ಕೊರಾಪುಟ್(ಒಡಿಶಾ): ಇಲ್ಲಿನ ನಬರಂಗಪುರ ಲೋಕಸಭೆ ಕ್ಷೇತ್ರದ ಮಾಜಿ ಸಂಸದ ಹಾಗೂ ಕಾಂಗ್ರೆಸ್ ಪಕ್ಷದ ರಾಜ್ಯ ಕಾರ್ಯಾಧ್ಯಕ್ಷ ಪ್ರದೀಪ್ ಮಝಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಬರೆದ ಪತ್ರದಲ್ಲಿ, ವಿಶ್ವಾಸಾರ್ಹತೆ ಕಳೆದುಕೊಂಡ ಹಿನ್ನೆಲೆಯಲ್ಲಿ ಪಕ್ಷ ತೊರೆಯುತ್ತಿರುವುದಾಗಿ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಜನಸೇವೆ ಮಾಡಲು ಸಾಕಷ್ಟು ಅವಕಾಶ ಒದಗಿಸಿಕೊಟ್ಟ ಪಕ್ಷಕ್ಕೆ ಕೃತಜ್ಞತೆ ವ್ಯಕ್ತಪಡಿಸಿದ ಮಝಿ, ಜನರ ಸೇವೆ ಮಾಡುವಲ್ಲಿ ಕಾಂಗ್ರೆಸ್ ಸಿದ್ಧಾಂತವನ್ನು ಅನುಸರಿಸುವಂತೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಲಕ್ಷ್ಮಿಪುರ ಕಾಂಗ್ರೆಸ್ ಶಾಸಕ ಕೈಲಾಶ್ ಕುಲೇಶಿಕಾ ಬುಧವಾರ ಆಡಳಿತಾರೂಢ ಬಿಜೆಡಿ ಸೇರಿದ ಎರಡು ದಿನಗಳ ನಂತರ ಮಝಿ ಕಾಂಗ್ರೆಸ್‌ಗೆ ವಿದಾಯ ಹೇಳಿದ್ದಾರೆ. ಮಾಜಿ ಶೀಘ್ರದಲ್ಲೇ ಆಡಳಿತಾರೂಢ ಬಿಜೆಡಿಗೆ ಸೇರುವ ಊಹಾಪೋಹಗಳು ಹಬ್ಬಿವೆ.
ಮಝಿ ಮತ್ತು ಅವರ ಆಪ್ತ ಸಹಾಯಕ ಕುಲೇಶಿಕಾ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದರು. ಅಂತಹ ಬಂಡುಕೋರರು ಬಿಟ್ಟು ಹೋಗಿದ್ದು ಪಕ್ಷಕ್ಕೆ ಒಳ್ಳೆಯದು ಎಂದು ಕಾಂಗ್ರೆಸ್ ಮುಖಂಡ ಬಹಿನಿಪತಿ ಹೇಳಿದ್ದಾರೆ.
2009ರಲ್ಲಿ ನಬರಂಗಪುರ ಲೋಕಸಭೆ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಕಣಕ್ಕಿಳಿದಿದ್ದರು. ಬಳಿಕ 2014 ಮತ್ತು 2019ರ ಸಾರ್ವತ್ರಿಕ ಚುನಾವಣೆಗಳಲ್ಲಿ ಬಿಜೆಡಿಯಿಂದ ಸ್ಪರ್ಧಿಸಿ ಸೋಲು ಅನುಭವಿಸಿದ್ದರು. ನಂತರ ಅವರನ್ನು ಒಡಿಶಾ ಯುವ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಮಾಡಲಾಗಿದೆ. ಪ್ರಸ್ತುತ ರಾಜ್ಯ ಕಾಂಗ್ರೆಸ್ನ ಕಾರ್ಯಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದರು.