ನವದೆಹಲಿ: ಪಂಚರಾಜ್ಯಗಳ ಚುನಾವಣೆ ಹೊತ್ತಲ್ಲೇ ಕಾಂಗ್ರೆಸ್‌ಗೆ ಭಾರೀ ಹೊಡೆತ ಬಿದ್ದಿದೆ. 46 ವರ್ಷಗಳ ಸುದೀರ್ಘ ಒಡನಾಟದ ನಂತರ ಕೇಂದ್ರದ ಮಾಜಿ ಕಾನೂನು ಸಚಿವ ಅಶ್ವನಿ ಕುಮಾರ್ ಮಂಗಳವಾರ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ತಮ್ಮ ರಾಜೀನಾಮೆ ಪತ್ರವನ್ನು ರವಾನಿಸಿದ್ದಾರೆ.
'ಪ್ರಸ್ತುತ ಪರಿಸ್ಥಿತಿ ಮತ್ತು ನನ್ನ ಘನತೆ ಗಮನದಲ್ಲಿಟ್ಟುಕೊಂಡು, ಪಕ್ಷದ ಹೊರಗಿನ ದೊಡ್ಡ ರಾಷ್ಟ್ರೀಯ ಸಮಸ್ಯೆಗಳ ವಿರುದ್ಧ ನಾನು ಉತ್ತಮವಾಗಿ ಸೇವೆ ಸಲ್ಲಿಸುತ್ತೇನೆ ಎಂದು ತೀರ್ಮಾನಿಸಿ ಪಕ್ಷ ತೊರೆಯುತ್ತಿದ್ದೇನೆ ಎಂದು ಹೇಳಿದ್ದಾರೆ.
ನಮ್ಮ ಸ್ವಾತಂತ್ರ್ಯ ಹೋರಾಟಗಾರರು ರೂಪಿಸಿದ ಉದಾರ ಪ್ರಜಾಪ್ರಭುತ್ವದ ಭರವಸೆಯ ಆಧಾರದ ಮೇಲೆ ಪರಿವರ್ತನೆಯ ನಾಯಕತ್ವದ ಕಲ್ಪನೆಯಿಂದ ಪ್ರೇರಿತವಾದ ಸಾರ್ವಜನಿಕ ಸಮಸ್ಯೆಗಳನ್ನು ಸಕ್ರಿಯವಾಗಿ ಮುಂದುವರಿಸಲು ಎದುರು ನೋಡುತ್ತೇನೆ ಎಂದು ಅವರು ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
46 ವರ್ಷಗಳ ಸುದೀರ್ಘ ಒಡನಾಟದ ನಂತರ ನಾನು ಪಕ್ಷವನ್ನು ತೊರೆಯುತ್ತಿದ್ದೇನೆ. ಪಕ್ಷ ನನಗೆ ನೀಡಿದ ಎಲ್ಲಾ ಸ್ಥಾನಮಾನ, ಗೌರವಕ್ಕೆ ನಾನು ಆಭಾರಿಯಾಗಿದ್ದೇನೆ. ನಿಮಗೆ ದೇವರು ಆರೋಗ್ಯ, ಆಯಸ್ಸು ನೀಡಲಿ ಎಂದು ಕೋರಿದ್ದಾರೆ.
ಓದಿ: ರೈತನಿಗೆ ಸಿಗದ ಪರಿಹಾರ : ಕಲಬುರಗಿ ಡಿಸಿ ಕಾರು ಜಪ್ತಿಗೆ ಕೋರ್ಟ್ ಆದೇಶ