ETV Bharat / bharat

ಸುಪ್ರೀಂ ಕೋರ್ಟ್​ನ ಮೊದಲ ಮಹಿಳಾ ನ್ಯಾಯಮೂರ್ತಿ ಫಾತಿಮಾ ಬೀವಿ ನಿಧನ - ಮುಸ್ಲಿಂ ಮಹಿಳಾ ರಾಜ್ಯಪಾಲೆ

Fathima Beevi passes away: ಸುಪ್ರೀಂ ಕೋರ್ಟ್​ನ ಮೊದಲ ಮಹಿಳಾ ನ್ಯಾಯಮೂರ್ತಿ ಎಂಬ ಖ್ಯಾತಿಗೆ ಪಾತ್ರರಾಗಿದ್ದ ನ್ಯಾ. ಫಾತಿಮಾ ಬೀವಿ ನಿಧನರಾಗಿದ್ದಾರೆ.

Fathima Beevi  passes away
ಫಾತಿಮಾ ಬೀವಿ ನಿಧನ
author img

By ETV Bharat Karnataka Team

Published : Nov 23, 2023, 3:24 PM IST

Updated : Nov 23, 2023, 3:37 PM IST

ಕೊಲ್ಲಂ (ಕೇರಳ): ಸುಪ್ರೀಂ ಕೋರ್ಟ್​ನ ಮೊದಲ ಮಹಿಳಾ ನ್ಯಾಯಮೂರ್ತಿ, ತಮಿಳುನಾಡಿನ ಮಾಜಿ ರಾಜ್ಯಪಾಲೆ ನ್ಯಾ. ಎಂ. ಫಾತಿಮಾ ಬೀವಿ ಅವರು ಗುರುವಾರ ನಿಧನರಾಗಿದ್ದಾರೆ. ಅವರಿಗೆ 96 ವರ್ಷ ವಯಸ್ಸಾಗಿತ್ತು. ಕೊಲ್ಲಂನ ಖಾಸಗಿ ನರ್ಸಿಂಗ್ ಹೋಂನಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.

ಕೇರಳದ ಪಂದಳಂ ಮೂಲದವರಾದ ನ್ಯಾ. ಫಾತಿಮಾ ಬೀವಿ ಕೇರಳದಲ್ಲಿ ಕಾನೂನು ಪದವಿ ಪಡೆದ ಮೊದಲ ಮಹಿಳೆ ಎಂಬ ಹೆಗ್ಗಳಿಕೆ ಹೊಂದಿದ್ದರು. 1950ರ ನವೆಂಬರ್ 14ರಂದು ವಕೀಲರಾಗಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದ್ದರು. 1983ರಲ್ಲಿ ಅವರು ಹೈಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದರು. ನಂತರ 1989ರಲ್ಲಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕಗೊಳ್ಳುವ ಮೂಲಕ ಇತಿಹಾಸವನ್ನು ಸೃಷ್ಟಿಸಿದ್ದರು. ದೇಶದ ಸರ್ವೋಚ್ಛ ನ್ಯಾಯಾಲಯದ ಮೊದಲ ಮಹಿಳಾ ನ್ಯಾಯಮೂರ್ತಿ ಎಂಬ ಖ್ಯಾತಿಗೆ ಪಾತ್ರರಾಗಿದ್ದರು.

1992ರಲ್ಲಿ ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ ಹುದ್ದೆಯಿಂದ ನಿವೃತ್ತ ಹೊಂದಿದ್ದರು. ಬಳಿಕ 1997ರಲ್ಲಿ ತಮಿಳುನಾಡು ರಾಜ್ಯಪಾಲರಾಗಿ ನೇಮಕಗೊಂಡಿದ್ದರು. ಈ ಮೂಲಕ ಕೂಡ ರಾಜ್ಯಪಾಲರ ಹುದ್ದೆ ಅಲಂಕರಿಸಿದ ಮೊದಲ ಮುಸ್ಲಿಂ ಮಹಿಳೆ ಎಂಬ ಖ್ಯಾತಿಗೂ ಪಾತ್ರರಾಗಿದ್ದರು. ರಾಜ್ಯಪಾಲರಾಗಿದ್ದ ಅವಧಿಯಲ್ಲಿ ನ್ಯಾ. ಫಾತಿಮಾ ಬೀವಿ ತಮಿಳುನಾಡು ವಿಶ್ವವಿದ್ಯಾಲಯದ ಕುಲಾಧಿಪತಿಯಾಗಿಯೂ ಕಾರ್ಯ ನಿರ್ವಹಿಸಿದ್ದರು. 2001ರ ವರೆಗೆ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದರು.

