ETV Bharat / bharat

ಬಿಜೆಪಿ ಸೇರಿದ ಐವರು ಜೆಡಿಯು ಶಾಸಕರು.. ನಿತೀಶ್ ಕುಮಾರ್​​​ಗೆ ಬಿಗ್​ ಶಾಕ್​

ಮಣಿಪುರದಲ್ಲಿ ದಿಢೀರ್​ ರಾಜಕೀಯ ಬೆಳವಣಿಗೆವೊಂದರಲ್ಲಿ ಜೆಡಿಯು ಪಕ್ಷದ ಐವರು ಶಾಸಕರು ಬಿಜೆಪಿ ಸೇರ್ಪಡೆಯಾಗಿದ್ದಾರೆ.

author img

By

Published : Sep 3, 2022, 7:06 AM IST

Five MLAs of JDU joined BJP in Manipur
Five MLAs of JDU joined BJP in Manipur

ಇಂಫಾಲ(ಮಣಿಪುರ): ಕಳೆದ ಕೆಲ ದಿನಗಳ ಹಿಂದೆ ಬಿಜೆಪಿ ಜೊತೆಗಿನ ಮೈತ್ರಿ ಮುರಿದುಕೊಂಡು ಆರ್​ಜೆಡಿ+ ಕಾಂಗ್ರೆಸ್ ಜೊತೆ ಕೈಜೋಡಿಸಿರುವ ನಿತೀಶ್​​ ಕುಮಾರ್​ ಬಿಹಾರದಲ್ಲಿ ಹೊಸ ಸರ್ಕಾರ ರಚನೆ ಮಾಡಿದ್ದಾರೆ. ಇದರ ಮಧ್ಯೆ ಮಣಿಪುರದಲ್ಲಿ ಐವರು ಜೆಡಿಯು ಶಾಸಕರು ಬಿಜೆಪಿ ಸೇರ್ಪಡೆಗೊಂಡಿದ್ದಾರೆ.

ಮಣಿಪುರ ವಿಧಾನಸಭೆಯ ಕಾರ್ಯದರ್ಶಿ ಕೆ. ಮೇಘಜಿತ್​​ ಸಿಂಗ್​ ಇದಕ್ಕೆ ಸಂಬಂಧಿಸಿದಂತೆ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಜೆಡಿಯು ಪಕ್ಷದ ಏಳು ಶಾಸಕರ ಪೈಕಿ ಐವರು ಬಿಜೆಪಿ ಸೇರ್ಪಡೆಯಾಗಿದ್ದಾರೆಂದು ಸ್ಪೀಕರ್​​ ಮಾಹಿತಿ ನೀಡಿದ್ದಾಗಿ ಅವರು ತಿಳಿಸಿದ್ದಾರೆ.

ಕಳೆದ ಮಾರ್ಚ್​ ತಿಂಗಳಲ್ಲಿ ನಡೆದ ಮಣಿಪುರ ವಿಧಾಸಭೆ ಚುನಾವಣೆಯಲ್ಲಿ ಜೆಡಿಯು 7 ಕ್ಷೇತ್ರಗಳಲ್ಲಿ ಗೆಲುವು ದಾಖಲು ಮಾಡಿತ್ತು. 60 ಸದಸ್ಯ ಬಲದ ವಿಧಾನಸಭೆಯಲ್ಲಿ ಬಿಜೆಪಿ 32 ಸ್ಥಾನಗಳಲ್ಲಿ ಗೆಲುವು ದಾಖಲಿಸಿ, ಅಧಿಕಾರ ಉಳಿಸಿಕೊಂಡಿದೆ. ಈ ವೇಳೆ, ಜೆಡಿಯು ಶಾಸಕರು ಬಿಜೆಪಿಗೆ ಬೆಂಬಲ ವ್ಯಕ್ತಪಡಿಸಿದ್ದರು. ಇದೀಗ, ಮಹತ್ವದ ಬೆಳವಣಿಗೆಯಲ್ಲಿ ಅವರು ಕಮಲ ಮುಡಿದಿದ್ದಾರೆ.

ಇದನ್ನೂ ಓದಿ: ವಿಶ್ವಾಸಮತ ಗೆದ್ದ ಬಿಹಾರ ಸಿಎಂ ನಿತೀಶ್ ಕುಮಾರ್: 2024ರ ಚುನಾವಣೆಗೆ ಒಗ್ಗಟ್ಟಿನ ಮಂತ್ರ

ಕೆ.ಎಚ್. ಜೋಯ್ಕಿಶನ್, ಎನ್.ಸನತೆ, ಎಂಡಿ ಅಚಾಬ್ ಉದ್ದೀನ್, ಮಾಜಿ ಡಿಜಿಪಿ ಎಲ್ ಎಂ ಖೌಟೆ ಮತ್ತು ತಂಗಜಮ್ ಅರುಣ್​ಕುಮಾರ್ ಬಿಜೆಪಿ ಸೇರ್ಪಡೆಯಾಗಿರುವ ಶಾಸಕರಾಗಿದ್ದಾರೆ. ಇನ್ನು, ಬಿಹಾರದಲ್ಲಿ ಬಿಜೆಪಿ+ಜೆಡಿಯು ಮೈತ್ರಿ ಮುರಿದು ಬಿದ್ದ ಬೆನ್ನಲ್ಲೇ ಮಣಿಪುರದಲ್ಲೂ ಜೆಡಿಯು ಶಾಸಕರು ಬಿಜೆಪಿಗೆ ನೀಡಿದ್ದ ಬೆಂಬಲ ವಾಪಸ್​ ಪಡೆದುಕೊಳ್ಳುತ್ತಾರೆಂಬ ಮಾತು ಕೇಳಿ ಬರಲು ಶುರುವಾಗಿತ್ತು. ಆದರೆ, ಬಿಹಾರ ಮುಖ್ಯಮಂತ್ರಿ ನಿತೀಶ್​ ಕುಮಾರ್​ ಅವರಿಗೆ ಶಾಕ್​ ನೀಡಿರುವ ಶಾಸಕರು, ಬಿಜೆಪಿ ಸೇರ್ಪಡೆಯಾಗಿದ್ದಾರೆ. ಮಣಿಪುರದಲ್ಲಿ ಸದ್ಯ ಬಿರೇನ್ ಸಿಂಗ್ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರ ನಡೆಸುತ್ತಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.