ಭುವನೇಶ್ವರ್(ಒಡಿಶಾ) : ಇಲ್ಲಿನ ಸುವರ್ಣಪುರ ಜಿಲ್ಲೆಯಲ್ಲಿ ಶನಿವಾರ ಎಸ್‌ಯುವಿ ಕಾರು ಮತ್ತು ಟ್ರಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದೇ ಕುಟುಂಬದ ಮೂವರು ಸೇರಿದಂತೆ ಐವರು ಸಾವನ್ನಪ್ಪಿ, ಐವರು ಗಾಯಗೊಂಡ ಘಟನೆ ಶನಿವಾರ ನಡೆದಿದೆ.
ಕೌಡಿಯಾಮುಂಡ ಗ್ರಾಮದಿಂದ ಉಳ್ಳುಂದ ಬ್ಲಾಕ್‌ನ ನಿಮ್ಮ ಹಳ್ಳಿ ಎಂಬಲ್ಲಿಗೆ ಎಸ್‌ಯುವಿ ಕಾರಿನಲ್ಲಿ 10 ಮಂದಿ ಪ್ರಯಾಣಿಸುತ್ತಿದ್ದರು. ಈ ವೇಳೆ ಮಹಾನದಿ ಸೇತುವೆಯ ಮೇಲೆ ಕಾರು ಚಲಿಸುತ್ತಿದ್ದಾಗ ಎದುರಿಗೆ ಬಂದ ಟ್ರಕ್ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನೂ ಐವರು ಕಾರಿನಲ್ಲೇ ಸಿಲುಕಿದ್ದರು.
ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ಧಾವಿಸಿ ಕಾರಿನಲ್ಲಿ ಸಿಲುಕಿದವರನ್ನು ಗ್ಯಾಸ್ ಕಟ್ಟರ್ ಬಳಸಿ ರಕ್ಷಿಸಿದ್ದಾರೆ. ಅಲ್ಲದೇ ಗಾಯಗೊಂಡ ಅವರನ್ನು ಬುರ್ಲಾದ ವೀರ್ ಸುರೇಂದ್ರ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ: ಕೇರಳದಲ್ಲಿ ಬಡವರಿಗೆ ಮನೆ ನಿರ್ಮಿಸಿಕೊಟ್ಟಿದ್ದ ಜನಸೇವಕ.. ಕನ್ನಡಿಗ ಸಾಯಿರಾಮ್ ಭಟ್ ವಿಧಿವಶ..