ಚೆನ್ನೈ (ತಮಿಳುನಾಡು): ಕಳೆದ ವರ್ಷ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ 2009ರ ಕರ್ನಾಟಕ ಬ್ಯಾಚ್ನ ಐಎಎಸ್ ಅಧಿಕಾರಿ ಹಾಗೂ ದಕ್ಷಿಣ ಕನ್ನಡದ ಮಾಜಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಇಂದು ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ.
ತಮಿಳುನಾಡಿನ ಕಾಂಗ್ರೆಸ್ನ ರಾಜ್ಯಾಧ್ಯಕ್ಷರಾದ ಕೆ.ಆಳಗಿರಿ, ತಮಿಳುನಾಡಿಗೆ ಎಐಸಿಸಿ ಉಸ್ತುವಾರಿಯಾದ ದಿನೇಶ್ ಗುಂಡೂರಾವ್ ಹಾಗೂ ಎಐಸಿಸಿ ಕಾರ್ಯದರ್ಶಿಗಳು ಹಾಗೂ ಹಲವು ಮುಖಂಡರ ನೇತೃತ್ವದಲ್ಲಿ ಪಕ್ಷದ ಪ್ರಧಾನ ಕಚೇರಿ ಸತ್ಯಮೂರ್ತಿ ಭವನದಲ್ಲಿ ಸಸಿಕಾಂತ್ ಸೆಂಥಿಲ್ ಕಾಂಗ್ರೆಸ್‌ಗೆ ಸೇರ್ಪಡೆಯಾದರು.
-
I welcomed Former IAS officer
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) November 9, 2020 " class="align-text-top noRightClick twitterSection" data="
Sri #SasikanthSenthil into the @INCIndia family.
His joining will give us great strength and inspiration not just in TN but across the nation.
@INCTamilNadu President @KS_Alagiri & other senior leaders were present. pic.twitter.com/g4vmYvpvDH
">I welcomed Former IAS officer
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) November 9, 2020
Sri #SasikanthSenthil into the @INCIndia family.
His joining will give us great strength and inspiration not just in TN but across the nation.
@INCTamilNadu President @KS_Alagiri & other senior leaders were present. pic.twitter.com/g4vmYvpvDHI welcomed Former IAS officer
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) November 9, 2020
Sri #SasikanthSenthil into the @INCIndia family.
His joining will give us great strength and inspiration not just in TN but across the nation.
@INCTamilNadu President @KS_Alagiri & other senior leaders were present. pic.twitter.com/g4vmYvpvDH
41 ವರ್ಷದ ಸಸಿಕಾಂತ್ ಸೆಂಧಿಲ್ 2009ರಲ್ಲಿ ಕರ್ನಾಟಕ ಕೇಡರ್ನಲ್ಲಿ ಭಾರತೀಯ ನಾಗರಿಕ ಸೇವೆಗೆ ಸೇರ್ಪಡೆಯಾಗಿದ್ದರು. ಪ್ರಜಾಪ್ರಭುತ್ವದ ಮೌಲ್ಯಗಳು ಕುಸಿಯುತ್ತಿದ್ದು, ಈ ವೇಳೆ ಕರ್ತವ್ಯ ನಿರ್ವಹಿಸುವುದು ಸರಿಯಲ್ಲ ಎಂದು ಆರೋಪಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಸಂವಿಧಾನದ ಸಿದ್ಧಾಂತಗಳಿಗೆ ಬದ್ಧವಾಗಿರುವ ಕಾಂಗ್ರೆಸ್ ಪಕ್ಷವನ್ನು ಸೇರುವುದಾಗಿ ಸಸಿಕಾಂತ್ ಸೆಂಥಿಲ್ ಭಾನುವಾರ ಹೇಳಿದ್ದು, ಇಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.