ETV Bharat / bharat

ಭಾರತದಲ್ಲಿರುವ ವಿದೇಶಿಗರಿಗೆ ಕೋವಿಡ್ ಲಸಿಕೆ ಒದಗಿಸಲು ಕೇಂದ್ರ ಅನುಮತಿ - ವಿದೇಶಿಗರಿಗೆ ಕೋವಿಡ್ ವ್ಯಾಕ್ಸಿನೇಷನ್

ಭಾರತದಲ್ಲಿರುವ ವಿದೇಶಿಗರು ಕೋವಿಡ್ ವ್ಯಾಕ್ಸಿನೇಷನ್ ಪಡೆಯಲು ಕೋವಿನ್ ಪೋರ್ಟಲ್​ನಲ್ಲಿ ನೋಂದಣಿ ಮಾಡಿಕೊಳ್ಳಬಹುದು ಎಂದು ಕೇಂದ್ರ ಸರ್ಕಾರ ತಿಳಿಸಿದೆ.

Foreign nationals now eligible for COVID-19 vaccination in India: Centre
ಭಾರತದಲ್ಲಿನ ವಿದೇಶಿಗರಿಗೆ ಕೋವಿಡ್ ಲಸಿಕೆ ಪಡೆಯಲು ಕೇಂದ್ರ ಅನುಮತಿ
author img

By

Published : Aug 10, 2021, 8:51 AM IST

ನವದೆಹಲ್ಲಿ: ಭಾರತದಲ್ಲಿ ನೆಲೆಸಿರುವ ವಿದೇಶಿ ಪ್ರಜೆಗಳಿಗೆ ಕೋವಿಡ್​ ಲಸಿಕೆ ಪಡೆಯಲು ಕೋವಿನ್ ಪೋರ್ಟಲ್‌ನಲ್ಲಿ ನೋಂದಾಯಿಸಿಕೊಳ್ಳಲು ಕೇಂದ್ರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಸೋಮವಾರದಿಂದ ಅವಕಾಶ ನೀಡಿದೆ.

ಕೋವಿಡ್​​ ಲಸಿಕೆ ಪಡೆಯಲು ಕೋವಿನ್(CoWin) ಪೋರ್ಟಲ್‌ನಲ್ಲಿ ನೋಂದಣಿ ಮಾಡಬೇಕಾಗುತ್ತದೆ. ಈ ಪೋರ್ಟ​ಲ್​ನಲ್ಲಿ ವಿದೇಶಿ ಪ್ರಜೆಗಳು ತಮ್ಮ ಪಾಸ್‌ಪೋರ್ಟ್ ಅನ್ನು ಗುರುತಿನ ಪುರಾವೆಯಾಗಿ ಬಳಸಬಹುದು ಎಂದು ಸಚಿವಾಲಯ ಹೇಳಿದೆ.

ಸಾಕಷ್ಟು ಮಂದಿ ವಿದೇಶಿ ಪ್ರಜೆಗಳು ಭಾರತದಲ್ಲಿ ವಾಸಿಸುತ್ತಿದ್ದಾರೆ. ವಿಶೇಷವಾಗಿ ಮಹಾನಗರಗಳಲ್ಲಿ ಇವರ ಸಂಖ್ಯೆ ಹೆಚ್ಚಿದೆ. ಈ ಪ್ರದೇಶಗಳಲ್ಲಿ ಕೋವಿಡ್ ಸೋಂಕು ಹರಡುವಿಕೆಯ ಪ್ರಮಾಣ ಅಲ್ಲಿನ ಜನಸಾಂದ್ರತೆಯಿಂದ ಹೆಚ್ಚಾಗಿರುತ್ತದೆ. ಆದ್ದರಿಂದಾಗಿ ಎಲ್ಲರಿಗೂ ಕೋವಿಡ್ ಲಸಿಕೆ ನೀಡುವುದು ಅತ್ಯಂತ ಅನಿವಾರ್ಯ ಎಂದು ಸಚಿವಾಲಯ ಅಭಿಪ್ರಾಯಪಟ್ಟಿದೆ.

ಭಾರತದಲ್ಲಿ ನೆಲೆಸಿರುವ ವಿದೇಶಿ ಪ್ರಜೆಗಳ ಸುರಕ್ಷತೆಗೆ ಆದ್ಯತೆ ನೀಡಲಾಗುತ್ತಿದೆ. ಲಸಿಕೆ ಹಾಕದ ವ್ಯಕ್ತಿಗಳಿಂದ ಸೋಂಕನ್ನು ಹರಡುವ ಸಾಧ್ಯತೆಗಳು ಹೆಚ್ಚಾಗಿದ್ದು, ಇದನ್ನು ತಗ್ಗಿಸುವ ಸಲುವಾಗಿಯೇ ಅವರಿಗೂ ಕೋವಿಡ್ ಲಸಿಕೆ ನೀಡಲಾಗುತ್ತದೆ ಎಂದು ಸಚಿವಾಲಯ ಹೇಳಿದೆ.

ಆಗಸ್ಟ್ 9ರ ವೇಳೆಗೆ ಭಾರತದಲ್ಲಿ 51 ಕೋಟಿ ಡೋಸ್​ ಲಸಿಕೆಯನ್ನು ನೀಡಲಾಗಿದೆ ಎಂದು ಕೇಂದ್ರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದ್ದು, ವ್ಯಾಕ್ಸಿನೇಷನ್ ಪ್ರಕ್ರಿಯೆ ಭರದಿಂದ ಸಾಗಿದೆ.

ಇದನ್ನೂ ಓದಿ: ನಿಮ್ಮ ಹೆಸರು 'ನೀರಜ್'​ ಆಗಿದ್ರೆ ಈ ಬಂಕ್‌ನಲ್ಲಿ 501 ರೂಪಾಯಿಯ ಪೆಟ್ರೋಲ್ ಉಚಿತ!

ETV Bharat Logo

Copyright © 2025 Ushodaya Enterprises Pvt. Ltd., All Rights Reserved.