ಫಾತಿಮಾ ಬೀವಿ
ಫಾತಿಮಾ ಬೀವಿ

ಇದರ ಹೊರತಾಗಿ ನ್ಯಾ. ಫಾತಿಮಾ ಬೀವಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಸದಸ್ಯರಾಗಿ ಮತ್ತು ಹಿಂದುಳಿದ ವರ್ಗಗಳ ಕೇರಳ ಆಯೋಗದ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದರು. ಸಮಾಜ ಸೇವಕಿಯಾಗಿ ಅವರು ಗುರುತಿಸಿಕೊಂಡಿದ್ದರು. ಮಹಿಳಾ ಸಬಲೀಕರಣಕ್ಕಾಗಿ ಕೆಲಸ ಮಾಡುವ ಸಂಸ್ಥೆಗಳಲ್ಲಿ ತೊಡಗಿಸಿಕೊಂಡಿದ್ದರು. ಇದೇ ವರ್ಷದ ಆರಂಭದಲ್ಲಿ ಇವರ ಜೀವನ ಕುರಿತು 'ನೀತಿಪಥದಲ್ಲಿ ಧೀರ ವನಿತಾ' ಎಂಬ ಸಾಕ್ಷ್ಯಚಿತ್ರವನ್ನು ಬಿಡುಗಡೆ ಮಾಡಲಾಗಿತ್ತು.

ನ್ಯಾ. ಫಾತಿಮಾ ಬೀವಿ ಅವರು ಪಥನಂತಿಟ್ಟಾದಲ್ಲಿನ ಕ್ಯಾಥೋಲಿಕೇಟ್ ಪ್ರೌಢಶಾಲೆಯಲ್ಲಿ ತಮ್ಮ ಶಾಲಾ ಶಿಕ್ಷಣವನ್ನು ಪಡೆದಿದ್ದರು. ನಂತರ ಎರ್ನಾಕುಲಂನ ಸರ್ಕಾರಿ ಕಾನೂನು ಕಾಲೇಜಿನಲ್ಲಿ ಕಾನೂನು ಪದವಿಯನ್ನು ಮುಗಿಸಿದ್ದರು. ಇದಕ್ಕೂ ಮೊದಲು ಅವರು ತಿರುವನಂತಪುರದ ವಿಶ್ವವಿದ್ಯಾಲಯದ ಕಾಲೇಜಿನಲ್ಲಿ ಬಿಎಸ್ಸಿ ಪದವಿ ಪೂರೈಸಿದ್ದರು.

1950ರಲ್ಲಿ ಕೇರಳ ನ್ಯಾಯಾಂಗದಲ್ಲಿ ತಮ್ಮ ವೃತ್ತಿ ಜೀವನವನ್ನುಆರಂಭಿಸಿದ್ದರು. ಕೇರಳ ಅಧೀನ ನ್ಯಾಯಾಂಗ ಸೇವೆಗಳಾದ ಮುನ್ಸಿಫ್, ಅಧೀನ ನ್ಯಾಯಾಧೀಶರು, ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್, ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರು ಮತ್ತು ಆದಾಯ ತೆರಿಗೆ ಮೇಲ್ಮನವಿ ನ್ಯಾಯಾಧಿಕರಣದ ನ್ಯಾಯಾಂಗ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ನ್ಯಾ. ಫಾತಿಮಾ ಬೀವಿ ಅವರು ಹಲವು ಪ್ರಶಸ್ತಿಗಳಿಗೆ ಪಾತ್ರರಾಗಿದ್ದರು. 1990ರಲ್ಲಿ ಡಿ.ಲಿಟ್ ಗೌರವ, ಮಹಿಳಾ ಶಿರೋಮಣಿ ಪ್ರಶಸ್ತಿ, ಭಾರತ್ ಜ್ಯೋತಿ ಪ್ರಶಸ್ತಿ ಮತ್ತು ಯುಎಸ್-ಇಂಡಿಯಾ ಬ್ಯುಸಿನೆಸ್ ಕೌನ್ಸಿಲ್ ಜೀವಮಾನ ಪ್ರಶಸ್ತಿ ಅವರಿಗೆ ಸಂದಿತ್ತು.

ಇದನ್ನೂ ಓದಿ: ರಾಜ್ಯ ಸರ್ಕಾರದ ಸಲಹೆಗಾರರಾಗಿ ಸೇವೆ ಸಲ್ಲಿಸಿದ್ದ ಆರ್​ಬಿಐನ ಮಾಜಿ ಗವರ್ನರ್ ವೆಂಕಟರಾಮನ್ ನಿಧನ

Last Updated : Nov 23, 2023, 3:37 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.