ETV Bharat / bharat

ಮಾಜಿ ಸಂಸದೆ ಕೊತಪಲ್ಲಿ ಗೀತಾಗೆ 5 ವರ್ಷ ಜೈಲು ಶಿಕ್ಷೆ ವಿಧಿಸಿದ ಕೋರ್ಟ್​ - Vishweshwara Infra Private Limited

ಅರಕು ಮಾಜಿ ಸಂಸದೆ ಕೊತಪಲ್ಲಿ ಗೀತಾ ಅವರಿಗೆ ಹೈದರಾಬಾದ್ ಸಿಬಿಐ ನ್ಯಾಯಾಲಯ ಐದು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

ಮಾಜಿ ಸಂಸದೆ ಕೊತಪಲ್ಲಿ ಗೀತಾ
ಮಾಜಿ ಸಂಸದೆ ಕೊತಪಲ್ಲಿ ಗೀತಾ
author img

By

Published : Sep 14, 2022, 8:56 PM IST

Updated : Sep 14, 2022, 9:02 PM IST

ಹೈದರಾಬಾದ್: ಪಂಜಾಬ್ ನ್ಯಾಷನಲ್ ಬ್ಯಾಂಕ್ (ಪಿಎನ್‌ಬಿ) ಪ್ರಕರಣಕ್ಕೆ ಸಂಬಂಧಿಸಿದಂತೆ ಶಿಕ್ಷೆಗೆ ಒಳಗಾಗಿರುವುದರಿಂದ ಅರಕು ಮಾಜಿ ಸಂಸದೆ ಕೊತಪಲ್ಲಿ ಗೀತಾ ಅವರನ್ನು ಸಿಬಿಐ ಪೊಲೀಸರು ಬಂಧಿಸಿದ್ದಾರೆ.

ಕಂಪನಿಯೊಂದರ ಹೆಸರಿನಲ್ಲಿ 50 ಕೋಟಿ ರೂಪಾಯಿ ಸಾಲ ಪಡೆದು ಮರುಪಾವತಿ ಮಾಡಿಲ್ಲ ಎಂಬ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಸಿಬಿಐ ನ್ಯಾಯಾಲಯ, ಗೀತಾ ಮತ್ತು ಅವರ ಪತಿ ಪಿ. ರಾಮಕೋಟೇಶ್ವರ ರಾವ್ ಅವರಿಗೆ ನ್ಯಾಯಾಲಯ ಐದು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಇವರೊಂದಿಗೆ ಬ್ಯಾಂಕ್ ಅಧಿಕಾರಿಗಳಾದ ಬಿ. ಕೆ ಜಯಪ್ರಕಾಶ್ ಮತ್ತು ಕೆ. ಕೆ ಅರವಿಂದಾಕ್ಷನ್ ಅವರಿಗೂ ಕೂಡಾ ಐದು ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ.

50 ಕೋಟಿ ರೂಪಾಯಿ ಸಾಲ ಪಡೆದು ಮರುಪಾವತಿ ಮಾಡಿಲ್ಲ ಎಂಬ ಬಗ್ಗೆ ಪಿಎನ್‌ಬಿ ನೀಡಿದ ದೂರಿನ ಆಧಾರದ ಮೇಲೆ ಸಿಬಿಐ ಅಧಿಕಾರಿಗಳು ಗೀತಾ ಅವರ ವಿಚಾರಣೆ ನಡೆಸಿ ಚಾರ್ಜ್​ ಶೀಟ್​ ಸಲ್ಲಿಕೆ ಮಾಡಿತ್ತು. ಆ ಬಳಿಕ ಸಿಬಿಐ ನ್ಯಾಯಾಲಯದಲ್ಲಿ ವಾದ - ಪ್ರತಿ ವಾದದ ಬಳಿಕ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅವರಿಗೆ ಶಿಕ್ಷೆ ವಿಧಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಲಾಗಿದೆ. ಬಂಧನದ ನಂತರ ಅವರನ್ನು ವೈದ್ಯಕೀಯ ಪರೀಕ್ಷೆಗಾಗಿ ಉಸ್ಮಾನಿಯಾ ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಹೈಕೋರ್ಟ್​ನಲ್ಲಿ ಜಾಮೀನು ಅರ್ಜಿ: ವಿಶ್ವೇಶ್ವರ ಇನ್ಫ್ರಾ ಪ್ರೈವೇಟ್ ಲಿಮಿಟೆಡ್ ಗೆ ರೂ. 2 ಲಕ್ಷ ದಂಡ ವಿಧಿಸಲಾಗಿದೆ. ನಂತರ ಕೊತಪಲ್ಲಿ ಗೀತಾಳನ್ನು ಚಂಚಲಗುಡ ಜೈಲಿಗೆ ಸ್ಥಳಾಂತರಿಸಲಾಯಿತು. ಮತ್ತೊಂದೆಡೆ ಅವರ ವಕೀಲರು ತೆಲಂಗಾಣ ಹೈಕೋರ್ಟ್‌ನಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದಾರೆ.

2014ರಲ್ಲಿ ವೈಎಸ್‌ಆರ್‌ಸಿಪಿಯಿಂದ ಅರಕು ಸಂಸದರಾಗಿ ಗೆದ್ದಿದ್ದ ಕೊತಪಲ್ಲಿ ಗೀತಾ ನಂತರ ಪಕ್ಷ ತೊರೆದಿದ್ದರು. 2018 ರಲ್ಲಿ ಜನಜಾಗೃತಿ ಹೆಸರಿನಲ್ಲಿ ರಾಜಕೀಯ ಪಕ್ಷವನ್ನು ಸ್ಥಾಪಿಸಲಾಯಿತು. ನಂತರ ಅವರು ಬಿಜೆಪಿ ಸೇರಿದರು ಮತ್ತು ಅವರ ಪಕ್ಷವನ್ನು ಅದರಲ್ಲಿ ವಿಲೀನಗೊಳಿಸಲಾಯಿತು.

ಓದಿ: ಆರು ವಾರಗಳಲ್ಲಿ ಸರ್ಕಾರಿ ಬಂಗಲೆ ಖಾಲಿ ಮಾಡಿ: ಸುಬ್ರಮಣಿಯನ್ ಸ್ವಾಮಿಗೆ ದೆಹಲಿ ಹೈಕೋರ್ಟ್ ಆದೇಶ

Last Updated : Sep 14, 2022, 9:02 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.