ETV Bharat / bharat

ವ್ಯಾನ್​​-ಲಾರಿ ನಡುವೆ ಮುಖಾಮುಖಿ ಡಿಕ್ಕಿ: ಐವರು ಮಹಿಳೆಯರು ಸಾವು, 10 ಮಂದಿಗೆ ಗಾಯ - ತಮಿಳುನಾಡಿನ ತೂತುಕುಡಿ

ಕೂಲಿ ಕೆಲಸಕ್ಕಾಗಿ ತೆರಳುತ್ತಿದ್ದ ಸಂದರ್ಭದಲ್ಲಿ ವ್ಯಾನ್​-ಲಾರಿ ಮುಖಾಮುಖಿ ಡಿಕ್ಕಿ ಹೊಡೆದಿರುವ ಪರಿಣಾಮ ಐವರು ಸಾವನ್ನಪ್ಪಿದ್ದಾರೆ.

accident
accident
author img

By

Published : Sep 9, 2021, 3:50 PM IST

ತೂತುಕುಡಿ (ತಮಿಳುನಾಡು): ಇಂದು ಬೆಳಗ್ಗೆ ನಡೆದಿರುವ ಭೀಕರ ರಸ್ತೆ ಅಪಘಾತವೊಂದರಲ್ಲಿ ವ್ಯಾನ್​-ಲಾರಿ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಐವರು ಮಹಿಳಾ ಕೂಲಿ ಕಾರ್ಮಿಕರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ 10 ಮಂದಿ ಗಾಯಗೊಂಡಿದ್ದಾಗಿ ತಿಳಿದು ಬಂದಿದೆ. ಅವರನ್ನ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ.

Van - Lorry Collision in Tamilnadu
ವ್ಯಾನ್​​-ಲಾರಿ ನಡುವೆ ಮುಖಾಮುಖಿ ಡಿಕ್ಕಿ

ಸುಮಾರು 15ಕ್ಕೂ ಹೆಚ್ಚು ಮಹಿಳಾ ಕೂಲಿ ಕಾರ್ಮಿಕರು ಕೆಲಸಕ್ಕಾಗಿ ರಮೇಶ್ ಫ್ಲಾವರ್​​ ವ್ಯಾನ್​ನಲ್ಲಿ ಕಂಪನಿಗೆ ತೆರಳುತ್ತಿದ್ದರು. ಈ ವೇಳೆ ಟ್ಯಾಂಕರ್​ ದಿಢೀರ್​ ಆಗಿ ಡಿಕ್ಕಿ ಹೊಡೆದಿರುವ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಸ್ಥಳದಲ್ಲೇ ಮೂವರು ಮಹಿಳೆಯರು ಸಾವನ್ನಪ್ಪಿದ್ದು, ಉಳಿದಂತೆ ಇಬ್ಬರು ಆಸ್ಪತ್ರೆಗೆ ದಾಖಲಿಸುವ ಸಂದರ್ಭದಲ್ಲಿ ಕೊನೆಯುಸಿರೆಳೆದಿದ್ದಾರೆ. ಉಳಿದಂತೆ ಗಾಯಗೊಂಡಿರುವ ಎಲ್ಲರನ್ನ ತೂತುಕುಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದರಲ್ಲಿ ಮತ್ತಿಬ್ಬರು ಮಹಿಳೆಯರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿರಿ: ಮಹಿಳಾ ಕ್ರಿಕೆಟ್​ ನಿಷೇಧಿಸಿದ್ರೆ ಪುರುಷ ತಂಡದ ಜೊತೆ ನಾವು ಟೆಸ್ಟ್​ ಆಡಲ್ಲ: ತಾಲಿಬಾನ್​ಗೆ ಆಸ್ಟ್ರೇಲಿಯಾ ಎಚ್ಚರಿಕೆ

ಘಟನಾ ಸ್ಥಳಕ್ಕೆ ಪುತ್ತೊಂಬುತ್ತೂರು ಪೊಲೀಸರು ಭೇಟಿ ನೀಡಿ, ಪರಿಶೀಲನೆ ಬಳಿಕ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.