ETV Bharat / bharat

ಸನಾತನ ಧರ್ಮ ನಿಂದಿಸಿದರೆ ಪರಿಣಾಮ ಎದುರಿಸಬೇಕಾಗುತ್ತದೆ ಎಂಬುದಕ್ಕೆ ಈ ಚುನಾವಣೆಯೇ ಸಾಕ್ಷಿ: ವೆಂಕಟೇಶ್ ಪ್ರಸಾದ್ - ಸನಾತನ ಧರ್ಮ ಹೇಳಿಕೆ

Venkatesh Prasad X post on Election results: ತೆಲಂಗಾಣ, ಮಧ್ಯಪ್ರದೇಶ, ಛತ್ತೀಸ್‌ಗಢ ಮತ್ತು ರಾಜಸ್ಥಾನ ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶ ಹೊರಬೀಳುತ್ತಿದ್ದಂತೆ ಭಾರತದ ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಪ್ರತಿಕ್ರಿಯಿಸಿದ್ದಾರೆ.

venkatesh prasad
ವೆಂಕಟೇಶ್ ಪ್ರಸಾದ್
author img

By ETV Bharat Karnataka Team

Published : Dec 4, 2023, 8:10 AM IST

ನವದೆಹಲಿ: ಐದು ರಾಜ್ಯಗಳ ಚುನಾವಣಾ ಫಲಿತಾಂಶದ ಪೈಕಿ ನಿನ್ನೆ ನಾಲ್ಕು ರಾಜ್ಯಗಳ ಫಲಿತಾಂಶ ಹೊರಬಿದ್ದಿದೆ. ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್‌ಗಢದಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದು, ಸರ್ಕಾರ ರಚಿಸಲಿದೆ. ಹಾಗೆಯೇ, ತೆಲಂಗಾಣದಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನ ಗೆಲ್ಲುವ ಮೂಲಕ ಅಧಿಕಾರ ವಹಿಸಿಕೊಳ್ಳಲು ಸಜ್ಜಾಗಿದೆ. ಇದೀಗ ಸಾಮಾಜಿಕ ಜಾಲತಾಣ ಮಾಧ್ಯಮಗಳಲ್ಲಿ ಅನೇಕರು ಕಾಂಗ್ರೆಸ್ ಸೋಲಿಗೆ ಹಲವು ಕಾರಣಗಳನ್ನು ನೀಡುತ್ತಿದ್ದಾರೆ. ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಕೂಡ ಕಾಂಗ್ರೆಸ್‌ ಸೋಲಿಗೆ ಕಾರಣವೊಂದನ್ನು ನೀಡಿದ್ದಾರೆ.

ಚುನಾವಣಾ ಫಲಿತಾಂಶ ಹೊರಬೀಳುತ್ತಿದ್ದಂತೆ ಎಕ್ಸ್‌​ನಲ್ಲಿ ಪೋಸ್ಟ್​ ಮಾಡಿರುವ ವೆಂಕಟೇಶ್ ಪ್ರಸಾದ್, ಸನಾತನ ಧರ್ಮವನ್ನು ನಿಂದನೆ ಮಾಡಿದ ಪರಿಣಾಮ ಕಾಂಗ್ರೆಸ್ ನೆಲಕಚ್ಚಿದೆ ಎಂದಿದ್ದಾರೆ. "ಸನಾತನ ಧರ್ಮವನ್ನು ದುರುಪಯೋಗಪಡಿಸಿಕೊಂಡರೆ, ನಿಂದಿಸಿದರೆ ಪರಿಣಾಮ ಎದುರಿಸಬೇಕಾಗುತ್ತದೆ ಎಂಬುದಕ್ಕೆ ಈ ಚುನಾವಣೆಯೇ ನಿದರ್ಶನ. ಅಭೂತಪೂರ್ವ ಗೆಲುವು ದಾಖಲಿಸಿದ ಬಿಜೆಪಿಗೆ ಅಭಿನಂದನೆಗಳು. ಈ ಫಲಿತಾಂಶ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರ ನಾಯಕತ್ವಕ್ಕೆ ಹಿಡಿದ ಕನ್ನಡಿ. ತಳಮಟ್ಟದಲ್ಲಿ ಅದ್ಭುತ ಕೆಲಸ ಮಾಡಿದ ಪಕ್ಷದ ಕಾರ್ಯಕರ್ತರ ಶ್ರಮದ ಫಲ" ಎಂದು ಪೋಸ್ಟ್ ಮಾಡಿದ್ದಾರೆ.

  • Abusing Sanatana Dharma was bound to have it’s consequences .
    Many congratulations to the BJP for a landslide victory. Just another testimony of the amazing leadership of Prime Minister @narendramodi ji & @AmitShah & great work by the party cadre at grassroot levels…

    — Venkatesh Prasad (@venkateshprasad) December 3, 2023 " class="align-text-top noRightClick twitterSection" data=" ">

ಇದನ್ನೂ ಓದಿ: ರಾಜಸ್ಥಾನ, ಛತ್ತೀಸ್​ಗಢ, ಮಧ್ಯಪ್ರದೇಶದಲ್ಲಿ ಅರಳಿದ ಕಮಲ : ತೆಲಂಗಾಣದಲ್ಲಿ "ಕೈ" ಹಿಡಿದ ಮತದಾರ

ಈ ಹಿಂದೆ ಕಾಂಗ್ರೆಸ್​ ಮಿತ್ರ ಪಕ್ಷದ ಡಿಎಂಕೆ ಯುವನಾಯಕ ಉದಯನಿಧಿ ಸ್ಟಾಲಿನ್ ಅವರು ನೀಡಿದ್ದ ಸನಾತನ ಧರ್ಮದ ಕುರಿತಾದ ವಿವಾದಾತ್ಮಕ ಹೇಳಿಕೆ ಭಾರಿ ಸದ್ದು ಮಾಡಿತ್ತು. ಚೆನ್ನೈನಲ್ಲಿ ಆಯೋಜಿಸಲಾಗಿದ್ದ ಸನಾತನ ನಿರ್ಮೂಲನಾ ಕಾರ್ಯಕ್ರಮದಲ್ಲಿ ಸ್ಟಾಲಿನ್ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಸನಾತನ ಧರ್ಮವನ್ನು ಮಲೇರಿಯಾ, ಡೆಂಗ್ಯು, ಕೊರೊನಾಗೆ ಹೋಲಿಸಿದ್ದರು. ಈ ಧರ್ಮವು ಸಾಮಾಜಿಕ ನ್ಯಾಯ ಮತ್ತು ಸಮಾನತೆಗೆ ವಿರುದ್ಧವಾಗಿದ್ದು, ಅದನ್ನು ನಿರ್ಮೂಲನೆ ಮಾಡಬೇಕು ಎಂದು ಹೇಳಿದ್ದರು. ಇದು ದೊಡ್ಡಮಟ್ಟದಲ್ಲಿ ವಿವಾದ ಉಂಟುಮಾಡಿತ್ತು.

ಇದನ್ನೂ ಓದಿ: ನಾವು ಸೋಲಿನಿಂದ ಕುಗ್ಗುವುದಿಲ್ಲ, ಗೆಲುವಿನಿಂದ ಹಿಗ್ಗುವುದಿಲ್ಲ : ಸಿಎಂ ಸಿದ್ದರಾಮಯ್ಯ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.