ETV Bharat / bharat

ಬಂಧನದಿಂದ ತಡೆ ಕೋರಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ ನೂಪುರ್ ಶರ್ಮಾ​.. ನಾಳೆ ವಿಚಾರಣೆ - Prophet remarks row

ಬಿಜೆಪಿಯ ಮಾಜಿ ವಕ್ತಾರೆ ನೂಪುರ ಶರ್ಮಾ ವಿರುದ್ಧ ವಿವಿಧ ಪೊಲೀಸ್ ಠಾಣೆಗಳಲ್ಲಿ ದೂರು ದಾಖಲಾಗಿದ್ದು, ಇದೀಗ ತಮಗೆ ರಕ್ಷಣೆ ನೀಡುವಂತೆ ಕೋರಿ ಸುಪ್ರೀಂಕೋರ್ಟ್​​ನಲ್ಲಿ ಅರ್ಜಿ ಸಲ್ಲಿಕೆ ಮಾಡಿದ್ದಾರೆ.

Former BJP Spokesperson Nupur Sharma
Former BJP Spokesperson Nupur Sharma
author img

By

Published : Jul 18, 2022, 9:20 PM IST

ನವದೆಹಲಿ: ಪ್ರವಾದಿ ಮಹಮ್ಮದ್ ಪೈಗಂಬರ್ ಕುರಿತು ವಿವಾದಾತ್ಮಕ ಹೇಳಿಕೆ ನೀಡಿರುವ ಉಚ್ಛಾಟಿತ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಇದೀಗ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ. ಬಂಧನದಿಂದ ತಡೆ ಕೋರಿ ಅರ್ಜಿ ಸಲ್ಲಿಕೆ ಮಾಡಿದ್ದು, ಇದರ ವಿಚಾರಣೆ ನಾಳೆ ನಡೆಯಲಿದೆ.

ನೂಪುರ್ ಶರ್ಮಾ ವಿರುದ್ಧ ಸುಪ್ರೀಂ ಕೋರ್ಟ್​ ಕಟುವಾಗಿ ಪ್ರತಿಕ್ರಿಯೆ ನೀಡಿದ ನಂತರ ಮೇಲಿಂದ ಮೇಲೆ ಬೆದರಿಕೆ ಬರತೊಡಗಿವೆ. ಇದರ ಬೆನ್ನಲ್ಲೇ ಬಂಧನದಿಂದ ರಕ್ಷಣೆ ನೀಡುವಂತೆ ಕೋರಿ ಇದೀಗ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ. ತಮಗೆ ಜೀವ ಬೆದರಿಕೆ ಮತ್ತು ಅತ್ಯಾಚಾರ ಬೆದರಿಕೆಗಳು ಬಂದಿವೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿರಿ: ನೂಪುರ್ ಶರ್ಮಾ ಭಾವಚಿತ್ರವನ್ನು ಡಿಪಿಗೆ ಹಾಕಿದ್ದಕ್ಕೆ ಜೀವಬೆದರಿಕೆ: ಯುವಕನಿಗೆ ಪೊಲೀಸ್​ ಭದ್ರತೆ

ವಿವಾದಿತ ಹೇಳಿಕೆ ನೀಡಿರುವ ಮಾಜಿ ವಕ್ತಾರೆ ನೂಪುರ್ ಶರ್ಮಾ ವಿರುದ್ಧ ವಿವಿಧ ಪೊಲೀಸ್ ಠಾಣೆಗಳಲ್ಲಿ ಎಫ್​ಐಆರ್ ದಾಖಲಾಗಿವೆ. ಬಂಧನಕ್ಕೆ ತಡೆಯಾಜ್ಞೆ ನೀಡುವಂತೆ ಕೋರಿ ಸುಪ್ರೀಂಕೋರ್ಟ್​ ಮೊರೆ ಹೋಗಿದ್ದು, ಇದೀಗ ಅದರ ವಿಚಾರಣೆ ನಾಳೆ ನಡೆಯಲಿದೆ. ನೂಪುರ್ ಶರ್ಮಾ ಹೇಳಿಕೆ ಬೆನ್ನಲ್ಲೇ ದೇಶಾದ್ಯಂತ ದೊಡ್ಡ ಮಟ್ಟದ ಪ್ರತಿಭಟನೆಗಳು ನಡೆದಿದ್ದವು. ಇದರ ಬೆನ್ನಲ್ಲೇ ಪಕ್ಷದಿಂದ ಅವರನ್ನ ಅಮಾನತು ಮಾಡಲಾಗಿತ್ತು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.