ಲಖನೌ, ಜೈಪುರ: ರಾಜಸ್ಥಾನದ ಧೋಲ್‌ಪುರದಲ್ಲಿ ದುರ್ಗಾ ಮೂರ್ತಿ ನಿಮಜ್ಜನ ವೇಳೆ ಆಗ್ರಾ ಮೂಲದ ಐವರು ಪಾರ್ವತಿ ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಶುಕ್ರವಾರ ದುರ್ಗಾ ಮೂರ್ತಿಯನ್ನು ನಿಮಜ್ಜನ ಮಾಡಲು ತೆರಳಿದಾಗ ಈ ದುರ್ಘಟನೆ ಸಂಭವಿಸಿದ್ದು, ಮೃತರು ಉತ್ತರ ಪ್ರದೇಶದ ಆಗ್ರಾ ಜಿಲ್ಲೆಯ ಭಾವನಪುರ ಗ್ರಾಮದ ನಿವಾಸಿಗಳು ಎಂದು ಆಗ್ರಾ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಮುನಿರಾಜ್ ಹೇಳಿದ್ದಾರೆ.
ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಈಗಾಗಲೇ ಪೊಲೀಸರು ಕಾರ್ಯಾಚರಣೆ ನಡೆಸಿ ಐವರ ಶವಗಳನ್ನು ನದಿಯಿಂದ ಹೊರತೆಗೆದಿದ್ದಾರೆ.