ETV Bharat / bharat

ಬಿಜೆಪಿ ಮುಖಂಡನ ಮಗ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ - ಐವರಿಂದ ಯುವತಿ ಮೇಲೆ ಅತ್ಯಾಚಾರ

ಯೋಗಿ ಆದಿತ್ಯನಾಥ್ ರಾಜ್ಯದಲ್ಲಿ ಪ್ರತಿದಿನ ಒಂದಿಲ್ಲೊಂದು ಅತ್ಯಾಚಾರದಂತಹ ಅಮಾನವೀಯ ಕೃತ್ಯ ನಡೆಯುತ್ತಿರುವುದು ಬೆಳಕಿಗೆ ಬರುತ್ತಿದ್ದು, ಇದೀಗ ಮತ್ತೊಂದು ಘಟನೆ ನಡೆದಿರುವುದು ವರದಿಯಾಗಿದೆ.

UP Crime news
UP Crime news
author img

By

Published : Mar 31, 2021, 10:57 PM IST

ಗೊಂಡಾ(ಉತ್ತರ ಪ್ರದೇಶ): ಮಹಿಳೆಯೋರ್ವಳ ಮೇಲೆ ಮೂವರು ಕಾಮುಕರು ಅತ್ಯಾಚಾರ ನಡೆಸಿದ ಘಟನೆ ಬೆನ್ನಲ್ಲೇ ಉತ್ತರ ಪ್ರದೇಶದಲ್ಲಿ ಇದೀಗ ಮತ್ತೊಂದು ಅಮಾನವೀಯ ಘಟನೆ ನಡೆದಿರುವುದು ಬೆಳಕಿಗೆ ಬಂದಿದ್ದು, ದುಷ್ಕೃತ್ಯದಲ್ಲಿ ಬಿಜೆಪಿ ಮುಖಂಡನ ಮಗ ಸಹ ಭಾಗಿಯಾಗಿರುವ ಆರೋಪ ಕೇಳಿ ಬಂದಿದೆ.

ಉತ್ತರ ಪ್ರದೇಶದ ಗೊಂಡಾ ಜಿಲ್ಲೆಯಲ್ಲಿ ಬಿಜೆಪಿ ಮುಖಂಡನ ಮಗ ಸೇರಿದಂತೆ ಐವರು ದುಷ್ಕರ್ಮಿಗಳು ಯುವತಿಯೋರ್ವಳ ಮೇಲೆ ಅತ್ಯಾಚಾರವೆಸಗಿರುವ ಘಟನೆ ನಡೆದಿದೆ. ಓರ್ವ ಆರೋಪಿ ಬಂಧನ ಮಾಡುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಇದನ್ನೂ ಓದಿ: ಬಟ್ಟೆ ಒಗೆದರು, ಇಸ್ತ್ರಿ ಮಾಡಿದ್ರು, ದೋಸೆ ಹಾಕಿದ್ರು.. ವೋಟು ನಿಮಿತ್ತಂ ಬಹುಕೃತ ವೇಷಂ!

ಮಂಗಳವಾರ ರಾತ್ರಿ ಗೊಂಡಾ ಜಿಲ್ಲೆಯ ಕತ್ರಾ ಬಜಾರ್​ ಪೊಲೀಸ್​ ಠಾಣಾ ವ್ಯಾಪ್ತಿಯ ಹಳ್ಳಿವೊಂದರಲ್ಲಿ ಕೃತ್ಯ ನಡೆದಿದ್ದು, ಮನೆಯಲ್ಲಿ ಮಲಗಿದ್ದ 18 ವರ್ಷದ ಯುವತಿ ಅಪಹರಣ ಮಾಡಿ ಸಾಮೂಹಿಕ ಅತ್ಯಾಚಾರವೆಸಗಲಾಗಿದೆ. ಬಿಜೆಪಿ ಅಲ್ಪಸಂಖ್ಯಾತರ ಮುಖಂಡ ಬಲದೇವ್ ರಾಜ್ ಪಾಸ್ವಾನ್ ಅವರ ಪುತ್ರನ ವಿರುದ್ಧ ಪ್ರಕರಣ ಕೇಳಿ ಬಂದಿದೆ.

ಕಳೆದ ಕೆಲ ದಿನಗಳ ಹಿಂದೆ ಬಿಜೆಪಿ ನಾಯಕರು ನಾಲ್ಕು ಜನರೊಂದಿಗೆ ಗ್ರಾಮ ಪಂಚಾಯ್ತಿ ಚುನಾವಣಾ ಪ್ರಚಾರಕ್ಕಾಗಿ ಆಗಮಿಸಿದ್ದರು. ಈ ವೇಳೆ ಮನೆಯಲ್ಲಿ ಮಲಗಿದ್ದ 18 ವರ್ಷದ ಯುವತಿಯ ಅಪಹರಣ ಮಾಡಿ, ನಿರ್ಜನ್ಯ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಸಾಮೂಹಿಕ ಅತ್ಯಾಚಾರವೆಸಗಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಕುಟುಂಬದ ಸದಸ್ಯರು ಪ್ರಕರಣ ದಾಖಲು ಮಾಡಿದ್ದಾರೆ.

ಆರಂಭದಲ್ಲಿ ಪೊಲೀಸರು ಪ್ರಕರಣ ಮುಚ್ಚಿಹಾಕುವ ಯತ್ನ ನಡೆಸಿದ್ದಾಗಿ ತಿಳಿದು ಬಂದಿದ್ದು, ಬೇರೆ ಪಕ್ಷದ ಮುಖಂಡರು ಠಾಣೆಯಲ್ಲಿ ಗಲಾಟೆ ಮಾಡುತ್ತಿದ್ದಂತೆ ಸಂತ್ರಸ್ತೆಯನ್ನ ವೈದ್ಯಕೀಯ ಪರೀಕ್ಷೆಗೊಳಪಡಿಸಲಾಗಿದೆ. ಜತೆಗೆ ಓರ್ವ ಆರೋಪಿಯ ಬಂಧನ ಮಾಡಲಾಗಿದ್ದು, ಇತರಿಗಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.