ಮಲಪ್ಪುರಂ(ಕೇರಳ): ಫುಟ್ಬಾಲ್ ಪಂದ್ಯಾವಳಿ ವೇಳೆ ಪ್ರೇಕ್ಷಕರ ಗ್ಯಾಲರಿ ಕುಸಿದು ಬಿದ್ದು, ಸುಮಾರು 200ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಕೇರಳದ ಮಲಪ್ಪುರಂನಲ್ಲಿ ರವಿವಾರ ರಾತ್ರಿ ನಡೆದಿದೆ. ಇದರಲ್ಲಿ ಗಂಭೀರ ಸ್ಥಿತಿಯಲ್ಲಿರುವ 15 ಮಂದಿ ಗಾಯಾಳುಗಳನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
-
#WATCH Temporary gallery collapsed during a football match in Poongod at Malappuram yesterday; Police say around 200 people suffered injuries including five with serious injuries#Kerala pic.twitter.com/MPlTMPFqxV
— ANI (@ANI) March 20, 2022 " class="align-text-top noRightClick twitterSection" data="
">#WATCH Temporary gallery collapsed during a football match in Poongod at Malappuram yesterday; Police say around 200 people suffered injuries including five with serious injuries#Kerala pic.twitter.com/MPlTMPFqxV
— ANI (@ANI) March 20, 2022#WATCH Temporary gallery collapsed during a football match in Poongod at Malappuram yesterday; Police say around 200 people suffered injuries including five with serious injuries#Kerala pic.twitter.com/MPlTMPFqxV
— ANI (@ANI) March 20, 2022
ಇಲ್ಲಿನ ವಂದೂರನ ಪೂಂಗೋಡು ಮೈದಾನದಲ್ಲಿ ರಾತ್ರಿ ಫುಟ್ಬಾಲ್ ಪಂದ್ಯ ನಡೆಯುತ್ತಿತ್ತು. ಈ ವೇಳೆ ರಾತ್ರಿ 9.30ರ ಅಂದಾಜು ಒಂದು ಸಾವಿರ ಪ್ರೇಕ್ಷಕರಿದ್ದ ಗ್ಯಾಲರಿ ದಿಢೀರ್ ಕುಸಿದು ಬಿದ್ದಿದೆ. ಬಿದಿರುಗಳಿಂದ ಗ್ಯಾಲರಿ ಕಟ್ಟಲಾಗಿತ್ತು. ಆದರೆ, ಕಳೆದ ಎರಡು ದಿನಗಳಿಂದ ಮಳೆ ಸುರಿದಿದ್ದರಿಂದ ಮುರಿದು ಬಿದ್ದಿದೆ ಎನ್ನಲಾಗಿದೆ.
ಗ್ಯಾಲರಿ ಏಕಾಏಕಿ ಕುಸಿದ ಕಾರಣ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಜನರು ದಿಕ್ಕಾಪಾಲಾಗಿ ಓಡಲು ಆರಂಭಿಸಿದರು. ಹಲವರ ಕೈ-ಕಾಲುಗಳು ಮುರಿದಿವೆ. ಗಾಯಾಳುಗಳಲ್ಲಿ ಮಕ್ಕಳ ಸಂಖ್ಯೆಯೇ ಅಧಿಕವಾಗಿದೆ. ಸದ್ಯ ಗಾಯಾಳುಗಳು ಮಂಜೇರಿ ಸರ್ಕಾರಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸೇರಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ: ಫೈನಲ್ಗೆ ಲಗ್ಗೆ ಹಾಕಿದ ಲಕ್ಷ್ಯ ಸೇನ್.. ಆಲ್ ಇಂಗ್ಲೆಂಡ್ ಚಾಂಪಿಯನ್ಶಿಪ್ನಲ್ಲಿ ಗೆಲುವಿನ ನಾಗಾಲೋಟ