ETV Bharat / bharat

ಭೀಕರ ರಸ್ತೆ ಅಪಘಾತ : ಮೋರಿಗೆ ಕಾರು ಡಿಕ್ಕಿಯಾಗಿ ಐವರ ದುರ್ಮರಣ! - ರಸ್ತೆ ಅಪಘಾತ

Road accident : ಮೃತರು ಹೈದರಾಬಾದ್‌ನ ಚಂದಾನಗರ ಮೂಲದ ಒಂದೇ ಕುಟುಂಬದ ಸದಸ್ಯರು. ಸಮಾರಂಭವೊಂದಕ್ಕೆ ಪಶ್ಚಿಮ ಗೋದಾವರಿ ಜಿಲ್ಲೆಯ ಜಂಗಾರೆಡ್ಡಿ ಗುಡೆಂಗೆ ತೆರಳುತ್ತಿದ್ದ ವೇಳೆ ಅವಘಡ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ..

Road accident
ಮೋರಿಗೆ ಕಾರು ಡಿಕ್ಕಿ
author img

By

Published : Mar 13, 2022, 1:03 PM IST

ಕೃಷ್ಣಾ : ಆಂಧ್ರಪ್ರದೇಶದ ಕೃಷ್ಣಾ ಜಿಲ್ಲೆಯಲ್ಲಿ ಭಾನುವಾರ ಕಾರೊಂದು ಮೋರಿಗೆ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಐವರು ಸಾವನ್ನಪ್ಪಿದ್ದು, ಒಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಆಂಧ್ರಪ್ರದೇಶದ ಕೃಷ್ಣಾ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ..

ಮೂಲಗಳ ಪ್ರಕಾರ, ಚಾಲಕನ ನಿಯಂತ್ರಣ ತಪ್ಪಿ ವಿಜಯವಾಡ-ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿಯ ಗೌರವರಂ ಗ್ರಾಮದ ಬಳಿ ನಾಗಾರ್ಜುನ ಸಾಗರ್ ಎಡದಂಡೆ ಕಾಲುವೆಯ ಮೇಲಿನ ಸೇತುವೆಯ ಮೇಲೆ ಅಪಘಾತ ಸಂಭವಿಸಿದೆ ಎನ್ನಲಾಗ್ತಿದೆ.

ಇಬ್ಬರು ಮಹಿಳೆಯರು ಹಾಗೂ ಓರ್ವ ಪುರುಷ ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಾಯಗೊಂಡವರನ್ನು ಜಗ್ಗಯ್ಯಪೇಟೆಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಆಸ್ಪತ್ರೆಯಲ್ಲಿ ಆರು ತಿಂಗಳ ಮಗು ಮತ್ತು ಓರ್ವ ಪುರುಷ ಸಾವನ್ನಪ್ಪಿದ್ದಾರೆ. ಗಾಯಗೊಂಡ ಮತ್ತೊಬ್ಬರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಮೃತರು ಹೈದರಾಬಾದ್‌ನ ಚಂದಾನಗರ ಮೂಲದ ಒಂದೇ ಕುಟುಂಬದ ಸದಸ್ಯರು. ಸಮಾರಂಭವೊಂದಕ್ಕೆ ಪಶ್ಚಿಮ ಗೋದಾವರಿ ಜಿಲ್ಲೆಯ ಜಂಗಾರೆಡ್ಡಿ ಗುಡೆಂಗೆ ತೆರಳುತ್ತಿದ್ದ ವೇಳೆ ಅವಘಡ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: ಮದುವೆ ಮೆರವಣಿಗೆಯಲ್ಲಿ ಮೋದಿ-ಯೋಗಿ ಹೊಗಳುವ ಹಾಡು ಹಾಕಿದ್ದಕ್ಕೆ ಹಲ್ಲೆ, ಹಣ-ಚಿನ್ನ ದರೋಡೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.