ETV Bharat / bharat

ಮಾಜಿ ಸಿಎಂ ಎಸ್​ಎಂ ಕೃಷ್ಣಗೆ ಪದ್ಮವಿಭೂಷಣ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

author img

By

Published : Mar 22, 2023, 7:49 PM IST

ಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪದ್ಮವಿಭೂಷಣ ಪ್ರಶಸ್ತಿ ಪ್ರದಾನ ಮಾಡಿದರು.

Etv Bharat
Etv Bharat

ನವದೆಹಲಿ: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ, ಖ್ಯಾತ ಕೈಗಾರಿಕೋದ್ಯಮಿ ಕುಮಾರ್ ಮಂಗಳಂ ಬಿರ್ಲಾ ಮತ್ತು ಖ್ಯಾತ ಹಿನ್ನೆಲೆ ಗಾಯಕಿ ಸುಮನ್ ಕಲ್ಯಾಣಪುರ ಸೇರಿ 50ಕ್ಕೂ ಹೆಚ್ಚು ಗಣ್ಯರಿಗೆ ಬುಧವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಪದ್ಮ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು. ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದಲ್ಲಿ ವಿದೇಶಾಂಗ ಸಚಿವರಾಗಿದ್ದ ಹಾಗೂ ನಂತರ ಬಿಜೆಪಿ ಸೇರಿರುವ ಕೃಷ್ಣ ಅವರಿಗೆ ಪದ್ಮವಿಭೂಷಣ ಪ್ರಶಸ್ತಿ ನೀಡಲಾಯಿತು.

ಇದನ್ನೂ ಓದಿ: ಪದ್ಮ ಪ್ರಶಸ್ತಿ ಪುರಸ್ಕೃತರ ಬಗ್ಗೆ ಓದಿ ತಿಳಿದುಕೊಳ್ಳಿ: ದೇಶವಾಸಿಗಳಿಗೆ ಪ್ರಧಾನಿ ಮೋದಿ ಕರೆ

ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಗಣ್ಯರಿಗೆ ಪದ್ಮವಿಭೂಷಣ, ಪದ್ಮಭೂಷಣ ಮತ್ತು ಪದ್ಮಶ್ರೀ ಪ್ರಶಸ್ತಿಗಳನ್ನು ರಾಷ್ಟ್ರಪತಿ ಪ್ರದಾನ ಮಾಡಿದರು. ಜನವರಿ 26ರ ಗಣರಾಜ್ಯೋತ್ಸವದ ಮುನ್ನ ದಿನದಂದು 106 ದೇಶದ ಉನ್ನತ ನಾಗರಿಕ ಪದ್ಮ ಪ್ರಶಸ್ತಿಗಳನ್ನು ಪ್ರಕಟಿಸಲಾಗಿತ್ತು. ಇಂದು ಎಸ್​ಎಂ ಕೃಷ್ಣ ಮತ್ತು ಹೆಸರಾಂತ ವಾಸ್ತುಶಿಲ್ಪಿ ಬಾಲಕೃಷ್ಣ ದೋಷಿ (ಮರಣೋತ್ತರ) ಅವರಿಗೆ ದೇಶದ ಎರಡನೇ ಅತ್ಯುನ್ನತ ನಾಗರಿಕ ಗೌರವವಾದ ಪದ್ಮವಿಭೂಷಣ ಪ್ರದಾನ ಮಾಡಲಾಯಿತು.

ಖ್ಯಾತ ಕೈಗಾರಿಕೋದ್ಯಮಿ ಕುಮಾರ್ ಮಂಗಳಂ ಬಿರ್ಲಾ, ದೆಹಲಿ ಮೂಲದ ಪ್ರೊಫೆಸರ್ ಕಪಿಲ್ ಕಪೂರ್, ಆಧ್ಯಾತ್ಮಿಕ ನಾಯಕ ಕಮಲೇಶ್ ಡಿ ಪಟೇಲ್ ಮತ್ತು ಖ್ಯಾತ ಹಿನ್ನೆಲೆ ಗಾಯಕಿ ಸುಮನ್ ಕಲ್ಯಾಣಪುರ ಅವರಿಗೆ ದೇಶದ ಮೂರನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮಭೂಷಣ ನೀಡಲಾಯಿತು. ಕಳೆದ ವರ್ಷ ನಿಧನರಾದ ಬಿಲಿಯನೇರ್ ಷೇರು ಮಾರುಕಟ್ಟೆ ಹೂಡಿಕೆದಾರ ರಾಕೇಶ್ ಜುನ್‌ಜುನ್‌ವಾಲಾ ಅವರಿಗೆ ಮರಣೋತ್ತರವಾಗಿ ಪದ್ಮಶ್ರೀ ಪ್ರಶಸ್ತಿ ನೀಡಲಾಯಿತು.

