ ಮಾಡಿದ್ದು, "ದೆಹಲಿಯಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಬೇರೆಯವರ ಕೆಲಸದಲ್ಲಿ ಅಡೆತಡೆಗಳನ್ನು ಸೃಷ್ಟಿಸುವ ಮತ್ತು ಪ್ರತಿಯೊಂದು ವಿಷಯದಲ್ಲೂ ಕೊಳಕು ರಾಜಕಾರಣ ಮಾಡುವ ಬದಲು ಪ್ರತಿಯೊಬ್ಬರೂ ತಮ್ಮ ಸ್ವಂತ ಕೆಲಸದತ್ತ ಗಮನಹರಿಸಬೇಕು. ತಮ್ಮ ಕಾರ್ಯ ನಿರ್ವಹಿಸಲು ಸಾಧ್ಯವಾಗದಿದ್ದರೆ, ಅಂತವರು ರಾಜೀನಾಮೆ ನೀಡಬೇಕು. ಜನರ ಸುರಕ್ಷತೆಯನ್ನು ರಾಮನ ವಿಶ್ವಾಸಕ್ಕೆ ಬಿಡಲು ಸಾಧ್ಯವಿಲ್ಲ'' ಎಂದು ಪರೋಕ್ಷವಾಗಿ ಕೇಂದ್ರ ಸರ್ಕಾರದ ವಿರುದ್ಧ ಟೀಕೆ ಮಾಡಿದ್ದಾರೆ.

ಉತ್ತರ ದೆಹಲಿ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ, ವಕೀಲ ವಿನೀತ್ ಜಿಂದಾಲ್ ಮಾತನಾಡಿ, ಜಿಲ್ಲಾ ನ್ಯಾಯಾಲಯಗಳಲ್ಲಿ ಭದ್ರತಾ ಲೋಪವು ದಾವೆದಾರರು ಮತ್ತು ವಕೀಲರಿಗೆ ಬಹಳ ಕಳವಳಕಾರಿಯಾಗಿದೆ ಎಂದು ಹೇಳಿದ್ದಾರೆ.

ಹಿಂದಿನ ಗುಂಡಿನ ದಾಳಿ ಘಟನೆಗಳು: ಕಳೆದ ವರ್ಷ ಸೆಪ್ಟೆಂಬರ್ 24ರಂದು ದೆಹಲಿಯ ರೋಹಿಣಿ ನ್ಯಾಯಾಲಯದಲ್ಲೂ ಇಂತಹ ಘಟನೆ ನಡೆದಿತ್ತು. ವಕೀಲರ ವೇಷದಲ್ಲಿದ್ದ ಇಬ್ಬರು ಬಂದೂಕುಧಾರಿಗಳು ಗುಂಡಿನ ದಾಳಿ ನಡೆಸಿದ್ದರು. ರಾಹುಲ್ ತ್ಯಾಗಿ ಮತ್ತು ಜಗದೀಪ್ ಜಗ್ಗಾ ನ್ಯಾಯಾಲಯದ ಕೋಣೆಗೆ ವಕೀಲರ ವೇಷದಲ್ಲಿ ಬಂದಿದ್ದರು. ಈ ವೇಳೆ ದರೋಡೆಕೋರ ಜಿತೇಂದರ್ ಮಾನ್ ಅಲಿಯಾಸ್ ಗೋಗಿ ಮೇಲೆ ಅನೇಕ ಸುತ್ತು ಗುಂಡುಗಳನ್ನು ಹಾರಿಸಿದರು. ನಂತರ ಪೊಲೀಸರು ನಡೆಸಿದ ಪ್ರತಿದಾಳಿ ಇಬ್ಬರೂ ಕೂಡ ಸ್ಥಳದಲ್ಲೇ ಸಾವನ್ನಪ್ಪಿದ್ದರು.

ಮತ್ತೊಂದೆಡೆ, ಕಳೆದ ವರ್ಷ ಏಪ್ರಿಲ್‌ನಲ್ಲಿ ಇದೇ ರೋಹಿಣಿ ಕೋರ್ಟ್​ನಲ್ಲಿ ಗುಂಡಿನ ದಾಳಿ ನಡೆದಿತ್ತು. ಇಬ್ಬರು ವಕೀಲರು ಮತ್ತು ಅವರ ಕಕ್ಷಿದಾರನ ನಡುವೆ ಗಲಾಟೆ ನಂತರ ಈ ಗುಂಡಿನ ದಾಳಿ ಉಂಟಾಗಿತ್ತು. ಆಗ ನ್ಯಾಯಾಲಯದಲ್ಲಿ ಭದ್ರತೆಗೆ ನಿಯೋಜನೆಗೊಂಡಿದ್ದ ನಾಗಾಲ್ಯಾಂಡ್ ಸಶಸ್ತ್ರ ಪೊಲೀಸ್ (ಎನ್‌ಎಪಿ) ಸಿಬ್ಬಂದಿ ಸಹ ಗುಂಡು ಹಾರಿಸಿದ್ದರು.

ಇದನ್ನೂ ಓದಿ: ಪೂಂಚ್‌ನಲ್ಲಿ ಸೇನಾ ವಾಹನದ ಗ್ರೆನೇಡ್​ ಎಸೆದ ಉಗ್ರರು: ಐವರು ಸೈನಿಕರು ಹುತಾತ್ಮ

Last Updated : Apr 21, 2023, 1:01 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.