ETV Bharat / bharat

ರಸ್ತೆ ಅಪಘಾತದಲ್ಲಿ 8 ಮಂದಿ ಸಾವು.. ಪ್ರಧಾನಿ ಮೋದಿ ಸಂತಾಪ - ರಸ್ತೆ ಅಪಘಾತ

ರಾಜಸ್ಥಾನದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಎಂಟು ಮಂದಿ ಸಾವನಪ್ಪಿದ್ದು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

Rajasthan road accident
ರಾಜಸ್ಥಾನ ರಸ್ತೆ ಅಪಘಾತದಲ್ಲಿ ಐವರು ಸಾವು
author img

By

Published : Aug 20, 2022, 6:45 AM IST

Updated : Aug 20, 2022, 7:36 AM IST

ಪಾಲಿ (ರಾಜಸ್ಥಾನ): ಪಾಲಿ ಜಿಲ್ಲೆಯ ಸುಮೇರ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕನಿಷ್ಠ 8 ಜನರು ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಮೂಲಗಳ ಪ್ರಕಾರ ಪಾಲಿ ಜಿಲ್ಲೆಯ ಸುಮೇರ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಜೈಸಲ್ಮೇರ್ ಜಿಲ್ಲೆಯ ರಾಮದೇವರ ದೇವಸ್ಥಾನಕ್ಕೆ ಭೇಟಿ ನೀಡಲು ಹೋಗುತ್ತಿದ್ದ ಟ್ರ್ಯಾಕ್ಟರ್ ಟ್ರಾಲಿಗೆ ಟ್ರಕ್ ಡಿಕ್ಕಿ ಹೊಡೆದಿದೆ ಎನ್ನಲಾಗ್ತಿದೆ. ಡಿಕ್ಕಿ ಹೊಡೆದ ರಭಸಕ್ಕೆ ಟ್ರ್ಯಾಕ್ಟರ್ ಟ್ರಾಲಿ ಪಲ್ಟಿಯಾಗಿ ಟ್ರಾಲಿಯಲ್ಲಿದ್ದವರು ರಸ್ತೆಗೆ ಬಿದ್ದಿದ್ದಾರೆ. ಮಾಹಿತಿ ಪಡೆದ ಸುಮೇರ್‌ಪುರ ಶಿವಗಂಜ್ ಠಾಣೆ ಪೊಲೀಸರು ಮತ್ತು ಹಲವಾರು ಆ್ಯಂಬುಲೆನ್ಸ್‌ಗಳು ಸ್ಥಳಕ್ಕೆ ಧಾವಿಸಿವೆ. ಗಾಯಾಳುಗಳನ್ನು ಸುಮೇರ್‌ಪುರ ಮತ್ತು ಶಿವಗಂಜ್ ಸೇರಿದಂತೆ ಇತರ ಆಸ್ಪತ್ರೆಗಳಿಗೆ ದಾಖಲಿಸಿದ್ದಾರೆ.

ರಾಜಸ್ಥಾನ ರಸ್ತೆ ಅಪಘಾತ

ಘಟನೆಯಲ್ಲಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಮೂವರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಗಾಯಗೊಂಡ ಇನ್ನೂ ಕೆಲವರ ಸ್ಥಿತಿ ಚಿಂತಾಜನಕವಾಗಿದ್ದು, ಅವರನ್ನು ಹೀಲ್ ಸೆಂಟರ್‌ಗೆ ದಾಖಲಿಸಲಾಗಿದೆ. ಅಪಘಾತದ ಮಾಹಿತಿ ಪಡೆದ ಸುಮೇರ್‌ಪುರ ಶಾಸಕ ಜೋರಾರಾಮ್ ಕುಮಾವತ್, ಸುಮೇರ್‌ಪುರ ಎಸ್‌ಡಿಎಂ, ಡಿಎಸ್‌ಪಿ ಮತ್ತು ಆಡಳಿತ ಮತ್ತು ಪೊಲೀಸ್ ಸಿಬ್ಬಂದಿ ಕೂಡ ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದ್ದಾರೆ.

ಪ್ರಧಾನಿ ಮೋದಿ ಸಂತಾಪ: ಪ್ರಧಾನಿ ನರೇಂದ್ರ ಮೋದಿ ಅವರು ಅಪಘಾತದ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ರಾಜಸ್ಥಾನದ ಪಾಲಿಯಲ್ಲಿ ಸಂಭವಿಸಿದ ಅಪಘಾತವು ದುಃಖಕರವಾಗಿದೆ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲು ನಾನು ಪ್ರಾರ್ಥಿಸುತ್ತೇನೆ ಎಂದು ಪ್ರಧಾನಿ ಟ್ವೀಟ್‌ ಮಾಡಿದ್ಧಾರೆ.

  • The accident in Pali, Rajasthan is saddening. In this hour of grief, my thoughts are with the bereaved families. I pray for a speedy recovery of those injured: PM @narendramodi

    — PMO India (@PMOIndia) August 19, 2022 " class="align-text-top noRightClick twitterSection" data=" ">

ಉಪರಾಷ್ಟ್ರಪತಿ ಜಗದೀಪ್ ಧನಕರ್ ಕೂಡ ಅಪಘಾತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದರು. ರಾಜಸ್ಥಾನದ ಪಾಲಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಪ್ರಾಣಹಾನಿಯಿಂದ ದುಃಖವಾಗಿದೆ. ದುಃಖತಪ್ತ ಕುಟುಂಬಗಳಿಗೆ ನನ್ನ ಹೃತ್ಪೂರ್ವಕ ಸಂತಾಪ ಮತ್ತು ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲು ಪ್ರಾರ್ಥಿಸುತ್ತೇನೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

ವಸುಂಧರಾ ರಾಜೇ ಸಂತಾಪ: ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೇ ಟ್ವೀಟ್ ಮಾಡುವ ಮೂಲಕ ಸಂತಾಪ ಸೂಚಿಸಿದ್ದಾರೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಗಾಯಗೊಂಡವರಿಗೆ ಉತ್ತಮ ಆರೋಗ್ಯ ಭಾಗ್ಯ ಸಿಗಲಿ, ಕುಟುಂಬಕ್ಕೆ ಶಕ್ತಿ ತುಂಬಲಿ ಎಂದು ಹಾರೈಸಿದರು.

ಇದನ್ನೂ ಓದಿ: ಹೋಮ್​​ವರ್ಕ್​​ ಮಾಡದ ಮಗನ ಮೇಲೆ ಗುಂಡು ಹಾರಿಸಿದ ನಿವೃತ್ತ ಸೇನಾಧಿಕಾರಿ

Last Updated : Aug 20, 2022, 7:36 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.