ಪುಣೆ(ಮಹಾರಾಷ್ಟ್ರ): ಭೀಕರ ಕಾರು ಅಪಘಾತದಲ್ಲಿ ಐವರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಘಟನೆ ಪುಣೆ ಮುಂಬೈ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಗುರುವಾರ ಮಧ್ಯರಾತ್ರಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರು ಎದುರಿಗೆ ಬಂದ ವಾಹನಕ್ಕೆ ರಭಸವಾಗಿ ಗುದ್ದಿದ್ದು ಅಪಘಾತಕ್ಕೆ ಕಾರಣವಾಗಿದೆ.
8 ಜನರೊಂದಿಗೆ ಮುಂಬೈಗೆ ತೆರಳುತ್ತಿದ್ದ ಕಾರು ಪುಣೆ- ಎಕ್ಸ್ಪ್ರೆಸ್ವೇಯಲ್ಲಿ ಅತಿ ವೇಗವಾಗಿ ಸಾಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಎದುರಿಗೆ ಬಂದ ವಾಹನಕ್ಕೆ ಗುದ್ದಿದ್ದಾರೆ. ಇದರಿಂದ ಐವರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳದಲ್ಲಿದ್ದವರು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಕೈಗೊಂಡರು. ಅಪಘಾತದಿಂದ ಕೆಲಕಾಲ ಹೆದ್ದಾರಿಯಲ್ಲಿ ಭಾರೀ ವಾಹನದಟ್ಟಣೆ ಉಂಟಾಗಿತ್ತು.
ಓದಿ: ಮುಂದುವರಿದ ಐಟಿ ದಾಳಿ: ಮಾಜಿ ಎಂಎಲ್ಸಿ ಶಾಂತೇಗೌಡ ಮನೆಯಲ್ಲಿ ಎರಡನೇ ದಿನವೂ ಶೋಧ