ETV Bharat / bharat

ಭೀಕರ ರಸ್ತೆ ಅಪಘಾತ: ಐವರು ವಿದ್ಯಾರ್ಥಿಗಳು ಸ್ಥಳದಲ್ಲೇ ದುರ್ಮರಣ! - ಕಾರು ಅಪಘಾತದಲ್ಲಿ ಐವರು ವಿದ್ಯಾರ್ಥಿಗಳು ಸಾವು

ರಾಜಸ್ಥಾನದ ಜಲ್ಲೂರಿನಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಐವರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ನಡೆದಿದೆ.

Five students death
Five students death
author img

By

Published : Mar 25, 2021, 2:51 AM IST

ಜೈಪುರ್​(ರಾಜಸ್ಥಾನ): ಶಾಲೆ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ವೇಳೆ ಐವರು ವಿದ್ಯಾರ್ಥಿಗಳ ಮೇಲೆ SUV(ಕಾರು) ಹರಿದು ಹೋಗಿರುವ ಕಾರಣ ಸ್ಥಳದಲ್ಲೇ ದುರ್ಮರಣಕ್ಕೀಡಾಗಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಘಟನೆಯಲ್ಲಿ ಓರ್ವ ವಿದ್ಯಾರ್ಥಿನಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾಳೆ.

Five students crushed to death
ವಿದ್ಯಾರ್ಥಿಗಳ ಮೇಲೆ ಹರಿದ ಕಾರು

ಮೃತರಲ್ಲಿ ಇಬ್ಬರು ಬಾಲಕರು ಹಾಗೂ ಮೂವರು ಬಾಲಕಿಯರು ಎಂದು ಗುರುತಿಸಲಾಗಿದೆ. ಜಲ್ಲೂರಿನ ಕಾರ್ಡಾ-ರಾಣಿವಾರ ರಸ್ತೆಯಲ್ಲಿ ಈ ಘಟನೆ ಸಂಭವಿಸಿದ್ದು, ಎಲ್ಲ ಮಕ್ಕಳು ಶಾಲೆ ಮುಗಿಸಿಕೊಂಡು ಸಂಜೆ ವೇಳೆ ಮನೆಗೆ ತೆರಳುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಏಕಾಏಕಿ ವಿದ್ಯಾರ್ಥಿಗಳ ಮೇಲೆ ಹರಿದಿರುವ ಕಾರಿನ ರಭಸಕ್ಕೆ ಅವರು ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ಚಾಲಕ ಸುರೇಶ್​ ವಿರುದ್ಧ ಪ್ರಕರಣ ದಾಖಲಾಗಿದ್ದು, ಈಗಾಗಲೇ ಆತನ ಬಂಧನ ಮಾಡಲಾಗಿದೆ. ಘಟನೆಯಲ್ಲಿ ಮೃತರನ್ನ ರಮಿಲಾ ದೇವಾಸಿ, ವರ್ಷಾ ದೇವಾಸಿ, ವಿಕ್ರಂ ಕುಮಾರ್​, ಸುರೇಶ್​ ಕುಮಾರ್​ ಮತ್ತು ವೀಣಾ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಕಮಲಾ ಎಂಬ ವಿದ್ಯಾರ್ಥಿನಿ ಗಾಯಗೊಂಡಿದ್ದಾಳೆ. ವಿದ್ಯಾರ್ಥಿಗಳ ಸಾವಿಗೆ ಮುಖ್ಯಮಂತ್ರಿ ಅಶೋಕ್​ ಗೆಹ್ಲೋಟ್​ ಸಂತಾಪ ಸೂಚಿಸಿದ್ದು, ಗಾಯಗೊಂಡ ಬಾಲಕಿ ಶೀಘ್ರ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.