ETV Bharat / bharat

ಲಂಚ ಪ್ರಕರಣದ ತನಿಖೆಗೆ ತಡೆ ನೀಡಿದ ಸುಪ್ರೀಂಕೋರ್ಟ್​.. ಬಿಎಸ್​​ವೈಗೆ ತಾತ್ಕಾಲಿಕ ರಿಲೀಫ್​

ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸುಪ್ರೀಂ ಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಿದ್ದು, ತನಿಖೆಗೆ ತಡೆ ನೀಡಿರುವ ಸುಪ್ರೀಂಕೋರ್ಟ್​, ಪ್ರತಿವಾದಿಗಳಿಗೆ ನೋಟಿಸ್​ ನೀಡಿದೆ.

former Karnataka CM BS Yediyurappa  Karnataka High Court order  Notice issued by Supreme court  ಪ್ರತಿವಾದಿಗಳಿಗೆ ನೋಟಿಸ್​ ಜಾರಿ  ಸುಪ್ರೀಂ ಮೆಟ್ಟಿಲೇರಿದ ಬಿಎಸ್​ವೈ  ಕರ್ನಾಟಕ ಹೈಕೋರ್ಟ್ ಆದೇಶ  ನ್ಯಾಯಾಲಯ ಪ್ರತಿವಾದಿಗಳಿಗೆ ನೋಟಿಸ್​
ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಬಿಎಸ್​ವೈ
author img

By

Published : Sep 23, 2022, 1:00 PM IST

Updated : Sep 23, 2022, 1:18 PM IST

ನವದೆಹಲಿ: 12 ಕೋಟಿ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಅಸ್ತು ಎಂದಿರುವ ಕರ್ನಾಟಕ ಹೈಕೋರ್ಟ್​ನ ತೀರ್ಪು ಪ್ರಶ್ನಿಸಿ ಮಾಜಿ ಸಿಎಂ ಬಿಎಸ್​ವೈ ಸುಪ್ರೀಂಕೋರ್ಟ್​ ಮೆಟ್ಟಿಲು ಏರಿದ್ದು, ಇಂದು ಆ ಬಗೆಗಿನ ಅರ್ಜಿ ವಿಚಾರಣೆ ನಡೆಸಿ ಪ್ರಕರಣದ ತನಿಖೆಗೆ ತಡೆ ನೀಡಿದ್ದು, ಪ್ರತಿವಾದಿಗಳಿಗೆ ನೋಟಿಸ್​ ಜಾರಿ ಮಾಡಿದೆ.

ಮೊನ್ನೆಯಷ್ಟೇ ಸುಪ್ರೀಂಕೋರ್ಟ್​​ನಲ್ಲಿ ಬಿಎಸ್​ವೈ ಹಾಗೂ ಅವರ ಕುಟುಂಬದ ವಿರುದ್ಧ ಪ್ರಕರಣದ ವಿಚಾರಣೆಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ ವಿಚಾರಣೆ ನಡೆಸುವಂತೆ ಲೋಕಾಯುಕ್ತರಿಗೆ ಸೂಚನೆ ನೀಡಿತ್ತು. ಕೆಳ ನ್ಯಾಯಾಲಯದ ಆದೇಶದಂತೆ ಲೋಕಾಯುಕ್ತದಲ್ಲಿ ಎಫ್​ಎಆರ್​ ಕೂಡಾ ದಾಖಲಾಗಿತ್ತು.

ಈ ಹಿನ್ನೆಲೆ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ಸುಪ್ರೀಂಕೋರ್ಟ್​ನಲ್ಲಿ ಅರ್ಜಿ ಸಲ್ಲಿಕೆ ಮಾಡಿದ್ದು, ಈ ಅರ್ಜಿಯ ವಿಚಾರಣೆ ಕೈಗೆತ್ತಿಕೊಂಡಿರುವ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಮತ್ತು ಹಿಮಾ ಕೊಹ್ಲಿ ಅವರನ್ನೊಳಗೊಂಡ ದ್ವಿಸದಸ್ಯ ಪೀಠ ಹೈಕೋರ್ಟ್​​ ತೀರ್ಪಿಗೆ ತಡೆ ನೀಡಿ ಪ್ರತಿವಾದಿಗಳಿಗೆ ನೋಟಿಸ್​ ಜಾರಿ ಮಾಡಿದೆ.

ಪ್ರಕರಣದ ಹಿನ್ನೆಲೆ: ಯಡಿಯೂರಪ್ಪ ಸಿಎಂ ಆಗಿದ್ದ ವೇಳೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಸಂಬಂಧಿಸಿದ ಗುತ್ತಿಗೆ ನೀಡುವಾಗ ಭ್ರಷ್ಟಾಚಾರ ಆಗಿದೆ ಎಂದು ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಹಾಂ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು. ಆದರೆ, ರಾಜ್ಯಪಾಲರು ಪೂರ್ವಾನುಮತಿ ನೀಡದ ಕಾರಣ ದೂರು ವಜಾಗೊಳಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿತ್ತು. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ಟಿ.ಜೆ. ಅಬ್ರಹಾಂ ಹೈಕೋರ್ಟ್ ಮೆಟ್ಟಿಲೇರಿದ್ದರು.

ದೂರನ್ನು ಮರುಪರಿಶೀಲಿಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹೈಕೋರ್ಟ್ ಸೂಚಿಸಿತ್ತು. ಬಳಿಕ ತನಿಖೆ ನಡೆಸಿ ವರದಿ ನೀಡಲು ಲೋಕಾಯುಕ್ತಕ್ಕೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ತನಿಖೆಗೆ ಮುಂದಾಗಿರುವ ಲೋಕಾಯುಕ್ತ ಪೊಲೀಸರು, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಅವರ ಪುತ್ರ ಬಿ.ವೈ ವಿಜಯೇಂದ್ರ ಹಾಗೂ ಮತ್ತಿತರರ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.

ಕರ್ನಾಟಕ ಹೈಕೋರ್ಟ್​ ಆದೇಶವನ್ನು ಪ್ರಶ್ನಿಸಿ ಯಡಿಯೂರಪ್ಪ ಸುಪ್ರೀಂನಲ್ಲಿ ಅರ್ಜಿ ಸಲ್ಲಿಸಿದ್ದರು. ನಮ್ಮ ಪರವಾದ ವಕೀಲರು ಸುಪ್ರೀಂಕೋರ್ಟ್​ನಲ್ಲಿ ವಾದ ಮಂಡಿಸುವುದಕ್ಕಾಗಿ ಸಿದ್ಧರಾಗುತ್ತಿದ್ದಾರೆ ಎಂದು ಟಿ.ಜೆ. ಅಬ್ರಾಹಂ 'ಈಟಿವಿ ಭಾರತ'ಕ್ಕೆ ವಿವರಿಸಿದ್ದರು. ಈಗ ಈ ಪ್ರಕರಣದ ವಿಚಾರಣೆ ನಡೆಯುತ್ತಿದ್ದು, ಸುಪ್ರೀಂ ಪ್ರತಿವಾದಿಗಳಿಗೆ ನೋಟಿಸ್​ ಜಾರಿ ಮಾಡಿದೆ.

ಓದಿ: ಭ್ರಷ್ಟಾಚಾರ ಪ್ರಕರಣ: ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಬಿಎಸ್​ವೈ

Last Updated : Sep 23, 2022, 1:18 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.