ETV Bharat / bharat

ಪ್ರಧಾನಿ ಮೋದಿ ಸಲಹೆಗಾರರಾಗಿ ನಿವೃತ್ತ ಐಎಎಸ್​ ಅಧಿಕಾರಿ ಅಮಿತ್​ ಖರೆ ನೇಮಕ - ಅಮಿತ್​ ಖರೆ ನೇಮಕ

ಅತ್ಯಂತ ಸಮರ್ಥ ಅಧಿಕಾರಿಯಾಗಿ ಸೇವೆ ಸಲ್ಲಿಸಿರುವ ಅಮಿತ್ ಖರೆ ಇದೀಗ ಪ್ರಧಾನಿ ನರೇಂದ್ರ ಮೋದಿ ಅವರ ಸಲಹೆಗಾರರಾಗಿ ನೇಮಕಗೊಂಡಿದ್ದಾರೆ.

Amit Khare
Amit Khare
author img

By

Published : Oct 12, 2021, 7:38 PM IST

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಸಲಹೆಗಾರರಾಗಿ ನಿವೃತ್ತ ಐಎಎಸ್​ ಅಧಿಕಾರಿ ಅಮಿತ್​ ಖರೆ ನೇಮಕಗೊಂಡಿದ್ದಾರೆ. 1985ನೇ ಬ್ಯಾಚ್​​ನ ಐಎಎಸ್​​ ಅಧಿಕಾರಿಯಾಗಿದ್ದು, ಈಗಾಗಲೇ ಮಾಹಿತಿ ಮತ್ತು ಪ್ರಸಾರ ಇಲಾಖೆ ಮಾಜಿ ಕಾರ್ಯದರ್ಶಿಯಾಗಿದ್ದರು. ಈ ಹಿಂದೆ ಉನ್ನತ ಶಿಕ್ಷಣ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿರುವ ಅವರು ಸೆಪ್ಟೆಂಬರ್​ 30ರಂದು ನಿವೃತ್ತಿ ಪಡೆದುಕೊಂಡಿದ್ದರು.

ಅಮಿತ್​​ ಖರೆ ಅವರನ್ನ ಪ್ರಧಾನಿ ನರೇಂದ್ರ ಮೋದಿಯವರ ಸಲಹೆಗಾರರನ್ನಾಗಿ ನೇಮಕ ಮಾಡಲು ಕ್ಯಾಬಿನೆಟ್​​ ನೇಮಕಾತಿ ಸಮಿತಿ ಅನುಮೋದನೆ ನೀಡಿದ್ದು, ಪ್ರಧಾನಿ ಕಚೇರಿಯಲ್ಲಿ ಕಾರ್ಯ ನಿರ್ವಹಿಸಲಿದ್ದಾರೆ. ಮುಂದಿನ ಎರಡು ವರ್ಷಗಳ ಅವಧಿಗೆ ನೇಮಕಗೊಂಡಿದ್ದು, ಮುಂದಿನ ಆದೇಶದವರೆಗೂ ಯಾವುದೇ ಬದಲಾವಣೆ ಇರುವುದಿಲ್ಲ ಎಂದಿದ್ದಾರೆ.

ಇದನ್ನೂ ಓದಿರಿ: ಮಗಳ ಮೇಲೆ ಅತ್ಯಾಚಾರವೆಸಗಿ ವೇಶ್ಯಾವಾಟಿಕೆಗೆ ತಳ್ಳಿದ ತಂದೆ.. SP ಜಿಲ್ಲಾಧ್ಯಕ್ಷ ಸೇರಿ 28 ಮಂದಿ ವಿರುದ್ಧ FIR

ಇವರಿಗೆ ಭಾರತ ಸರ್ಕಾರದ ಕಾರ್ಯದರ್ಶಿ ದರ್ಜೆಯ ಸ್ಥಾನಮಾನ ನೀಡಲು ನಿರ್ಧರಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ನಿರ್ದೇಶನದಲ್ಲಿ ಅಮಿತ್ ಖರೆ, ರಾಷ್ಟ್ರೀಯ ಶಿಕ್ಷಣ ನೀತಿ 2020 ಮುನ್ನೆಡೆಸಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.