ಉದಾಲಾ/ಒಡಿಶಾ: ಮಯೂರ್ಭಂಜ್ ಜಿಲ್ಲೆಯ ಅಂಗರಪಾಡ ಗ್ರಾಮದಲ್ಲಿ ಆನೆ ದಂತ ಕಳ್ಳಸಾಗಣೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಉದಾಲಾ ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಗ್ರಾಹಕರಂತೆ ವೇಷ ಧರಿಸಿ ದಾಳಿ ಮಾಡಿದ ಅರಣ್ಯಾಧಿಕಾರಿಗಳು ಇಬ್ಬರು ಆನೆದಂತ ಕಳ್ಳಸಾಗಣೆದಾರರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತರಿಂದ 45 ಕೆಜಿ ತೂಕದ 7 ಆನೆ ದಂತಗಳನ್ನು ವಶಪಡಿಸಿಕೊಂಡಿರುವುದಾಗಿ ಅರಣ್ಯ ಇಲಾಖೆ ಮೂಲಗಳು ತಿಳಿಸಿವೆ.