ನಾವಡ(ಬಿಹಾರ): ಒಂದೇ ಕುಟುಂಬದ ಐವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನವಾದ ಎಂಬಲ್ಲಿನ ಆದರ್ಶ ನಗರದಲ್ಲಿ ನಡೆದಿದೆ. ಗಂಭೀರ ಸ್ಥಿತಿಯಲ್ಲಿದ್ದ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಟುಂಬ ಸಾಲದ ಸುಳಿಯಲ್ಲಿ ಸಿಲುಕಿತ್ತು. ಸಾಲ ವಸೂಲಾತಿ ಕಿರುಕುಳದಿಂದ ಬೇಸತ್ತಿದ್ದರು. ಈ ಹಿನ್ನೆಲೆಯಲ್ಲಿ ಇಂತಹ ನಿರ್ಧಾರ ತೆಗೆದುಕೊಂಡಿದೆ ಎಂದು ಸಂಬಂಧಿಕರು ಹಾಗೂ ಸ್ಥಳೀಯರು ಹೇಳಿದ್ದಾರೆ.
ಸಾಲ ಮರುಪಾವತಿಸುವಂತೆ ಒತ್ತಡ: ನವಾದ ಜಿಲ್ಲೆಯ ಆದರ್ಶ ಸೊಸೈಟಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಕೇದಾರನಾಥ ಗುಪ್ತಾ ಎಂಬವರ ಕುಟುಂಬದ 6 ಸದಸ್ಯರು ಸಾವಿಗೀಡಾಗಿದ್ದಾರೆ. ಇವರಲ್ಲಿ ಒಬ್ಬ ಬಾಲಕಿ ಗಂಭೀರ ಸ್ಥಿತಿಯಲ್ಲಿದ್ದು ಇಲ್ಲಿನ ಜಿಲ್ಲಾ ಸದರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.
ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಕುಟುಂಬ ಇಲ್ಲಿ ವ್ಯಾಪಾರ ಮಾಡುತ್ತಿದ್ದರು. ಯಾರೋ ಒಬ್ಬರಿಂದ ಸಾಲ ಪಡೆದಿದ್ದು, ಅದನ್ನು ತೀರಿಸುವಂತೆ ಒತ್ತಡ ಬರುತ್ತಿತ್ತು. ಕುಟುಂಬದವರೆಲ್ಲರೂ ಬಾಡಿಗೆ ಮನೆಯಲ್ಲಿ ವಿಷ ಸೇವಿಸದೆ ನವಾದ ನಗರದಿಂದ ದೂರದಲ್ಲಿರುವ ಆದರ್ಶ ನಗರದ ಮಜಾರ್‌ಗೆ ತೆರಳಿ ಸಾವಿಗೆ ಶರಣಾಗಿದ್ದಾರೆ ಎಂದು ಸ್ಥಳೀಯರು ಮಾಹಿತಿ ನೀಡಿದರು.
ಇದನ್ನೂ ಓದಿ: ವಿಜಯಪುರ: ಕಡಿಮೆ ಅಂಕ ಬಂದಿದ್ದಕ್ಕೆ ಮನನೊಂದು ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