ETV Bharat / bharat

ದೆಹಲಿಯಲ್ಲಿ ಮೊದಲ 'ಮಂಕಿಪಾಕ್ಸ್' ಪ್ರಕರಣ ಪತ್ತೆ - ಮಂಕಿಪಾಕ್ಸ್

ದೇಶದಲ್ಲಿ ಮಂಕಿಪಾಕ್ಸ್ ವೈರಸ್‌ನ 4ನೇ ಪ್ರಕರಣ ನವದೆಹಲಿಯಲ್ಲಿ ಭಾನುವಾರ ಪತ್ತೆಯಾಗಿದೆ.

First Monkeypox case reported in Delhi
ಸಾಂದರ್ಭಿಕ ಚಿತ್ರ
author img

By

Published : Jul 24, 2022, 12:40 PM IST

ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಮೊದಲ ಮಂಕಿಪಾಕ್ಸ್ ಪ್ರಕರಣ ಇಂದು ಪತ್ತೆಯಾಗಿದೆ. ಯಾವುದೇ ವಿದೇಶ ಪ್ರಯಾಣದ ಹಿನ್ನೆಲೆಯಿಲ್ಲದ 31 ವರ್ಷದ ವ್ಯಕ್ತಿಗೆ ಸೋಂಕು ದೃಢಪಟ್ಟಿದೆ ಎಂದು ಲೋಕನಾಯಕ ಜೈ ಪ್ರಕಾಶ್ ನಾರಾಯಣ್ (ಎಲ್‌ಎನ್‌ಜೆಪಿ) ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ಸುರೇಶ್ ಕುಮಾರ್ ಹೇಳಿದ್ದಾರೆ.

ಮಂಕಿಪಾಕ್ಸ್ ವೈರಾಣುವಿನ ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮೂರು ದಿನಗಳ ಹಿಂದೆ ಸೋಂಕಿತ ವ್ಯಕ್ತಿಯನ್ನು ದೆಹಲಿಯ ಮೌಲಾನಾ ಆಜಾದ್ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಮಂಕಿಪಾಕ್ಸ್ ಪತ್ತೆಯಾಗಿ ಮಾದರಿಯನ್ನು ಪುಣೆಯ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ವೈರಾಲಜಿಗೆ (ಎನ್‌ಐವಿ) ರವಾನಿಸಲಾಗಿದೆ. ಸೋಂಕಿತ ವ್ಯಕ್ತಿಯೊಂದಿಗೆ ನಿಕಟ ಸಂಪರ್ಕ ಹೊಂದಿದವರನ್ನು ಗುರುತಿಸಿ ಪ್ರತ್ಯೇಕ ವಾಸಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದೇಶದಲ್ಲಿ ಮಂಕಿಪಾಕ್ಸ್ ವೈರಸ್‌ನ ಮೊದಲ ಮೂರು ಪ್ರಕರಣಗಳು ಕೇರಳದಲ್ಲಿ ವರದಿಯಾಗಿದ್ದವು. ಜು.14 ರಂದು ಮೊದಲ ಪ್ರಕರಣ ತಿರುವನಂತಪುರಂನಲ್ಲಿ ಪತ್ತೆಯಾಗಿತ್ತು. ಬಳಿಕ ಜು.18 ರಂದು ಕೇರಳದ ಕಣ್ಣೂರು ಜಿಲ್ಲೆಯಲ್ಲಿ 2ನೇ ಪ್ರಕರಣ, ಜು. 22 ರಂದು ಮಲಪ್ಪುರಂ ಜಿಲ್ಲೆಯಲ್ಲಿ 3ನೇ ಪ್ರಕರಣ ವರದಿಯಾಗಿದೆ.

ಮಂಕಿಪಾಕ್ಸ್ 70ಕ್ಕೂ ಹೆಚ್ಚು ದೇಶಗಳಿಗೆ ವ್ಯಾಪಿಸಿರುವ ಕಾರಣ ವಿಶ್ವ ಆರೋಗ್ಯ ಸಂಸ್ಥೆಯು 'ಜಾಗತಿಕ ಆರೋಗ್ಯ ತುರ್ತುಸ್ಥಿತಿ' ಎಂದು ಶನಿವಾರ ಘೋಷಿಸಿತ್ತು. ಜಾಗತಿಕವಾಗಿ 16,000ಕ್ಕೂ ಹೆಚ್ಚು ಮಂಕಿಪಾಕ್ಸ್ ಪ್ರಕರಣಗಳು ವರದಿಯಾಗಿದ್ದು, ಈವರೆಗೆ ಐದು ಮಂದಿ ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಹೆಚ್ಚಾಯ್ತು 'ಮಂಕಿಪಾಕ್ಸ್' ಹಾವಳಿ: ಜಾಗತಿಕ ತುರ್ತುಸ್ಥಿತಿ ಘೋಷಿಸಿದ ವಿಶ್ವ ಆರೋಗ್ಯ ಸಂಸ್ಥೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.