  • President Droupadi Murmu presents Padma Vibhushan to Shri S.M. Krishna for Public Affairs. He is a former External Affairs Minister and former Chief Minister of Karnataka known for his statesman-like vision and administrative acumen during a career spanning more than six decades. pic.twitter.com/X73o7OLbQf

    — President of India (@rashtrapatibhvn) March 22, 2023 " class="align-text-top noRightClick twitterSection" data=" ">

ಇದನ್ನೂ ಓದಿ: ಈ ಬಾರಿಯೂ ಪ್ರತಿಪಕ್ಷಗಳ ನಾಯಕರಿಗೆ ಪದ್ಮದ ಗರಿ.. ಈವರೆಗೆ ಮೋದಿ ಸರ್ಕಾರ ಯಾವೆಲ್ಲ ಲೀಡರ್​​ಗಳಿಗೆ ಪ್ರಶಸ್ತಿ ಕೊಟ್ಟಿದೆ?

ಪದ್ಮ ವಿಭೂಷಣವನ್ನು ಅಸಾಧಾರಣ ಮತ್ತು ವಿಶಿಷ್ಟ ಸೇವೆಗಾಗಿ ನೀಡಲಾಗುತ್ತದೆ. ಉನ್ನತ ಶ್ರೇಣಿಯ ವಿಶಿಷ್ಟ ಸೇವೆಗಾಗಿ ಪದ್ಮಭೂಷಣ ಮತ್ತು ಯಾವುದೇ ಕ್ಷೇತ್ರದಲ್ಲಿ ವಿಶಿಷ್ಟ ಸೇವೆಗಾಗಿ ಪದ್ಮಶ್ರೀ ಪ್ರಶಸ್ತಿ ಕೊಟ್ಟು ಗೌರವಿಸಲಾಗುತ್ತದೆ. ಈ ಬಾರಿ ಆರು ಪದ್ಮವಿಭೂಷಣ, ಒಂಭತ್ತು ಪದ್ಮಭೂಷಣ ಮತ್ತು 91 ಪದ್ಮಶ್ರೀ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ. ಆದರೆ, ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ಭಾರತ ರತ್ನವನ್ನು 2019ರಿಂದ ಯಾರಿಗೂ ಘೋಷಣೆ ಮಾಡಿಲ್ಲ.

ಕರ್ನಾಟಕದ ಎಂಟು ಜನರಿಗೆ ಗೌರವ: ಈ ಬಾರಿ ಕರ್ನಾಟಕ ಜನರಿಗೆ ಪದ್ಮ ಪುರಸ್ಕಾರಗಳನ್ನು ಪ್ರಕಟಿಸಲಾಗಿದೆ. ಎಸ್​​ಎಂ ಕೃಷ್ಣ ಅವರಿಗೆ ಪದ್ಮವಿಭೂಷಣ ಪ್ರಕಟಿಸಿದ್ದರೆ, ಹಿರಿಯ ಸಾಹಿತಿ ಎಸ್​ಎಲ್​​ ಭೈರಪ್ಪ ಹಾಗೂ ಇನ್ಫೋಸಿಸ್ ಫೌಂಡೇಶನ್ ಮುಖ್ಯಸ್ಥೆ ಸುಧಾಮೂರ್ತಿ ಅವರಿಗೆ ಪದ್ಮಭೂಷಣ ಪ್ರಶಸ್ತಿ ಘೋಷಿಸಲಾಗಿದೆ. ಇದರ ಜೊತೆಗೆ ವಿಜ್ಞಾನ ಮತ್ತು ಇಂಜಿನಿಯರಿಂಗ್​ ವಿಭಾಗದಲ್ಲಿ ಖಾದರ್ ವಲ್ಲಿ ದುಡೇಕುಲಾ, ಕಲಾ ವಿಭಾಗದಲ್ಲಿ ರಾಣಿ ಮಾಚಯ್ಯ, ನಾಡೋಜ ಪಿಂಡಿಪನಹಳ್ಳಿ ಮುನಿವೆಂಕಟಪ್ಪ ಮತ್ತು ಶಾ ರಶೀದ್​ ಅಹ್ಮದ್ ಖಾದ್ರಿ ಹಾಗೂ ಪುರಾತತ್ವ ಕ್ಷೇತ್ರದಲ್ಲಿ ಎಸ್​.ಸುಬ್ಬರಾಮನ್​ ಅವರಿಗೆ ಪದ್ಮಶ್ರೀ ಪ್ರಶಸ್ತಿ ಪ್ರಕಟಿಸಲಾಗಿದೆ.

ಇದನ್ನೂ ಓದಿ: ಎಂಟು ಕನ್ನಡಿಗರಿಗೆ ಪದ್ಮ ಪುರಸ್ಕಾರ: ಎಸ್​ಎಂ ಕೃಷ್ಣಗೆ ಪದ್ಮವಿಭೂಷಣ, ಭೈರಪ್ಪ, ಸುಧಾಮೂರ್ತಿಗೆ ಪದ್ಮಭೂಷಣ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.