ETV Bharat / bharat

ಕೇರಳ ವಿಧಾನಸಭಾ ಚುನಾವಣೆಯಲ್ಲಿ ನಾಮಪತ್ರ ಸಲ್ಲಿಸಿದ್ದ ತೃತೀಯ ಲಿಂಗಿ Suicide

ಕೇರಳದ ಮೊದಲ ತೃತೀಯ ಲಿಂಗಿ ರೇಡಿಯೋ ಜಾಕಿ ಮತ್ತು ಇತ್ತೀಚಿನ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಅನನ್ಯಾ ಕುಮಾರಿ ಅಲೆಕ್ಸಾ ಮಂಗಳವಾರ ಆತ್ಮಹತ್ಯೆಗೆ ಶರಣಾಗಿದ್ದಾರೆ.

author img

By

Published : Jul 21, 2021, 8:37 AM IST

Ananya Kumari Alexa Suicide
ಅನನ್ಯಾ ಕುಮಾರಿ ಅಲೆಕ್ಸಾ ಆತ್ಮಹತ್ಯೆ

ಕೊಚ್ಚಿ (ಕೇರಳ):ಕೇರಳ ವಿಧಾನಸಭಾ ಚುನಾವಣೆ ಇತಿಹಾಸದಲ್ಲೇ ಮೊದಲ ಬಾರಿಗೆ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ತೃತೀಯ ಲಿಂಗಿ ಅನನ್ಯಾ ಕುಮಾರಿ ಅಲೆಕ್ಸಾ ಮಂಗಳವಾರ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಅನನ್ಯಾ ಕುಮಾರಿ ಅಲೆಕ್ಸಾ ಕೊಚ್ಚಿಯ ತಮ್ಮ ಫ್ಲ್ಯಾಟ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕಳೆದ ವರ್ಷ ಜೂನ್‌ನಲ್ಲಿ ನಡೆಸಿದ ಲೈಂಗಿಕ ಪುನರ್ವಿತರಣೆ ಶಸ್ತ್ರಚಿಕಿತ್ಸೆಯ ನಂತರ ಗಂಭೀರ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿರುವುದಾಗಿ ಕೆಲ ವಾರಗಳ ಹಿಂದೆ ಅನನ್ಯಾ ಕಳವಳ ವ್ಯಕ್ತಪಡಿಸಿದ್ದರು. ಈ ಕುರಿತು ವೈದ್ಯರು ಮತ್ತು ಖಾಸಗಿ ಆಸ್ಪತ್ರೆಯ ವಿರುದ್ಧ ಆರೋಪ ಸಹ ಮಾಡಿದ್ದರು.

ಶಸ್ತ್ರಚಿಕಿತ್ಸೆಯ ಒಂದು ವರ್ಷದ ನಂತರವೂ ತೀವ್ರವಾದ ದೈಹಿಕ ನೋವಿನಿಂದಾಗಿ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ. ಇದು ವೈದ್ಯಕೀಯ ನಿರ್ಲಕ್ಷ್ಯದ ಪ್ರಕರಣ ಎಂದು ದೂರು ನೀಡಿದ್ದ ಅನನ್ಯಾ, ನ್ಯಾಯಕ್ಕಾಗಿ ಒತ್ತಾಯಿಸಿದ್ದರು.

ಅಲೆಕ್ಸಾ ಅವರು, ಮಲಪ್ಪುರಂ ಜಿಲ್ಲೆಯ ವೆಂಗರಾ ಕ್ಷೇತ್ರದಲ್ಲಿ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) ನಾಯಕ ಪಿ.ಕೆ.ಕುಂಜಲಿಕುಟ್ಟಿ ವಿರುದ್ಧ ಡೆಮಾಕ್ರಟಿಕ್ ಸೋಷಿಯಲ್ ಜಸ್ಟೀಸ್ ಪಕ್ಷದ ಅಭ್ಯರ್ಥಿಯಾಗಿ ಕೇರಳ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ್ದರು. ಬಳಿಕ ತನ್ನದೇ ಪಕ್ಷದ ಸದಸ್ಯರಿಂದ ಮಾನಸಿಕ ಕಿರುಕುಳ, ಕೊಲೆ ಬೆದರಿಕೆ ಇರುವುದಾಗಿ ಕಾರಣ ಕೊಟ್ಟು ಕೊನೆ ಕ್ಷಣದಲ್ಲಿ ಚುನಾವಣಾ ಕಣದಿಂದ ಹಿಂದೆ ಸರಿದಿದ್ದರು. ಅನನ್ಯಾ ಕುಮಾರಿ ಅಲೆಕ್ಸಾ ಕೇರಳದ ಮೊದಲ ತೃತೀಯ ಲಿಂಗಿ ರೇಡಿಯೋ ಜಾಕಿ ಆಗಿ ಕೆಲಸ ನಿರ್ವಹಿಸುತ್ತಿದ್ದರು.

ಇದನ್ನೂ ಓದಿ: ಬಾಲಕಿಗೆ ಮಾದಕ ದ್ರವ್ಯ ನೀಡಿ ಅತ್ಯಾಚಾರ.. ಅಪ್ರಾಪ್ತ ಅಂದರ್​!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.